Prophet Row: ನೂಪುರ್ ಹೇಳಿಕೆ ಬೆಂಬಲಿಸಿದ್ದಕ್ಕೆ ಅಮರಾವತಿಯಲ್ಲಿ ನಡೆದಿತ್ತು ಅಂಗಡಿ ಮಾಲೀಕನ ಬರ್ಬರ ಹತ್ಯೆ
ಉದಯ್ಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಂಗಡಿ ಮಾಲೀಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಉದಯ್ಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಂಗಡಿ ಮಾಲೀಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ವರದಿಗಳ ಪ್ರಕಾರ, ಜೂನ್ 21 ರಂದು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ. ರಾಜಸ್ಥಾನದ ಉದಯ್ಪುರದಲ್ಲಿ ನಡೆದ ಕನ್ಹಯ್ಯಾಲಾಲ್ ಅವರ ಭೀಕರ ಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.
ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಈ ಕೊಲೆ ಮಾಡಲಾಗಿದೆ. ಆದಾಗ್ಯೂ, ಅದರ ತನಿಖೆ ಇನ್ನೂ ನಡೆಯುತ್ತಿದೆ.
ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರೂ ಆರೋಪಿಗಳನ್ನು ಇಂದು ಜೈಪುರದ ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅದೇ ಸಮಯದಲ್ಲಿ, ಅಂತಹ ಒಂದು ಘಟನೆ ಮುನ್ನೆಲೆಗೆ ಬಂದಿದ್ದು, ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಜೂನ್ 21 ರಂದು ಕನ್ಹಯ್ಯಾಲಾಲ್ ಹತ್ಯೆಗೆ ಕೇವಲ ಒಂದು ವಾರದ ಮೊದಲು ಅಂಗಡಿ ಮಾಲೀಕ ಉಮೇಶ್ ಪ್ರಹ್ಲಾದರಾವ್ ಕೋಲ್ಹೆ ಕೊಲೆಯಾಗಿದ್ದರು.
ಬಿಜೆಪಿಯ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಉಮೇಶ್ ಪ್ರಹ್ಲಾದರಾವ್ ಕೋಲ್ಹೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಹತ್ಯೆಯ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಮರಾವತಿ ಜಿಲ್ಲೆಯ ಉಮೇಶ್ ಪ್ರಹ್ಲಾದರಾವ್ ಕೋಲ್ಹೆ ಕೊಲೆಯ ನಂತರ, ಅವರ ಮಗ ಸಂಕೇತ್ ಕೋಲ್ಹೆ ಅಮರಾವತಿಯ ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಂತರ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಆರೋಪಿಗಳಾದ ಮುದಸ್ಸಿರ್ ಅಹ್ಮದ್ ಮತ್ತು ಶಾರುಖ್ ಪಠಾಣ್ ಅವರನ್ನು ಜೂನ್ 23 ರಂದು ಬಂಧಿಸಿದ್ದಾರೆ. ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಈ ಕೊಲೆಯಲ್ಲಿ ಇನ್ನೂ ನಾಲ್ವರ ಕೈವಾಡವಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇನ್ನೂ ಮೂವರು ಆರೋಪಿಗಳಾದ ಅಬ್ದುಲ್ ತೌಫಿಕ್, ಶೋಯಬ್ ಖಾನ್, ಅತೀಬ್ ರಶೀದ್ ನನ್ನು ಬಂಧಿಸಿದ್ದಾರೆ. ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಉಮೇಶ್ ಕೋಲ್ಹೆ ಕೊಲೆಯಾದ ನಂತರ ಆತನ ಮಗ ಸಂಕೇತ್ ಕೋಲ್ಹೆ ಜೂನ್ 21 ರಂದು ರಾತ್ರಿ 10 ರಿಂದ 10.30 ರ ನಡುವೆ ನಾವು ಪ್ರಭಾತ್ ಚೌಕ್ ನಿಂದ ಹೋಗುತ್ತಿದ್ದೆವು ಎಂದು ಹೇಳಿದ್ದಾನೆ.
ನಾವು ಆಗಷ್ಟೇ ಮಹಿಳಾ ಕಾಲೇಜು ನ್ಯೂ ಹೈಸ್ಕೂಲ್ ಮುಂದೆ ಬಂದಿದ್ದೆವು, ಆಗ ಮೋಟಾರ್ ಸೈಕಲ್‌ನಲ್ಲಿ ಇಬ್ಬರು ನನ್ನ ತಂದೆಯ ಸ್ಕೂಟಿಯ ಮುಂದೆ ಬಂದರು. ಅಪ್ಪನ ಸ್ಕೂಟಿ ನಿಲ್ಲಿಸಿ ಕತ್ತಿನ ಎಡಭಾಗದಲ್ಲಿ ಚಾಕುವಿನಿಂದ ಇರಿದಿದ್ದಾನೆ. ಇದಾದ ನಂತರ ನನ್ನ ತಂದೆ ಅಲ್ಲಿಯೇ ಬಿದ್ದರು ತುಂಬಾ ರಕ್ತಸ್ರಾವವಾಗುತ್ತಿತ್ತು ಎಂದಿದ್ದಾರೆ.
ನಾನು ಸ್ಕೂಟರ್ ನಿಲ್ಲಿಸಿ ಸಹಾಯಕ್ಕಾಗಿ ಕೂಗಲು ಪ್ರಾರಂಭಿಸಿದೆ. ಮತ್ತೊಬ್ಬ ವ್ಯಕ್ತಿ ಬಂದಿದ್ದು, ಮೂವರು ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದುವರೆಗೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಮರಾವತಿ ನಗರ ಪೊಲೀಸ್ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಚಾಕು, ಮೊಬೈಲ್ ಫೋನ್, ವಾಹನ ಮತ್ತು ಬಟ್ಟೆಗಳನ್ನು ವಶಪಡಿಸಿಕೊಂಡಿದ್ದೇವೆ ಮತ್ತು ಅಪರಾಧ ನಡೆದ ಸ್ಥಳದಿಂದ ಸಿಸಿಟಿವಿ ದೃಶ್ಯಗಳನ್ನು ಪಡೆಯಲಾಗಿದೆ. ಇದರೊಂದಿಗೆ ಹೆಚ್ಚಿನ ತನಿಖೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಮೇಶ್ ಪ್ರಹ್ಲಾದರಾವ್ ಕೋಲ್ಹೆ ಎಂದಿಗೂ ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡಿಲ್ಲ ಮತ್ತು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿರಲಿಲ್ಲ.
ಅವರ ಸೋಶಿಯಲ್ ಮೀಡಿಯಾ ಪೋಸ್ಟ್‌ನಿಂದ ಅವರನ್ನು ಕೊಲೆ ಮಾಡಲಾಗಿದೆ, ಆದರೆ ನಾನು ಅವರ ಫೇಸ್‌ಬುಕ್ ಪ್ರೊಫೈಲ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಆಕ್ಷೇಪಾರ್ಹ ಏನೂ ಕಂಡುಬಂದಿಲ್ಲ. ಕೊಲೆಗೆ ಕಾರಣವೇನೆಂಬುದನ್ನು ಪೊಲೀಸರೇ ಬಹಿರಂಗಗೊಳಿಸಬೇಕು ಎಂದು ಹೇಳಿದ್ದಾರೆ.
Published On - 10:54 am, Sat, 2 July 22