ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ವಿದೇಶಾಂಗ ಸಚಿವರ ಭೇಟಿಯಲ್ಲಿ ಪ್ರವಾದಿ ಮೊಹಮ್ಮದ್ ವಿವಾದ ಬಗ್ಗೆ ಮಾತು ಬಂದಿಲ್ಲ: ಎಂಇಎ

ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ವಿದೇಶಾಂಗ ವ್ಯವಹಾರಗಳ ಸಚಿವರು ಮತ್ತು ಇರಾನ್ ಸಚಿವರ ನಡುವಿನ ಮಾತುಕತೆ ವೇಳೆ ಈ ವಿಷಯ ಪ್ರಸ್ತಾಪ ಆಗಿಲ್ಲ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ವಿದೇಶಾಂಗ ಸಚಿವರ ಭೇಟಿಯಲ್ಲಿ ಪ್ರವಾದಿ ಮೊಹಮ್ಮದ್ ವಿವಾದ ಬಗ್ಗೆ ಮಾತು ಬಂದಿಲ್ಲ: ಎಂಇಎ
ಅರಿಂದಮ್ ಬಾಗ್ಚಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 09, 2022 | 9:54 PM

ದೆಹಲಿ: ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಪ್ರವಾದಿ ಮೊಹಮ್ಮದ್ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ (Hossein Amir-Abdollahian) ಭೇಟಿ ವೇಳೆ ಪ್ರಸ್ತಾಪಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಅವರೊಂದಿಗಿನ ಸಭೆಯಲ್ಲಿ ಅಮೀರ್-ಅಬ್ದುಲ್ಲಾಹಿಯಾನ್ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಇರಾನ್ ಹೇಳಿಕೆ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ಸಚಿವರ ನಡುವಿನ ಮಾತುಕತೆ ವೇಳೆ ಈ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಮಾತುಕತೆಗಳ ಬಗ್ಗೆ ಪ್ರತಿಕ್ರಿಯಿಸಲು ನಾನು ಇಚ್ಛಿಸುವುದಿಲ್ಲ. ನೀವು ಹೇಳುತ್ತಿರುವ ಆ ಹೇಳಿಕೆಗಳನ್ನು ಇರಾನ್ ವಾಪಸ್ ತೆಗೆದುಕೊಂಡಿದೆ ಎಂದಿದ್ದಾರೆ. ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರರು ಪ್ರವಾದಿ ಬಗ್ಗೆ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆ ವ್ಯಕ್ತಿಗಳ ಹೇಳಿಕೆಗಳು ಸರ್ಕಾರದ ಅಭಿಪ್ರಾಯವನ್ನು ಬಿಂಬಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ ಎಂದಿದ್ದಾರೆ ಬಾಗ್ಚಿ.

“ಇದನ್ನು ನಮ್ಮ ಸಂವಾದಕರಿಗೆ ತಿಳಿಸಲಾಗಿದೆ ಮತ್ತು ಕಾಮೆಂಟ್‌ಗಳು ಮತ್ತು ಟ್ವೀಟ್‌ಗಳನ್ನು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಲಾಗಿದೆ. ನಾನು ಈ ಬಗ್ಗೆ ಹೆಚ್ಚೇನೂ ಹೇಳಲಾರೆ ಎಂದು ಬಾಗ್ಚಿ ಹೇಳಿದ್ದಾರೆ.

ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ಪ್ರವಾದಿ ಮತ್ತು ಇಸ್ಲಾಂ ಧರ್ಮದ ವಿರುದ್ಧ ಮಾಡಿರುವ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಇರಾನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಪಶ್ಚಿಮ ಏಷ್ಯಾದ ಹಲವಾರು ದೇಶಗಳು ಆಕ್ರೋಶ ವ್ಯಕ್ತಪಡಿಸಿವೆ. ಆಡಳಿತಾರೂಢ ಬಿಜೆಪಿ ಈಗಾಗಲೇ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!