AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prophet Row: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನೂಪುರ್ ಶರ್ಮಾ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

Prophet Row: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ನೂಪುರ್ ಶರ್ಮ
TV9 Web
| Updated By: ಸುಷ್ಮಾ ಚಕ್ರೆ|

Updated on:Sep 09, 2022 | 1:34 PM

Share

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ (Prophet Remarks Row) ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ (Supreme Court) ಇಂದು ನಿರಾಕರಿಸಿದೆ. ನಿರ್ದೇಶನಗಳನ್ನು ನೀಡುವಾಗ ನ್ಯಾಯಾಲಯವು ಸೂಕ್ಷ್ಮವಾಗಿರಬೇಕು. ಈ ಅರ್ಜಿಯನ್ನು ಹಿಂಪಡೆಯುವುದು ನಮ್ಮ ಸಲಹೆ ಎಂದು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ತಿಳಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ, ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಅನೇಕ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಒತ್ತಾಯದ ಕ್ರಮ ತೆಗೆದುಕೊಳ್ಳದಂತೆ ಜುಲೈನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಮಧ್ಯೆ ನೂಪುರ್ ಶರ್ಮಾ ವಿರುದ್ಧ ಅಸ್ತಿತ್ವದಲ್ಲಿರುವ ಅಥವಾ ಭವಿಷ್ಯದ ಯಾವುದೇ ಎಫ್‌ಐಆರ್‌ಗಳು ಅಥವಾ ದೂರುಗಳಲ್ಲಿ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿ: Big Breaking ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ

ಪ್ರವಾದಿ ಮೊಹಮ್ಮದ್ ಅವರ ವಿವಾದಾತ್ಮಕ ಹೇಳಿಕೆ ಮತ್ತು ಮುಸ್ಲಿಂ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿರುವ ಆರೋಪದ ಮೇಲೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಅರ್ಜಿಯನ್ನು ಹಿಂತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿತು.

ಮಾರ್ಚ್ 26ರಂದು ಪ್ರವಾದಿಯ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಈ ವರ್ಷದ ಆರಂಭದಲ್ಲಿ ರಾಷ್ಟ್ರದಾದ್ಯಂತ ಭಾರಿ ವಿವಾದ ಮತ್ತು ಹಿಂಸಾಚಾರವನ್ನು ಉಂಟುಮಾಡಿದವು. ಹಲವಾರು ಮುಸ್ಲಿಂ ರಾಷ್ಟ್ರಗಳು ಪ್ರತಿಭಟನೆಯನ್ನು ಘೋಷಿಸಿದ ನಂತರ ಬಿಜೆಪಿ ಕೂಡ ನೂಪುರ್ ಶರ್ಮಾ ಅವರ ಹೇಳಿಕೆಗೂ ತಮ್ಮ ಪಕ್ಷಕ್ಕೂ ಸಂಬಂಧವಿಲ್ಲವೆಂದು ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Fri, 9 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ