AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಪೈಗಂಬರ್‌ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ; ಬೆಥುಧಾರಿಯಲ್ಲಿ ರೈಲಿನ ಮೇಲೆ ನೂರಾರು ಜನರಿಂದ ಕಲ್ಲೆಸೆತ

ಮೊಹಮ್ಮದ್ ಪೈಗಂಬರ್‌ ಬಗ್ಗೆ ವಿವಾದಾತ್ಮಕ(Prophet Remarks Row) ಹೇಳಿಕೆಗೆ ಖಂಡಿಸಿ ರೈಲು ನಿಲ್ದಾಣದಲ್ಲಿ ಜನರ ಗುಂಪು ಸ್ಥಳೀಯ ರೈಲಿಗೆ ದಾಳಿ ಮಾಡಿ ಹಾನಿ ಮಾಡ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಯಿಂದಾಗಿ ಲಾಲ್ಗೊಲಾ ಮಾರ್ಗದ ರೈಲು ಸೇವೆಗಳಿಗೆ ತೊಂದರೆಯಾಗಿದೆ

ಮೊಹಮ್ಮದ್ ಪೈಗಂಬರ್‌ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ; ಬೆಥುಧಾರಿಯಲ್ಲಿ ರೈಲಿನ ಮೇಲೆ ನೂರಾರು ಜನರಿಂದ ಕಲ್ಲೆಸೆತ
ಬೆಥುಧಾರಿಯಲ್ಲಿ ರೈಲಿನ ಮೇಲೆ ನೂರಾರು ಜನರಿಂದ ಕಲ್ಲೆಸೆತ
Follow us
TV9 Web
| Updated By: ಆಯೇಷಾ ಬಾನು

Updated on:Jun 12, 2022 | 11:21 PM

ಇಂದು ಭಾನುವಾರ ಸಂಜೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಬೆಥುಧಾರಿಯಲ್ಲಿ ರೈಲಿನ ಮೇಲೆ ನೂರಾರು ಜನರಿಂದ ಕಲ್ಲೆಸೆತವಾಗಿದೆ. ಮೊಹಮ್ಮದ್ ಪೈಗಂಬರ್‌ ಬಗ್ಗೆ ವಿವಾದಾತ್ಮಕ(Prophet Remarks Row) ಹೇಳಿಕೆಗೆ ಖಂಡಿಸಿ ರೈಲು ನಿಲ್ದಾಣದಲ್ಲಿ ಜನರ ಗುಂಪು ಸ್ಥಳೀಯ ರೈಲಿಗೆ ದಾಳಿ(Stone Pelting) ಮಾಡಿ ಹಾನಿ ಮಾಡ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಕೆಲವರು ನಿಲ್ದಾಣಕ್ಕೆ ಪ್ರವೇಶಿಸಿ ಪ್ಲಾಟ್‌ಫಾರ್ಮ್‌ನಲ್ಲಿದ್ದ ರೈಲಿಗೆ ಕಲ್ಲು ಎಸೆದಿದ್ದಾರೆ. ದಾಳಿಯಿಂದಾಗಿ ಲಾಲ್ಗೊಲಾ ಮಾರ್ಗದ ರೈಲು ಸೇವೆಗಳಿಗೆ ತೊಂದರೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೂರ್ವ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಏಕಲವ್ಯ ಚಕ್ರವರ್ತಿ ಮಾತನಾಡಿ, “1,000 ಜನರ ಗುಂಪೊಂದು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿತು. ಕಲ್ಲೆಸೆತದಿಂದ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಅಲ್ಲಿ ಯಾವುದೇ ರೈಲು ಓಡುತ್ತಿಲ್ಲ, ನಾವು ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದರು.

ಇನ್ನು ಪೊಲೀಸ್ ಮೂಲಗಳ ಪ್ರಕಾರ, ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದ ಕೆಲ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಕೆಲ ಪತ್ರಿಕೆಗಳು ವರದಿ ಮಾಡಿವೆ. ಮತ್ತೊಂದೆಡೆ, ಹೌರಾದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದಂತೆ ಬಂಗಾಳದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸುವೇಂದು ಅವರಿಗೆ ಪೊಲೀಸರು ತಡೆದ ಕಾರಣ ಇಂದು ಮಧ್ಯಾಹ್ನ ಪುರ್ಬಾ ಮೇದಿನಿಪುರ್ ಜಿಲ್ಲೆಯ ತಮ್ಲುಕ್‌ನಲ್ಲಿ ಹೆಚ್ಚಿನ ಅವಘಡಕ್ಕೆ ಸಾಕ್ಷಿಯಾಗಿದೆ ಎನ್ನಲಾಗಿದೆ.

Published On - 9:39 pm, Sun, 12 June 22