AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ವಿರುದ್ಧ ಹೇಳಿಕೆ: ಉತ್ತರ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ 337 ಮಂದಿ ಬಂಧನ, 13 ಎಫ್​ಐಆರ್ ದಾಖಲು

Prophet Muhammad: ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಉತ್ತರ ಪ್ರದೇಶದಾದ್ಯಂತ ಜೂನ್ 10ರಂದು ನಡೆದ ಗಲಭೆಯಲ್ಲಿ 337 ಮಂದಿಯನ್ನು ಬಂಧಿಸಲಾಗಿದ್ದು, 13 ಎಫ್​ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರವಾದಿ ವಿರುದ್ಧ ಹೇಳಿಕೆ: ಉತ್ತರ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ 337 ಮಂದಿ ಬಂಧನ, 13 ಎಫ್​ಐಆರ್ ದಾಖಲು
Violence
TV9 Web
| Edited By: |

Updated on: Jun 14, 2022 | 11:31 AM

Share

ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಉತ್ತರ ಪ್ರದೇಶದಾದ್ಯಂತ ಜೂನ್ 10ರಂದು ನಡೆದ ಗಲಭೆಯಲ್ಲಿ 337 ಮಂದಿಯನ್ನು ಬಂಧಿಸಲಾಗಿದ್ದು, 13 ಎಫ್​ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿನಡೆದ ಗಲಭೆಯಲ್ಲಿ ಕಲ್ಲು ತೂರಾಟವು ಕೂಡ ನಡೆದಿತ್ತು, ಸಹರಾನ್​ಪುರ, ಪ್ರಯಾಗ್​ರಾಜ್​ದಲ್ಲಿ ಹೆಚ್ಚಿನ ಗಲಭೆ ಸಂಭವಿಸಿದೆ.

ಉತ್ತರ ಪ್ರದೇಶದಲ್ಲಿ ಒಟ್ಟು 337 ಮಂದಿಯನ್ನು ಬಂಧಿಸಲಾಗಿದೆ, ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ 92 ಮಂದಿ, ಸಹರಾನ್​ಪುರದಲ್ಲಿ 83, ಹತ್ರಾಸ್​ನಲ್ಲಿ 52, ಮೊರಾದಾಬಾದ್​ನಲ್ಲಿ 40, ಮೊರಾದಾಬಾದ್​ನಲ್ಲಿ 18 ಮಂದಿ, ಅಂಬೇಡ್ಕರ್​ನಗರದಲ್ಲಿ 41 ಮಂದಿ, ಅಲಿಗಢದಲ್ಲಿ ಆರು ಮಂದಿ, ಜಲೌನ್​ನಲ್ಲಿ ಐವರನ್ನು ಬಂಧಿಸಲಾಗಿದೆ.

ಪ್ರಯಾಗ್​ರಾಜ್​ನಲ್ಲಿ ಕಲ್ಲುತೂರಾಟ ಹೆಚ್ಚಾಗಿ ನಡೆದಿತ್ತು, ಹಾಗೆಯೇ ಈ ಗಲಭೆ, ಹಿಂಸಾಚಾರದ ಹಿಂದಿದ್ದ ಮಾಸ್ಟರ್​ಮೈಂಡ್​ಗೆ ಸಂಬಂಧಿಸಿದ ಅನಧಿಕೃತ ಆಸ್ತಿಯನ್ನು ನೆಲಸಮ ಮಾಡಲಾಯಿತು.

ಘಟನೆ ಹಿನ್ನೆಲೆ ಏನು? ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಕೆಲ ದಿನಗಳ ಹಿಂದೆ ಟಿವಿ ವಾಹಿನಿಯೊಂದರ ಚರ್ಚೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರವಾದಿ ಮುಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಇದಾದ ಬಳಿಕ ಹಲವು ಮುಸ್ಲಿಂ ಸಂಘಟನೆಗಳು ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಲಗಭೆಯನ್ನು ಸೃಷ್ಟಿಸುತ್ತಿವೆ. ನೂಪುರ್ ಶರ್ಮಾ ಹೇಳಿಕೆಯ ಬಳಿಕ ಕಾನ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದ ಬಳಿಕ ಬಿಜೆಪಿಯು ನೂಪುರ್ ಶರ್ಮಾರನ್ನು ಪಕ್ಷದಿಂದ ವಜಾಗೊಳಿಸಿತ್ತು.

ಆಕ್ಷೇಪಾರ್ಹ ಹೇಳಿಕೆ ಹಿಂಪಡೆದ ನೂಪುರ್ ಶರ್ಮಾ ಬಿಜೆಪಿ ರಾಷ್ಟ್ರೀಯ ವಕ್ತಾರೆ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಂಡ ಬಳಿಕ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ