Prophet Row: ಜಾರ್ಖಂಡ್ನಲ್ಲಿ ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ; ಇಬ್ಬರು ಸಾವು, ಹಲವರಿಗೆ ಗಾಯ
ಜಾರ್ಖಂಡ್ ಮಾತ್ರವಲ್ಲದೆ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘರ್ಷಣೆಗಳು ನಡೆದಿವೆ. ಈ ಘಟನೆಗಳಲ್ಲಿ 20 ಜನರು ಗಾಯಗೊಂಡಿದ್ದಾರೆ.
ರಾಂಚಿ: ಪ್ರವಾದಿ ಮೊಹಮ್ಮದ್ ಪೈಗಂಬರ್ (Prophet Muhammed) ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ನಾಯಕರ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಜಾರ್ಖಂಡ್‌ನ ರಾಂಚಿಯಲ್ಲಿ (Ranchi) ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳ ವಿರುದ್ಧ ಹಿಂಸಾಚಾರ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಶನಿವಾರ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಮತ್ತು ವಿವಾದದ ನಡುವೆ ಪಕ್ಷದಿಂದ ಉಚ್ಛಾಟಿತರಾಗಿರುವ ನವೀನ್ ಜಿಂದಾಲ್ (Naveen Jindal) ಅವರ ಹೇಳಿಕೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ ಕೆಲವು ದಿನಗಳಲ್ಲಿ ಈ ಹೇಳಿಕೆಗಳನ್ನು ಸೌದಿ ಅರೇಬಿಯಾ, ಕತಾರ್, ಇರಾನ್ ಮತ್ತು ಹಲವಾರು ಇತರ ರಾಷ್ಟ್ರಗಳು ಕೂಡ ಟೀಕಿಸಿವೆ.
ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದಾರೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Nupur Sharma: ಬಿಜೆಪಿ ನಾಯಕಿ ನೂಪುರ್ ಶರ್ಮಾ ತಲೆ ಕತ್ತರಿಸಿದವರಿಗೆ 50 ಲಕ್ಷ ಬಹುಮಾನ ಘೋಷಿಸಿದ ಪಾಕಿಸ್ತಾನಿಗಳು
#WATCH | Jharkhand: Protest over the controversial remarks by suspended BJP leader Nupur Sharma turned violent in Ranchi. Vehicles were torched and vandalised and stone-pelting occurred. Injuries reported. pic.twitter.com/Z5FIndjZzf
— ANI (@ANI) June 10, 2022
ಜಾರ್ಖಂಡ್ ಮಾತ್ರವಲ್ಲದೆ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘರ್ಷಣೆಗಳು ನಡೆದಿವೆ. ಈ ಘಟನೆಗಳಲ್ಲಿ 20 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಭದ್ರತಾ ಸಿಬ್ಬಂದಿಯೇ ಹೆಚ್ಚಾಗಿದ್ದಾರೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿಯೂ ಜನರು ಬೀದಿಗಿಳಿದು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:45 am, Sat, 11 June 22