ಪ್ರವಾದಿ ಬಗ್ಗೆ ನೂಪುರ್ ಶರ್ಮಾರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ದೆಹಲಿ ಜಾಮಾ ಮಸೀದಿ ಬಳಿ ಬೃಹತ್ ಪ್ರತಿಭಟನೆ
ಶುಕ್ರವಾರದ ಪ್ರಾರ್ಥನೆಯ ನಂತರ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಮಕ್ಕಳು ಸೇರಿದಂತೆ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಗೆ ಮಸೀದಿ ಅಧಿಕಾರಿಗಳು ಯಾವುದೇ ಕರೆ ನೀಡಿಲ್ಲ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಸ್ಪಷ್ಟಪಡಿಸಿದ್ದಾರೆ.
ದೆಹಲಿ: ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರರಾದ ನೂಪುರ್ ಶರ್ಮಾ (Nupur Sharma) ಮತ್ತು ನವೀನ್ ಜಿಂದಾಲ್ ಅವರು ಪ್ರವಾದಿ ಮೊಹಮ್ಮದ್ (Prophet muhammad) ಬಗ್ಗೆ ಹೇಳಿದ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ದೆಹಲಿಯ ಜಾಮಾ ಮಸೀದಿ (Jama Masjid) ಬಳಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆದಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಮಕ್ಕಳು ಸೇರಿದಂತೆ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಗೆ ಮಸೀದಿ ಅಧಿಕಾರಿಗಳು ಯಾವುದೇ ಕರೆ ನೀಡಿಲ್ಲ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಸ್ಪಷ್ಟಪಡಿಸಿದ್ದಾರೆ. “ಪ್ರತಿಭಟಿಸುವವರು ಯಾರೆಂದು ನಮಗೆ ತಿಳಿದಿಲ್ಲ, ಅವರು ಎಐಎಂಐಎಂಗೆ ಸೇರಿದವರು ಅಥವಾ ಓವೈಸಿಯವರ ಜನರು ಎಂದು ನಾನು ಭಾವಿಸುತ್ತೇನೆ. ಅವರು ಪ್ರತಿಭಟನೆ ಮಾಡಲು ಬಯಸಿದರೆ ಅವರು ಮಾಡಬಹುದು, ಆದರೆ ನಾವು ಅವರನ್ನು ಬೆಂಬಲಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಅವರು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಮಸೀದಿಯ ಹೊರಗೆ ಪ್ರತಿಭಟನೆಗಳು ನಡೆದವು. ಸಹರಾನ್‌ಪುರ ಮತ್ತು ಮೊರಾದಾಬಾದ್‌ನ ಮಸೀದಿಗಳ ಹೊರಗೆಯೂ ಇದೇ ರೀತಿಯ ಪ್ರತಿಭಟನೆ ನಡೆದಿದೆ
#WATCH People in large numbers protest at Delhi’s Jama Masjid over inflammatory remarks by suspended BJP leader Nupur Sharma & expelled leader Naveen Jindal, earlier today
No call for protest given by Masjid, says Shahi Imam of Jama Masjid. pic.twitter.com/Kysiz4SdxH
— ANI (@ANI) June 10, 2022
ಕೆಲವು ಪ್ರತಿಭಟನಾಕಾರರು ಸ್ವಲ್ಪ ಸಮಯದ ನಂತರ ಸ್ಥಳವನ್ನು ತೊರೆದರೆ, ಇತರರು ಪ್ರತಿಭಟನೆಯನ್ನು ಮುಂದುವರೆಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ವಿವಾದಿತ ಅರ್ಚಕ ಯತಿ ನರಸಿಂಹಾನಂದ್ ಸೇರಿದಂತೆ 31 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ದ್ವೇಷವನ್ನು ಹರಡುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವಿಶ್ಲೇಷಣೆಯ ನಂತರ ಎರಡು ಎಫ್‌ಐಆರ್‌ಗಳನ್ನು ಬುಧವಾರ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಕ್ಷದಿಂದ ಉಚ್ಛಾಟಿತರಾಗಿರುವ ದೆಹಲಿ ಬಿಜೆಪಿ ಮಾಧ್ಯಮ ಘಟಕದ ಮಾಜಿ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಮತ್ತು ಪತ್ರಕರ್ತೆ ಸಬಾ ನಖ್ವಿ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 2:56 pm, Fri, 10 June 22