ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ (Prophet Remarks Row) ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ (Supreme Court) ಇಂದು ನಿರಾಕರಿಸಿದೆ. ನಿರ್ದೇಶನಗಳನ್ನು ನೀಡುವಾಗ ನ್ಯಾಯಾಲಯವು ಸೂಕ್ಷ್ಮವಾಗಿರಬೇಕು. ಈ ಅರ್ಜಿಯನ್ನು ಹಿಂಪಡೆಯುವುದು ನಮ್ಮ ಸಲಹೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ತಿಳಿಸಿದ್ದಾರೆ.
ನೂಪುರ್ ಶರ್ಮಾ ಅವರ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ, ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಅನೇಕ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಒತ್ತಾಯದ ಕ್ರಮ ತೆಗೆದುಕೊಳ್ಳದಂತೆ ಜುಲೈನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಮಧ್ಯೆ ನೂಪುರ್ ಶರ್ಮಾ ವಿರುದ್ಧ ಅಸ್ತಿತ್ವದಲ್ಲಿರುವ ಅಥವಾ ಭವಿಷ್ಯದ ಯಾವುದೇ ಎಫ್‌ಐಆರ್‌ಗಳು ಅಥವಾ ದೂರುಗಳಲ್ಲಿ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: Big Breaking ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ
ಪ್ರವಾದಿ ಮೊಹಮ್ಮದ್ ಅವರ ವಿವಾದಾತ್ಮಕ ಹೇಳಿಕೆ ಮತ್ತು ಮುಸ್ಲಿಂ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿರುವ ಆರೋಪದ ಮೇಲೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಅರ್ಜಿಯನ್ನು ಹಿಂತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿತು.
Supreme Court refuses to entertain a plea seeking directions to the authorities to act and arrest former BJP Spokesperson Nupur Sharma for her alleged hate statement against Prophet Mohammad and hurting sentiments of the Muslim community.
— ANI (@ANI) September 9, 2022
ಮಾರ್ಚ್ 26ರಂದು ಪ್ರವಾದಿಯ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಈ ವರ್ಷದ ಆರಂಭದಲ್ಲಿ ರಾಷ್ಟ್ರದಾದ್ಯಂತ ಭಾರಿ ವಿವಾದ ಮತ್ತು ಹಿಂಸಾಚಾರವನ್ನು ಉಂಟುಮಾಡಿದವು. ಹಲವಾರು ಮುಸ್ಲಿಂ ರಾಷ್ಟ್ರಗಳು ಪ್ರತಿಭಟನೆಯನ್ನು ಘೋಷಿಸಿದ ನಂತರ ಬಿಜೆಪಿ ಕೂಡ ನೂಪುರ್ ಶರ್ಮಾ ಅವರ ಹೇಳಿಕೆಗೂ ತಮ್ಮ ಪಕ್ಷಕ್ಕೂ ಸಂಬಂಧವಿಲ್ಲವೆಂದು ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.
Published On - 1:33 pm, Fri, 9 September 22