AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂಪುರ್ ಶರ್ಮಾ ವಿರುದ್ಧದ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್​ಗೆ ಮನವಿ

ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಕೆಯಾಗಿ

ನೂಪುರ್ ಶರ್ಮಾ ವಿರುದ್ಧದ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್​ಗೆ ಮನವಿ
Nupur Sharma
TV9 Web
| Edited By: |

Updated on:Jul 03, 2022 | 10:47 AM

Share

ನವದೆಹಲಿ: ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಕೆಯಾಗಿದೆ. ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಪೀಠ ಮಾಡಿರುವ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರಿಗೆ ಸಲ್ಲಿಸಿರುವ ಪತ್ರದಲ್ಲಿ ಮನವಿ ಮಾಡಲಾಗಿದೆ.

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸಬೇಕು ಎಂದು ಕೋರಿ ನೂಪುರ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅಗ್ಗದ ಪ್ರಚಾರ, ರಾಜಕೀಯ ಅಜೆಂಡಾ ಅಥವಾ ಕೆಲವು ಕೆಟ್ಟ ಚಟುವಟಿಕೆಗಳಿಗಾಗಿ ಈ ರೀತಿ ಹೇಳಿಕೆ ನೀಡಲಾಗಿದೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಳ್ಳುವ ದೆಹಲಿ ಮೂಲದ ಅಜಯ್ ಗೌತಮ್ ಅವರು ಪತ್ರದ ಮೂಲಕ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, “ನೂಪುರ್ ಶರ್ಮಾ ಅವರಿಗೆ ನ್ಯಾಯಯುತ ವಿಚಾರಣೆಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಅವರ ವಿರುದ್ಧದ ಅಭಿಪ್ರಾಯವನ್ನು ತೆಗೆದುಹಾಕಲು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠಕ್ಕೆ ಸೂಕ್ತ ಆದೇಶ ಅಥವಾ ನಿರ್ದೇಶನಗಳನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರ ಪೀಠ ಶುಕ್ರವಾರ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಅವರ ಹೇಳಿಕೆಯನ್ನು ದೂಷಿಸಿತ್ತು. ಎಲುಬಿಲ್ಲದ ನಾಲಿಗೆಯು ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದಲ್ಲಿ ಏನೇ ನಡೆದರು ಅದಕ್ಕೆ ಅವರೇ ಜವಾಬ್ದಾರರು ಎಂದು ಹೇಳಿತ್ತು.

ಮೊಹಮ್ಮದ್ ಅವರ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಲು ನೂಪುರ್ ಮಾಡಿದ ಮನವಿಯನ್ನು ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತು. ದೆಹಲಿಯ ನಿವಾಸಿ ಅಜಯ್ ಗೌತಮ್ ಎಂಬುವವರು ಸುಪ್ರೀಂ ಕೋರ್ಟ್‌ನಿಂದ ಅಭಿಪ್ರಾಯವನ್ನು ಹಿಂಪಡೆಯುವಂತೆ ಅರ್ಜಿ ಸಲ್ಲಿಸಿದ್ದಾರೆ. ಅಜಯ್ ಗೌತಮ್ ತಾನೊಬ್ಬ ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ.

ನ್ಯಾಯಯುತ ವಿಚಾರಣೆಗೆ ಅವಕಾಶ ಸಿಗುವಂತೆ ನೂಪುರ್ ಶರ್ಮಾ ಅವರ ಪ್ರಕರಣದಲ್ಲಿನ ಆರೋಪಗಳನ್ನು ಹಿಂಪಡೆಯಲು ಸೂಕ್ತ ಆದೇಶ ಅಥವಾ ನಿರ್ದೇಶನವನ್ನು ಹೊರಡಿಸಿ ಎಂದು ಅರ್ಜಿಯಲ್ಲಿ ನ್ಯಾಯಮೂರ್ತಿ ರಮಣ ಅವರನ್ನು ಒತ್ತಾಯಿಸಲಾಗಿದೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ ಬಳಿಕ ರಾಷ್ಟ್ರದಲ್ಲಿ ಪ್ರತಿಭಟನೆಗಳು ಆರಂಭವಾಗುತ್ತಿದ್ದಂತೆ ಬಿಜೆಪಿಯು ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿತ್ತು.

Published On - 10:08 am, Sun, 3 July 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್