ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾಗೆ ಭದ್ರತೆ

ನೂಪುರ್ ಶರ್ಮಾ ಅವರಿಗೆ ಕಿರುಕುಳ ಮತ್ತು ಬೆದರಿಕೆ ಕರೆಗಳು ಬರುತ್ತಿವೆ ಎಂಬ ದೂರಿನ ಮೇರೆಗೆ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಒಂದು ದಿನದ ಹಿಂದೆ ಪ್ರಕರಣ ದಾಖಲಿಸಿದ್ದರು.

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾಗೆ ಭದ್ರತೆ
ನೂಪುರ್ ಶರ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 07, 2022 | 1:50 PM

ದೆಹಲಿ: ಪ್ರವಾದಿ ಮೊಹಮ್ಮದ್ (Prophet Muhammad) ಅವರ ವಿವಾದಾತ್ಮಕ ಹೇಳಿಕೆಗಳ ಕುರಿತು ಎಫ್‌ಐಆರ್ ದಾಖಲಿಸಿದ ನಂತರ ಅಮಾನತುಗೊಂಡ ಬಿಜೆಪಿ (BJP) ವಕ್ತಾರೆ ನೂಪುರ್ ಶರ್ಮಾ (Nupur Sharma) ಮತ್ತು ಅವರ ಕುಟುಂಬಕ್ಕೆ ಭದ್ರತೆ ಒದಗಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ಹೇಳಿದ್ದಾರೆ. ಶರ್ಮಾ ಅವರಿಗೆ ಕಿರುಕುಳ ಮತ್ತು ಬೆದರಿಕೆ ಕರೆಗಳು ಬರುತ್ತಿವೆ ಎಂಬ ದೂರಿನ ಮೇರೆಗೆ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಒಂದು ದಿನದ ಹಿಂದೆ ಪ್ರಕರಣ ದಾಖಲಿಸಿದ್ದರು. ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ ನಂತರ ಬೆದರಿಕೆ ಕರೆಗಳು ಬರುತ್ತಿತ್ತು. ಹಾಗಾಗಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಟಿವಿ ಚರ್ಚೆಯೊಂದರಲ್ಲಿ ಶರ್ಮಾ, ಪ್ರವಾದಿ ಬಗ್ಗೆ ಹೇಳಿದ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಮುಸ್ಲಿಂ ರಾಷ್ಟ್ರಗಳಾದ ಇರಾನ್,ಸೌದಿ ಅರೇಬಿಯಾ ಮತ್ತು ಯುಎಇಯಿಂದ ರಾಜತಾಂತ್ರಿಕ ಪ್ರತಿಭಟನೆಯೂ ಎದುರಾಗಿದೆ. ಬಿಜೆಪಿ ಶರ್ಮಾ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದು, ಭಾನುವಾರ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.

ಇದೇ ರೀತಿಯ ವಿಷಯದಲ್ಲಿ ಬಿಜೆಪಿ, ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು. ಬಿಜೆಪಿ ಎಲ್ಲ ಧರ್ಮದವರನ್ನು ಗೌರವಿಸುತ್ತದೆ ಮತ್ತು ಯಾವುದೇ ಧರ್ಮಕ್ಕೆ ಅಗೌರವ ತೋರಿಸುವುದನ್ನು ಒಪ್ಪುದಿಲ್ಲ ಎಂದು ಬಿಜೆಪಿ ಹೇಳಿಕೆ ನೀಡಿತ್ತು.

ಇದಾದ ನಂತರ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿರುವುದಾಗಿ ಹೇಳಿದ ನೂಪುರ್ ಶರ್ಮಾ ಶಿವನ ಬಗ್ಗೆ ಪದೇ ಪದೇ ಅಗೌರವ ಮಾಡುತ್ತಿದ್ದಾಗ ನಾನು ಆ ಮಾತನ್ನು ಹೇಳಿದ್ದೆ. ಯಾರದ್ದೇ ಆದರೂ ಧಾರ್ಮಿಕ ಭಾವನೆಗಳಿಗೆ ನೋವಾಗಿದ್ದರೆ ನಾನು ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದರು. ಶರ್ಮಾ ಅವರ ಹೇಳಿಕೆ ನಂತರ ಉತ್ತರ ಪ್ರದೇಶದ ಕಾನ್ಪುರ್​​ನಲ್ಲಿ ಜೂನ್ 3ರಂದು ಶುಕ್ರವಾರದ ಪ್ರಾರ್ಥನೆ ನಂತರ ಗಲಭೆಯುಂಟಾಗಿದ್ದು ಹಲವರಿಗೆ ಗಾಯಗಳಾಗಿವೆ.

ಇದನ್ನೂ ಓದಿ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ: ಕುವೈತ್​​ನ ಸೂಪರ್ ಮಾರ್ಕೆಟ್​​ಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬಹಿಷ್ಕಾರ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನೂಪುರ್ ಶರ್ಮಾಗೆ ಸಮನ್ಸ್ ಕಳಿಸಲಿದೆ ಮುಂಬೈ ಪೊಲೀಸ್
Image
ಬಿಜೆಪಿಯ ಮತಾಂಧತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ: ರಾಹುಲ್ ಗಾಂಧಿ
Image
ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು

ಮೇ 28ರಂದು ಕೊಲೆ ಬೆದರಿಕೆ ಬರುತ್ತಿದೆ ಎಂದು ಶರ್ಮಾ ಅವರು ದೆಹಲಿ ಪೊಲೀಸರ ಸೈಬರ್ ಸೆಲ್​​ಗೆ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರ ನಮ್ರತೆಗೆ ಅವಮಾನ ಮಾಡುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. “ತನಿಖೆಯ ಸಮಯದಲ್ಲಿ, ದ್ವೇಷವನ್ನು ಉತ್ತೇಜಿಸುವ ಕೆಲವು ವ್ಯಕ್ತಿಗಳ ವಿರುದ್ಧ ಶರ್ಮಾ ಅವರಿಂದ ಮತ್ತೊಂದು ದೂರು ಸ್ವೀಕರಿಸಲಾಗಿದೆ. ಇದರ ನಂತರ, ಐಪಿಸಿಯ ಸೆಕ್ಷನ್ 153A ಅನ್ನು ಪ್ರಕರಣಕ್ಕೆ ಸೇರಿಸಲಾಯಿತು. ಟ್ವಿಟರ್ ಸಂಸ್ಥೆಗೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಮತ್ತು ಅದರ ಉತ್ತರವನ್ನು ನಿರೀಕ್ಷಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:47 pm, Tue, 7 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್