AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ-ಬಿಎಚ್‌ಯು ವಿದ್ಯಾರ್ಥಿನಿಗೆ ಕಿರುಕುಳ ನೀಡಿ, ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ದೇಶದ ಪ್ರತಿಷ್ಠಿತ ಸಂಸ್ಥೆಯ ಸ್ಥಿತಿಯಾಗಿದೆ. ಯುಪಿ ಸಿಎಂ ಯೋಗಿ ಈ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಹೊಗಳುತ್ತಿರುತ್ತಾರೆ. ಅಲ್ಲಿ ವಿದ್ಯಾರ್ಥಿನಿಯೊಬ್ಬಳು ವಿಶ್ವವಿದ್ಯಾಲಯದೊಳಗೆ ಕಿರುಕುಳಕ್ಕೊಳಗಾಗಿದ್ದಾಳೆ ಎಂದಿದೆ.

ಐಐಟಿ-ಬಿಎಚ್‌ಯು ವಿದ್ಯಾರ್ಥಿನಿಗೆ ಕಿರುಕುಳ ನೀಡಿ, ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 02, 2023 | 5:30 PM

Share

ಲಕ್ನೋ ನವೆಂಬರ್ 02: ಐಐಟಿ-ಬಿಎಚ್‌ಯು (IIT-BHU) ಕ್ಯಾಂಪಸ್‌ನಲ್ಲಿ ಬುಧವಾರ ತಡರಾತ್ರಿಯಲ್ಲಿ ಪುರುಷ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳಿಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಪುರುಷರು ಕಿರುಕುಳ ನೀಡಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಖಂಡಿಸಿ ಐಐಟಿ-ಬಿಎಚ್‌ಯುನಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ರಜಪೂತಾನ ಹಾಸ್ಟೆಲ್ (Rajputana Hostel) ಬಳಿ ಪ್ರತಿಭಟನೆ (Protest)  ನಡೆಸಿದ್ದಾರೆ. ಆಪಾದಿತ ಘಟನೆಯ ನಂತರ, ಭದ್ರತಾ ವ್ಯವಸ್ಥೆ ಹೆಚ್ಚಿಸಿದ್ದು ಹೊರಗಿನವರ ಪ್ರವೇಶ ನಿಷೇಧಕ್ಕೆ ಒತ್ತಾಯಿಸಿದರು.

ಮಹಿಳೆ ನೀಡಿದ ದೂರಿನ ಪ್ರಕಾರ, ಬುಧವಾರ ರಾತ್ರಿ ಸ್ನೇಹಿತನ ಜೊತೆ ಹೊರಗೆ ಹೋಗಿದ್ದಳು. ಅವರು ಕರ್ಮಾನ್ ಬಾಬಾ ದೇವಸ್ಥಾನದ ಬಳಿ ಇದ್ದಾಗ ಮೂವರು ಪುರುಷರು ಮೋಟಾರ್ ಸೈಕಲ್‌ನಲ್ಲಿ ಬಂದು ಅವಳನ್ನು ಬಲವಂತವಾಗಿ ಎಳೆದು ಮೂಲೆಗೆ ಕರೆದೊಯ್ದು ಆಕೆಯ ಬಾಯಿ  ಮುಚ್ಚಿಸಿದ್ದಾರೆ. ನಂತರ ವ್ಯಕ್ತಿಯೊಬ್ಬ ಆಕೆಯನ್ನು ವಿವಸ್ತ್ರ ಮಾಡಿ ವಿಡಿಯೊ, ಫೋಟೋ ಕ್ಲಿಕ್ಕಿಸಿದ್ದಾನೆ. ಅವರು 15 ನಿಮಿಷಗಳ ನಂತರ   ಆಕೆಯ ಫೋನ್ ನಂಬರ್ ತೆಗೆದುಕೊಂಡು ಆಕೆಯನ್ನು ಹೋಗಲು ಬಿಟ್ಟರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ದೇಶದ ಪ್ರತಿಷ್ಠಿತ ಸಂಸ್ಥೆಯ ಸ್ಥಿತಿಯಾಗಿದೆ. ಯುಪಿ ಸಿಎಂ ಯೋಗಿ ಈ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಹೊಗಳುತ್ತಿರುತ್ತಾರೆ. ಅಲ್ಲಿ ವಿದ್ಯಾರ್ಥಿನಿಯೊಬ್ಬಳು ವಿಶ್ವವಿದ್ಯಾಲಯದೊಳಗೆ ಕಿರುಕುಳಕ್ಕೊಳಗಾಗಿದ್ದಾಳೆ ಎಂದಿದೆ.

“ಬಿಎಚ್‌ಯು ಕ್ಯಾಂಪಸ್‌ಗಳು ಮತ್ತು ಐಐಟಿಯಂತಹ ಉನ್ನತ ಸಂಸ್ಥೆಗಳು ಈಗ ಸುರಕ್ಷಿತವಾಗಿಲ್ಲವೇ? ಇನ್ನು ಪ್ರಧಾನಿ ಕ್ಷೇತ್ರದ ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಣ ಸಂಸ್ಥೆಯೊಳಗೆ ನಿರ್ಭಯವಾಗಿ ಓಡಾಡಲು ಸಾಧ್ಯವೇ ಇಲ್ಲವೇ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

BHU ನಲ್ಲಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಘಟಕದ ಕಾರ್ಯದರ್ಶಿ ಅಭಯ್ ಸಿಂಗ್, ಅದರ ಸದಸ್ಯರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಮತ್ತು ಆರೋಪಿಗಳನ್ನು ಶೀಘ್ರವಾಗಿ ಗುರುತಿಸಲು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಜಾರಿಗೊಳಿಸಲು ಕರೆ ನೀಡಿದರು.

ಏತನ್ಮಧ್ಯೆ, IIT-BHU ಆಡಳಿತವು ಹೊಸ ಭದ್ರತಾ ಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಕ್ಯಾಂಪಸ್‌ನೊಳಗಿನ ಎಲ್ಲಾ ಬ್ಯಾರಿಕೇಡ್‌ಗಳನ್ನು ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮುಚ್ಚಲಾಗುವುದು.

ಇದನ್ನೂ ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನೈತಿಕ ಸಮಿತಿ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

“ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಸುರಕ್ಷಿತ ಮತ್ತು ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು, ಇನ್ನು ಮುಂದೆ ಸಂಸ್ಥೆಗಳಲ್ಲಿನ ಎಲ್ಲಾ ಬ್ಯಾರಿಕೇಡ್‌ಗಳನ್ನು ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮುಚ್ಚಲಾಗುತ್ತದೆ” ಎಂದು ಐಐಟಿ-ಬಿಎಚ್‌ಯು ಆಡಳಿತವು ರಿಜಿಸ್ಟ್ರಾರ್ ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್