ನವದೆಹಲಿ: ವೇಶ್ಯಾವಾಟಿಕೆಯೂ (Prostitution) ಕಾನೂನುಬದ್ಧವಾದ ಒಂದು ವೃತ್ತಿ. ಹೀಗಾಗಿ, ವೇಶ್ಯಾಗೃಹದ ಮೇಲೆ ದಾಳಿ ನಡೆಸಿ ವೇಶ್ಯೆಯರನ್ನು ಪೊಲೀಸರು ಬಂಧಿಸಬಾರದು, ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ವೇಶ್ಯಾವಾಟಿಕೆಯು ಒಂದು ವೃತ್ತಿಯಾಗಿದೆ. ಇದು ಕಾನೂನುಬಾಹಿರವಲ್ಲ. ಲೈಂಗಿಕ ಕಾರ್ಯಕರ್ತೆಯರು (Sex Workers) ಕಾನೂನಿನಡಿಯಲ್ಲಿ ಘನತೆ ಮತ್ತು ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ಕಾಪಾಡಲು 6 ನಿರ್ದೇಶನಗಳನ್ನು ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ಎಲ್ಲಾ ಪ್ರಕರಣಗಳಲ್ಲಿ ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ತನ್ನ ಒಪ್ಪಿಗೆಯೊಂದಿಗೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾದಾಗ ಪೊಲೀಸರು ಮಧ್ಯಪ್ರವೇಶಿಸಬಾರದು. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬಾರದು. ಈ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನದ 2 ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನವನ್ನು ಹೊಂದುವ ಹಕ್ಕಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಇದನ್ನೂ ಓದಿ: Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ
ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡವರು ವಯಸ್ಕರಾಗಿದ್ದರೆ, ತಾವೇ ಇಷ್ಟಪಟ್ಟು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರೆ ಅವರ ವಿರುದ್ಧ ಪೊಲೀಸರು ಕ್ರಿಮಿನಲ್ ಕ್ರಮ ಕೈಗೊಳ್ಳುವಂತಿಲ್ಲ. ಸ್ವಯಂಪ್ರೇರಿತ ವೇಶ್ಯಾವಾಟಿಕೆ ಕಾನೂನುಬಾಹಿರವಲ್ಲ ಮತ್ತು ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲಿನ ದಾಳಿಯಲ್ಲಿ ಲೈಂಗಿಕ ಕಾರ್ಯಕರ್ತರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಎಂದು ಪೀಠವು ಆದೇಶಿಸಿದೆ.
ಲೈಂಗಿಕ ಕಾರ್ಯಕರ್ತೆಯರ ಮಗುವನ್ನು ಕೇವಲ ಲೈಂಗಿಕ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. ಅಪ್ರಾಪ್ತ ವಯಸ್ಕನು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು. ಲೈಂಗಿಕ ಕಾರ್ಯಕರ್ತೆಯರನ್ನು ಈ ಮನೆಗಳಲ್ಲಿ ಇರಿಸಬಹುದು ಮತ್ತು ಲೈಂಗಿಕ ಕಾರ್ಯಕರ್ತೆಯ ಒಪ್ಪಿಗೆಯನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸಿದರೆ, ಅವರನ್ನು ಹೊರಗೆ ಬಿಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:38 am, Fri, 27 May 22