ಸಮಸ್ಯೆ ಇರೋದು ಇವಿಎಂನಲ್ಲಲ್ಲ, ಕಾಂಗ್ರೆಸ್​ನ ಭ್ರಷ್ಟ ಮನೋಭಾವವೇ ಸಮಸ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ತರಾಟೆ

Union minister Dharmendra Pradhan attacks Congress on EVM issue: ಇವಿಎಂ ಬದಲು ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ಆಗಬೇಕು ಎನ್ನುವ ಕಾಂಗ್ರೆಸ್ ಒತ್ತಾಯಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್​ನ ಬಾಲಿಶತನ ಮತ್ತು ಹತಾಶೆಯನ್ನು ಇದು ತೋರಿಸುತ್ತೆ. ಸಮಸ್ಯೆ ಇರುವುದು ಇವಿಎಂಗಳಲ್ಲಲ್ಲ, ಅದರ ಭ್ರಷ್ಟ ಮನೋಭಾಗದಲ್ಲಿ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಸಮಸ್ಯೆ ಇರೋದು ಇವಿಎಂನಲ್ಲಲ್ಲ, ಕಾಂಗ್ರೆಸ್​ನ ಭ್ರಷ್ಟ ಮನೋಭಾವವೇ ಸಮಸ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ತರಾಟೆ
ಇವಿಎಂ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2024 | 10:54 PM

ನವದೆಹಲಿ, ನವೆಂಬರ್ 27: ಇವಿಎಂ ಬದಲು ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಒತ್ತಾಯಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು ನೀಡಿದ್ದಾರೆ. ‘ಕಾಂಗ್ರೆಸ್ ಪಕ್ಷಕ್ಕೆ ಮತಯಂತ್ರ ಬದಲು ಮತಪತ್ರಗಳ ಮೂಲಕ ಚುನಾವಣೆ ಆಗಬೇಕಂತೆ. ಅದರ ಬಾಲಿಶತನ ಮತ್ತು ಚುನಾವಣಾ ಸೋಲುಗಳ ಹತಾಶೆಯನ್ನು ಇದು ತೋರಿಸುತ್ತದೆ. ಸಮಸ್ಯೆ ಇರುವುದು ಇವಿಎಂಗಳಲ್ಲ, ಕಾಂಗ್ರೆಸ್​ನ ಭ್ರಷ್ಟ ಮನೋಭಾಗದಲ್ಲಿ ಎಂದು ಧರ್ಮೇಂದ್ರ ಪ್ರಧಾನ್ ತಮ್ಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬ್ಯಾಲಟ್ ಪೇಪರ್​ಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದಾಗ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಆಕ್ಷೇಪಿಸುತ್ತಿದ್ದರು. ಇವತ್ತು ಕಾಂಗ್ರೆಸ್ ಪಕ್ಷ ಸೋಲುತ್ತಿರುವಾಗ ಪಕ್ಷದ ಯುವರಾಜನಿಗೆ ಇವಿಎಂಗಳು ಸಮಸ್ಯೆಯಾಗಿ ಕಾಣುತ್ತಿವೆ ಎಂದು ಬಿಜೆಪಿ ನಾಯಕ ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಎಂ ರೇಸ್​ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ

‘ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಪಕ್ಷದ ಕಾರ್ಯತಂತ್ರ ಇರುವ ಬದಲು, ಸೋಲಿನ ಹೊಣೆಯನ್ನು ಇವಿಎಂ ಮೇಲೆ ಹೇಗೆ ಹಾಕುವುದು ಎಂದು ಯೋಜಿಸುತ್ತದೆ. ಈಗ ಇವಿಎಂಗಳನ್ನು ದೂಷಿಸುವ ಹೊಣೆಯನ್ನು ಮಲ್ಲಿಕಾರ್ಜುನ ಖರ್ಗೆಗೆ ವಹಿಸಿಕೊಟ್ಟಿದ್ದಾರೆ…’ ಎಂದಿದ್ದಾರೆ.

‘ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋತಾಗ ಚುನಾವಣಾ ಆಯೋಗ ಮತ್ತು ಇವಿಎಂ ಅನ್ನು ದೂಷಿಸುತ್ತದೆ. ಪ್ರಜಾತಂತ್ರ ಅಪಾಯದಲ್ಲಿದೆ ಎಂದು ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ಹಾಗೂ ಅದರ ಬಳಗಕ್ಕೆ ದೇಶದ ಪ್ರಜಾತಂತ್ರದ ಅಸ್ತಿತ್ವವು ಪ್ರಜಾ ಮತದಾನದಿಂದಲ್ಲ, ಬದಲಾಗಿ ಕಾಂಗ್ರೆಸ್​ನ ಗೆಲುವು ಅಥವಾ ಸೋಲಿನ ಮೇಲೆ ನಿರ್ಧಾರವಾಗುತ್ತದೆ. ಇದು ಜನಾದೇಶಕ್ಕೆ ತೋರುವ ಅಗೌರವವಾಗಿದೆ. ವಾಸ್ತವದ ಸಂಗತಿ ಎಂದರೆ ಜನರು ಕಾಂಗ್ರೆಸ್ ಹಾಗು ರಾಹುಲ್ ಗಾಂಧಿಯನ್ನು ಬಾರಿ ಬಾರಿ ಸೋಲಿಸುತ್ತಿದ್ದಾರೆ. ಖರ್ಗೆಯವರು ಈ ಸತ್ಯವನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳುತ್ತಾರೋ ಅಷ್ಟು ಒಳ್ಳೆಯದು,’ ಎಂದು ಧರ್ಮೇಂದ್ರ ಪ್ರಧಾನ್ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ನೈಸರ್ಗಿಕ ಕೃಷಿಗಾಗಿ 2,481 ಕೋಟಿ ಮೊತ್ತದ ಹೊಸ ಯೋಜನೆ, ಇದನ್ನು ಪಡೆಯುವುದು ಹೇಗೆ?

ಮೊನ್ನೆ ಸುಪ್ರೀಂ ಕೋರ್ಟ್ ಕೂಡ ಕಾಂಗ್ರೆಸ್ ಪಕ್ಷದ ಇವಿಎಂ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿತ್ತು. ನೀವು ಗೆದ್ದಾಗ ಇವಿಎಂ ಸರಿಯಾಗಿರುತ್ತೆ. ಸೋತಾಗ ಮಾತ್ರ ಕೆಟ್ಟಿರುತ್ತೆ ಎನ್ನುತ್ತೀರಿ. ಇದು ಸರಿಯಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಕಾಂಗ್ರೆಸ್ ಪಕ್ಷದ ವಾದವನ್ನು ತಿರಸ್ಕರಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್