ದೆಹಲಿ: ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಪ್ರವಾದಿ ಮೊಹಮ್ಮದ್ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ (Hossein Amir-Abdollahian) ಭೇಟಿ ವೇಳೆ ಪ್ರಸ್ತಾಪಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಅವರೊಂದಿಗಿನ ಸಭೆಯಲ್ಲಿ ಅಮೀರ್-ಅಬ್ದುಲ್ಲಾಹಿಯಾನ್ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಇರಾನ್ ಹೇಳಿಕೆ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ಸಚಿವರ ನಡುವಿನ ಮಾತುಕತೆ ವೇಳೆ ಈ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಮಾತುಕತೆಗಳ ಬಗ್ಗೆ ಪ್ರತಿಕ್ರಿಯಿಸಲು ನಾನು ಇಚ್ಛಿಸುವುದಿಲ್ಲ. ನೀವು ಹೇಳುತ್ತಿರುವ ಆ ಹೇಳಿಕೆಗಳನ್ನು ಇರಾನ್ ವಾಪಸ್ ತೆಗೆದುಕೊಂಡಿದೆ ಎಂದಿದ್ದಾರೆ. ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರರು ಪ್ರವಾದಿ ಬಗ್ಗೆ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆ ವ್ಯಕ್ತಿಗಳ ಹೇಳಿಕೆಗಳು ಸರ್ಕಾರದ ಅಭಿಪ್ರಾಯವನ್ನು ಬಿಂಬಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ ಎಂದಿದ್ದಾರೆ ಬಾಗ್ಚಿ.
I don’t like to comment on comments b/w senior dignitaries…My understanding is that what you are referring to in a readout has been pulled down (by Iran): MEA Spokesperson Arindam Bagchi when asked about NSA & Iranian Foreign Minister meeting in wake of the controversial remark pic.twitter.com/8cxQdyFSy1
— ANI (@ANI) June 9, 2022
“ಇದನ್ನು ನಮ್ಮ ಸಂವಾದಕರಿಗೆ ತಿಳಿಸಲಾಗಿದೆ ಮತ್ತು ಕಾಮೆಂಟ್‌ಗಳು ಮತ್ತು ಟ್ವೀಟ್‌ಗಳನ್ನು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಲಾಗಿದೆ. ನಾನು ಈ ಬಗ್ಗೆ ಹೆಚ್ಚೇನೂ ಹೇಳಲಾರೆ ಎಂದು ಬಾಗ್ಚಿ ಹೇಳಿದ್ದಾರೆ.
Pleased to meet PM Modi, FM Jaishankar & other Indian officials to advance our bilateral strategic dialogue.
Tehran & New Delhi agree on the need to respect divine religions & Islamic sanctities & to avoid divisive statements.
???? determined to bring relations to new heights.
— H.Amirabdollahian امیرعبداللهیان (@Amirabdolahian) June 8, 2022
ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ಪ್ರವಾದಿ ಮತ್ತು ಇಸ್ಲಾಂ ಧರ್ಮದ ವಿರುದ್ಧ ಮಾಡಿರುವ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಇರಾನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಪಶ್ಚಿಮ ಏಷ್ಯಾದ ಹಲವಾರು ದೇಶಗಳು ಆಕ್ರೋಶ ವ್ಯಕ್ತಪಡಿಸಿವೆ. ಆಡಳಿತಾರೂಢ ಬಿಜೆಪಿ ಈಗಾಗಲೇ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ನ್ನು ಪಕ್ಷದಿಂದ ಅಮಾನತುಗೊಳಿಸಿದೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ