AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ನ್ಯಾಯ ವ್ಯವಸ್ಥೆಯನ್ನು ಭಾರತೀಯಗೊಳಿಸುವ ಪ್ರಕ್ರಿಯೆ ನಡೆದು ಬಂದ ಹಾದಿ ಹೀಗಿದೆ ನೋಡಿ

Indianising the Criminal Justice System; ವಸಾಹತುಶಾಹಿ ಕಾಲದ ಅಪರಾಧ ನ್ಯಾಯ ಸಂಹಿತೆಯ ಭಾರತೀಕರಣಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮಾಡಿಲ್ಲ. 2019 ರಲ್ಲೇ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಆರಂಭಿಸಿತ್ತು. ಇದರ ಭಾಗವಾಗಿ ಅಮಿತ್ ಶಾ ಅವರು 58 ಔಪಚಾರಿಕ ಮತ್ತು 100 ಅನೌಪಚಾರಿಕ ಪರಿಶೀಲನಾ ಸಭೆಗಳನ್ನು ನಡೆಸಿದ್ದರು.

ಅಪರಾಧ ನ್ಯಾಯ ವ್ಯವಸ್ಥೆಯನ್ನು ಭಾರತೀಯಗೊಳಿಸುವ ಪ್ರಕ್ರಿಯೆ ನಡೆದು ಬಂದ ಹಾದಿ ಹೀಗಿದೆ ನೋಡಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 12, 2023 | 1:35 PM

Share

ನವದೆಹಲಿ, ಆಗಸ್ಟ್ 12: ಬ್ರಿಟಿಷ್ ವಸಾಹತುಶಾಹಿ ಕಾಲದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಅಥವಾ ಕ್ರಿಮಿನಲ್ ಜಸ್ಟೀಸ್ ಸಿಸ್ಟಂ (Criminal Justice System) ಅನ್ನು ಭಾರತೀಯಗೊಳಿಸುವ ಪ್ರಕ್ರಿಯೆಯ ಪ್ರಮುಖ ಹಂತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮೂರು ಮಸೂದೆಗಳನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಇಂಡಿಯನ್ ಎವಿಡೆನ್ಸ್ ಆ್ಯಕ್ಟ್​​ಗೆ ಪರ್ಯಾಯವಾಗಿ ಭಾರತೀಯ ನ್ಯಾಯ ಸಂಹಿತಾ, ನಾಗರೀಕ ಸುರಕ್ಷಾ ಸಂಹಿತಾ ಹಾಗೂ ಭಾರತೀಯ ಸಾಕ್ಷ್ಯ ಎಂಬುದಾಗಿ ಪರಿಷ್ಕೃತ ಮಸೂದೆ ಮಂಡನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಹೇಳಿಕೆಗಳು, ಪ್ರತಿ ಹೇಳಿಕೆಗಳು ಕೂಡ ವರದಿಯಾಗಿವೆ. ಆದರೆ, ವಸಾಹತುಶಾಹಿ ಕಾಲದ ಅಪರಾಧ ನ್ಯಾಯ ಸಂಹಿತೆಯ ಭಾರತೀಕರಣಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮಾಡಿಲ್ಲ. 2019 ರಲ್ಲೇ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಆರಂಭಿಸಿತ್ತು.

2019ರ ಸೆಪ್ಟೆಂಬರ್​​ನಲ್ಲೇ ಪ್ರಕ್ರಿಯೆ ಆರಂಭಿಸಿದ್ದ ಅಮಿತ್ ಶಾ

ಕ್ರಿಮಿನಲ್ ಜಸ್ಟೀಸ್ ಸಿಸ್ಟಂ ಅನ್ನು ಭಾರತೀಯಗೊಳಿಸುವ ಪ್ರಕ್ರಿಯೆಯ ಮೊದಲ ಹಂತವಾಗಿ 2019ರ ಸೆಪ್ಟೆಂಬರ್​​ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಪ್ರವೃತ್ತರಾಗಿದ್ದರು. ಎಲ್ಲ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಆಡಳಿತಗಾರರಿಗೆ ಅಮಿತ್ ಶಾ ಪತ್ರ ಬರೆದಿದ್ದರು.

2020 ರ ಜನವರಿಯಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿಗಳು, ಎಲ್ಲಾ ಹೈಕೋರ್ಟ್‌ಗಳು, ಬಾರ್ ಕೌನ್ಸಿಲ್‌ಗಳು ಮತ್ತು ಕಾನೂನು ವಿಶ್ವವಿದ್ಯಾಲಯಗಳ ಮುಖ್ಯ ನ್ಯಾಯಮೂರ್ತಿಗಳಿಂದ ಸಲಹೆಗಳನ್ನು ಕೇಳಲಾಗಿತ್ತು. ಒಂದು ವರ್ಷದ ನಂತರ, 2021 ರ ಡಿಸೆಂಬರ್​​ನಲ್ಲಿ, ಸಂಸದರಿಂದಲೂ ಸಲಹೆಗಳನ್ನು ಕೇಳಲಾಗಿತ್ತು.

ಐಪಿಎಸ್ ಅಧಿಕಾರಿಗಳ, ಕಾನೂನು ತಜ್ಞರ ಸಲಹೆ ಪಡೆದಿದ್ದ ಬಿಪಿಆರ್​​ಡಿ

ಬ್ಯೂರೋ ಆಫ್​ ಪೊಲೀಸ್​ ರಿಸರ್ಚ್ ಆ್ಯಂಡ್ ಡೆವಲಪ್​ಮೆಂಟ್ (BPRD) ಎಲ್ಲಾ ಐಪಿಎಲ್ ಅಧಿಕಾರಿಗಳ ಸಲಹೆಗಳನ್ನು ಕೋರಿತು ಮತ್ತು ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಯಾರೆಲ್ಲ ಸಲಹೆ ನೀಡಿದ್ದರು?

18 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶಗಳು, ಸುಪ್ರೀಂ ಕೋರ್ಟ್, 16 ಹೈಕೋರ್ಟ್​​ಗಳು, ಐದು ನ್ಯಾಯಾಂಗ ಅಕಾಡೆಮಿಗಳು, 22 ಕಾನೂನು ವಿಶ್ವವಿದ್ಯಾಲಯಗಳು ಮತ್ತು 142 ಸಂಸದರು ಸಲಹೆಗಳನ್ನು ನೀಡಿದ್ದರು.

ಇದನ್ನೂ ಓದಿ: ಗುಂಪು ಹತ್ಯೆಗೆ ಮರಣದಂಡನೆ: ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ

ಅಮಿತ್ ಶಾ ನಡೆಸಿದ್ದ ಸಭೆಗಳೆಷ್ಟು?

ಒಟ್ಟಾರೆಯಾಗಿ, ಕ್ರಿಮಿನಲ್ ಜಸ್ಟೀಸ್ ಸಿಸ್ಟಂ ಅನ್ನು ಭಾರತೀಯಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಅಮಿತ್ ಶಾ ಅವರು 58 ಔಪಚಾರಿಕ ಮತ್ತು 100 ಅನೌಪಚಾರಿಕ ಪರಿಶೀಲನಾ ಸಭೆಗಳನ್ನು ನಡೆಸಿದ್ದರು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಆಡಳಿತದ ಕೆಲವು ರಾಜ್ಯಗಳು, ಕೇರಳ ಮತ್ತು ಪಶ್ಚಿಮ ಬಂಗಾಳ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ