Gitanjali Aiyar: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (ಜೂನ್ 7) ನಿಧನರಾದರು.

Gitanjali Aiyar: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ
ಗೀತಾಂಜಲಿ ಅಯ್ಯರ್Image Credit source: Doordarshan
Follow us
Ganapathi Sharma
|

Updated on:Jun 07, 2023 | 10:10 PM

ನವದೆಹಲಿ: ದೂರದರ್ಶನದ (Doordarshan) ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ (Gitanjali Aiyar) ಅವರು ಬುಧವಾರ (ಜೂನ್ 7) ನಿಧನರಾದರು. 1971 ರಲ್ಲಿ ದೂರದರ್ಶನ ಸೇರಿದ್ದ ಅವರು ಅನೇಕ ಪ್ರಶಸ್ತಿಗಳಿಗೂ ಭಾಜನರಾಗಿದ್ದರು. ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ಆ್ಯಂಕರ್​​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಅವರು ತಮ್ಮ ಅತ್ಯುತ್ತಮ ಕೆಲಸ, ಸಾಧನೆಗಳು ಮತ್ತು ಕೊಡುಗೆಗಾಗಿ 1989 ರಲ್ಲಿ ‘ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ’ಗೂ ಭಾಜನರಾಗಿದ್ದರು. ಅವರು ಭಾರತದ ಪ್ರಮುಖ ದಾನಿಗಳನ್ನೊಳಗೊಂಡ ‘ವರ್ಲ್ಡ್ ವೈಡ್ ಫಂಡ್’ನ ಮುಖ್ಯಸ್ಥರೂ ಆಗಿದ್ದರು.

ಗೀತಾಂಜಲಿ ಅಯ್ಯರ್ ಅವರು ಕೋಲ್ಕತ್ತಾದ ಲೊರೆಟೊ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಕೂಡ ಪಡೆದಿದ್ದರು.

ಇದನ್ನೂ ಓದಿ: Odisha: ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಸಾವು

ದೂರದರ್ಶನದಲ್ಲಿ ಸುದ್ದಿ ನಿರೂಪಕಿಯಾಗಿ ಯಶಸ್ವಿ ವೃತ್ತಿಜೀವನದ ನಂತರ ಗೀತಾಂಜಲಿ ಅವರು, ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ಬವಹಿಸಿದ್ದರು. ಅವರು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯಲ್ಲಿ (ಸಿಐಐ) ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ‘ಖಂಡಾ್’ ಎಂಬ ಧಾರಾವಾಹಿಯಲ್ಲಿ ಸಹ ನಟಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:09 pm, Wed, 7 June 23

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್