Kirandeep Kaur: ವಾರಿಸ್ ದೆ ಪಂಜಾಬ್ ಮುಖ್ಯಸ್ಥ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ವಿಮಾನ ಪ್ರಯಾಣಕ್ಕೆ ತಡೆ, ಅಧಿಕಾರಿಗಳಿಂದ ವಿಚಾರಣೆ
ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಪಂಜಾಬ್ ಪೊಲೀಸರು ಕಿರಣ್‌ದೀಪ್ ಕೌರ್ನ್ನು ತಡೆದಿದ್ದಾರೆ.
ವಾರಿಸ್ ದೆ ಪಂಜಾಬ್ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅವರ ಪತ್ನಿ ಕಿರಣ್‌ದೀಪ್ ಕೌರ್ (Kirandeep Kaur) ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಆಕೆಯನ್ನು ತಡೆದಿದ್ದು ವಲಸೆ ಇಲಾಖೆ ವಿಚಾರಣೆ ನಡೆಸುತ್ತಿದೆ. ಈ ಹಿಂದೆ ಆಕೆಯನ್ನು ಬಂಧಿಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿತ್ತು.ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣದೀಪ್ ಕೌರ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಪಂಜಾಬ್ ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಆದರೆ ವಲಸೆ ಇಲಾಖೆಯಿಂದ ವಿಚಾರಣೆ ನಡೆಸಲಾಗುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ.
UPDATE | Amritpal Singh’s wife Kirandeep Kaur has not been detained yet clarify Punjab Police source but is being questioned by the Immigration department, more details awaited. https://t.co/kQO3qPhzy8
— ANI (@ANI) April 20, 2023
ಇತ್ತೀಚೆಗೆ ದಿ ವೀಕ್ ಗೆ ನೀಡಿದ ಸಂದರ್ಶನದಲ್ಲಿ ತನಗೆ ಅಮೃತ್ ಪಾಲ್ ಸಿಂಗ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಿರಣ್ ದೀಪ್ ಹೇಳಿದ್ದರು. ಆದಾಗ್ಯೂ ಅಮೃತ್ ಪಾಲ್ ಸಿಂಗ್ ನ ಎಲ್ಲ ಚಟುವಟಿಕೆಗಳನ್ನು ಸಮರ್ಥಿಸಿಕೊಂಡ ಕೌರ್, ಆತನನ್ನು ಪೊಲೀಸರು ಅಕ್ರಮವಾಗಿ ಬಂಧಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ನಾನು ಅವರನ್ನು ಬಿಟ್ಟುಕೊಡುವುದಿಲ್ಲ. ಅವನ ಜತೆ ಯಾವುದೇ ಸಂಪರ್ಕ ಇಲ್ಲ. ಆತ ಮನೆಗೆ ಸುರಕ್ಷಿತವಾಗಿ ಬರಲಿ ಎಂದು ನಾನು ಬಯಸುತ್ತಿದ್ದೇನೆ ಎಂದು ಅವರು ಹೇಳಿದ್ದರು.
ಇದನ್ನೂ ಓದಿ: Global Buddhist Summit: ಭಾರತವು ಜಗತ್ತಿಗೆ ಯುದ್ಧವನ್ನು ನೀಡಿಲ್ಲ, ಬುದ್ಧನ ಆದರ್ಶಗಳನ್ನು ನೀಡಿದೆ: ಮೋದಿ
ಆಕೆಯನ್ನು ವಲಸೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದೆ ಎಂದು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಪ್ರಾಥಮಿಕ ಮಾಧ್ಯಮ ವರದಿಗಳ ಪ್ರಕಾರ, ಆಕೆಯ ಮೇಲೆ ಯಾವುದೇ ಪ್ರಕರಣಗಳಿಲ್ಲ. ಅಮೃತಪಾಲ್ ಸಿಂಗ್ ಪತ್ತೆಗಾಗಿ ಹುಡುಕಾಟ ಪ್ರಾರಂಭವಾದಾಗಿನಿಂದ ಕೌರ್ ಪೂರ್ವಜರ ಹಳ್ಳಿಯಲ್ಲಿ ನೆಲೆಸಿದ್ದಾಳೆ. ಕೌರ್ ಯುಕೆ ಪ್ರಜೆಯಾಗಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:50 pm, Thu, 20 April 23