Watch ಆಪರೇಷನ್ ಬ್ಲೂಸ್ಟಾರ್​​ನ 38ನೇ ವಾರ್ಷಿಕೋತ್ಸವ ವೇಳೆ ಸ್ವರ್ಣ ಮಂದಿರದಲ್ಲಿ ಖಲಿಸ್ತಾನ್ ಪರ ಘೋಷಣೆ

Operation Bluestar ಹಲವಾರು ಯುವಕರು ಖಲಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಬರೆದಿದ್ದ ಪ್ಲೆಕಾರ್ಡ್ ಹಿಡಿದಿದ್ದರು. ಹತ್ಯೆಯಾದ ಪ್ರತ್ಯೇಕತಾವಾದಿ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಚಿತ್ರವಿರುವ ಟೀ ಶರ್ಟ್‌ಗಳನ್ನು ಅವರು ಧರಿಸಿದ್ದರು

Watch ಆಪರೇಷನ್ ಬ್ಲೂಸ್ಟಾರ್​​ನ 38ನೇ ವಾರ್ಷಿಕೋತ್ಸವ ವೇಳೆ ಸ್ವರ್ಣ ಮಂದಿರದಲ್ಲಿ ಖಲಿಸ್ತಾನ್ ಪರ ಘೋಷಣೆ
ಸಿಖ್ ಸಂಘಟನೆಗಳು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 06, 2022 | 2:12 PM

ಅಮೃತ್​​ಸರ್: ಆಪರೇಷನ್ ಬ್ಲೂಸ್ಟಾರ್‌ನ (Operation Bluestar) 38 ನೇ ವಾರ್ಷಿಕೋತ್ಸವದಂದು ಗೋಲ್ಡನ್ ಟೆಂಪಲ್‌ನಲ್ಲಿ (Golden Temple) ತೀವ್ರಗಾಮಿ ಸಿಖ್ ಸಂಘಟನೆಗಳು ಮತ್ತು ಶಿರೋಮಣಿ ಅಕಾಲಿದಳ (ಅಮೃತಸರ) ಬೆಂಬಲಿಗರು ಖಲಿಸ್ತಾನ್ ಪರ (Pro-Khalistan) ಘೋಷಣೆಗಳನ್ನು ಕೂಗಿದ್ದಾರೆ. ಸಿಖ್ಖರ ಪ್ರಸಿದ್ಧ ಮಂದಿರವಾದ ಅಕಾಲ್ ತಖ್ತ್ ಬಳಿಯ ಗೋಲ್ಡನ್ ಟೆಂಪಲ್‌ನ ಆವರಣವು ಖಲಿಸ್ತಾನ್ ಪರ ಘೋಷಣೆಗಳೊಂದಿಗೆ ಪ್ರತಿಧ್ವನಿಸಿತು. ಹಲವಾರು ಯುವಕರು ಖಾಲಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಬರೆದಿದ್ದ ಪ್ಲೆಕಾರ್ಡ್ ಹಿಡಿದಿದ್ದರು. ಹತ್ಯೆಯಾದ ಪ್ರತ್ಯೇಕತಾವಾದಿ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಚಿತ್ರವಿರುವ ಟೀ ಶರ್ಟ್‌ಗಳನ್ನು ಅವರು ಧರಿಸಿದ್ದರು. ಸ್ಥಳದಲ್ಲಿದ್ದ ಮಾಜಿ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ ನೇತೃತ್ವದ ಶಿರೋಮಣಿ ಅಕಾಲಿದಳ (ಅಮೃತಸರ) ಸಂಘಟನೆಯ ಕಾರ್ಯಕರ್ತರು ಸಹ ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ್ದಾರೆ. ಅವರು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯನ್ನು ಪ್ರಸ್ತಾಪಿಸಿದ್ದು ಕುಟುಂಬಕ್ಕೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದರು. 1984 ರಲ್ಲಿ ಗೋಲ್ಡನ್ ಟೆಂಪಲ್‌ನಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ಕಾರ್ಯಾಚರಣೆಯಾಗಿದೆ ಆಪರೇಷನ್ ಬ್ಲೂಸ್ಟಾರ್. ಕಾರ್ಯಕ್ರಮವು ಸುಗಮವಾಗಿ ಸಾಗುವುದನ್ನು ಖಚಿತಪಡಿಸಿಕೊಳ್ಳಲು ಅಮೃತಸರದಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಿಖ್ ಸಮುದಾಯಕ್ಕೆ ನೀಡಿದ ಸಂದೇಶದಲ್ಲಿ ಅಕಲ್ ತಖ್ತ್‌ನ ಜತೇದಾರ್ ಜ್ಞಾನಿ ಹರ್‌ಪ್ರೀತ್ ಸಿಂಗ್, ಸಿಖ್ ಧರ್ಮ ಪ್ರಚಾರಕ್ಕಾಗಿ ಸಿಖ್ ಬೋಧಕರು ಮತ್ತು ವಿದ್ವಾಂಸರು ಗಡಿ ಪ್ರದೇಶಗಳಿಗೆ ಭೇಟಿ ನೀಡಬೇಕು ಮತ್ತು ಶ್ರೀಮಂತ ಸಿಖ್ ತತ್ವಗಳು ಮತ್ತು ಇತಿಹಾಸದ ಬಗ್ಗೆ ಯುವಕರಿಗೆ ತಿಳಿಸಬೇಕಾಗಿದೆ ಎಂದಿದ್ದಾರೆ.

ಹಲವಾರು ಯುವಕರನ್ನು ಕಾಡುತ್ತಿರುವ ಮಾದಕ ವಸ್ತುಗಳ ಹಾವಳಿಯ ವಿರುದ್ಧ ಹೋರಾಡುವ ಅಗತ್ಯತೆಯ ಬಗ್ಗೆಯೂ ಅವರು ಮಾತನಾಡಿದರು.

ಸಿಖ್ಖರ ಅತ್ಯುನ್ನತ ಧಾರ್ಮಿಕ ಸಂಸ್ಥೆಯಾದ ಶಿರೋಮಣಿ ಗುರುದ್ವಾರ ಪರ್ಬಂಧಕ್ ಕಮಿಟಿ (SGPC) ಗುರು ಗ್ರಂಥ ಸಾಹಿಬ್‌ನ ‘ಸರೂಪ್’ (ಸಂಪುಟ) ಅನ್ನು ಪ್ರದರ್ಶಿಸಿತು. ಅಂದು ಗರ್ಭಗುಡಿಯಲ್ಲಿ ಸ್ಥಾಪಿಸಲಾಗಿದ್ದ ‘ಸರೂಪ್’ ಮೇಲೆ 1984ರಲ್ಲಿ ಸೇನಾ ಕಾರ್ಯಾಚರಣೆ ವೇಳೆ ಗುಂಡು ತಾಗಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 6 June 22

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ