AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಖ್‌ಬೀರ್ ಬಾದಲ್, ಹರ್ಸಿಮ್ರತ್ ಕೌರ್ ಬಂಧನ; ದೆಹಲಿಯಲ್ಲಿ ಸೆಕ್ಷನ್ 144 ಜಾರಿ

Shiromani Akali Dal ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿಗುರುದ್ವಾರ ರಕಾಬ್ ಗಂಜ್ ಸಾಹಿಬ್‌ನಿಂದ ಸಂಸತ್ತಿನವರೆಗೆ ಎಸ್​​ಎಡಿ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಖ್‌ಬೀರ್ ಬಾದಲ್, ಹರ್ಸಿಮ್ರತ್ ಕೌರ್ ಬಂಧನ; ದೆಹಲಿಯಲ್ಲಿ ಸೆಕ್ಷನ್ 144 ಜಾರಿ
ಸುಖ್‌ಬೀರ್ ಬಾದಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 17, 2021 | 4:42 PM

Share

ದೆಹಲಿ: ಶಿರೋಮಣಿ ಅಕಾಲಿದಳ (SAD) ಮುಖ್ಯಸ್ಥ ಸುಖ್‌ಬೀರ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಸೇರಿದಂತೆ 15 ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದಕ್ಕೆ ಇವರನ್ನು ಬಂಧಿಸಿ,ಸಂಸದ್ ಮಾರ್ಗ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ನಮ್ಮನ್ನು ಬಂಧಿಸುವ ಮೊದಲು ಸುದ್ದಿಗಾರರಿಗೆ ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು ಮತ್ತು ಅವರ ವಾಹನಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ಮಾಡಿದ್ದಾರೆ ಎಂದು ಬಾದಲ್ ಹೇಳಿದ್ದಾರೆ. “ಶಾಂತಿಯುತ ಪ್ರತಿಭಟನೆಗೆ ತಡೆಯೊಡ್ಡಲಾಯಿತು. ಪಂಜಾಬ್ ಮಾತ್ರವಲ್ಲದ ಇಡೀ ದೇಶವು ತನ್ನ ಸರ್ಕಾರದ ವಿರುದ್ಧವಾಗಿದೆ ಎಂದು ಪ್ರಧಾನಿ ಮೋದಿಗೆ ಸಂದೇಶ ನೀಡಲು ಇಲ್ಲಿಗೆ ಬಂದಿದ್ದೇವೆ ಎಂದು ಬಾದಲ್ ಹೇಳಿದ್ದಾರೆ.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿಗುರುದ್ವಾರ ರಕಾಬ್ ಗಂಜ್ ಸಾಹಿಬ್‌ನಿಂದ ಸಂಸತ್ತಿನವರೆಗೆ ಎಸ್​​ಎಡಿ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯಾದ್ಯಂತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಎಎನ್​​ಐಗೆ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಶುಕ್ರವಾರ ಮುಂಜಾನೆ ಹಂಚಿಕೊಂಡ ಟ್ವೀಟ್‌ನಲ್ಲಿ, ಎಲ್ಲಾ ದೆಹಲಿ ಗಡಿಗಳನ್ನು ಮುಚ್ಚಲಾಗಿದೆ ಮತ್ತು ಪಂಜಾಬ್ ವಾಹನಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಪಕ್ಷ ಹೇಳಿದೆ. “ನಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪಂಜಾಬಿಗಳಿಗೆ ಹೇಳಲಾಗುತ್ತಿದೆ. ನಮ್ಮ ಶಾಂತಿಯುತ ಧ್ವನಿಯು ಶಕ್ತಿಗಳನ್ನು ಹೆದರಿಸಿದೆ ಎಂದು ಎಸ್‌ಎಡಿ ಟ್ವೀಟ್ ಮಾಡಿದೆ.

ಎಎನ್ಐ ಪ್ರಕಾರ, ‘ಬ್ಲಾಕ್ ಫ್ರೈಡೇ’ ಪ್ರತಿಭಟನೆಗೆ ಸುಖ್‌ಬೀರ್ ಬಾದಲ್ ಮತ್ತು ಹರ್ಸಿಮ್ರತ್ ಕೌರ್ ಬಾದಲ್ ನೇತೃತ್ವ ವಹಿಸಿದ್ದರು ಎಂದು ಹೇಳಲಾಗಿದೆ. ಈ ಹಿಂದೆ, ಎಸ್‌ಎಡಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ಸಿಂಗ್ ಚಂದುಮಾಜ್ರಾ ಅವರು ಮೆರವಣಿಗೆ ಶಾಂತಿಯುತವಾಗಿರುತ್ತದೆ ಎಂದು ಹೇಳಿದ್ದರು.

“ಮೆರವಣಿಗೆ ಶಾಂತಿಯುತವಾಗಿರುತ್ತದೆ. ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರಕ್ಕೆ ಜ್ಞಾಪನಾ ಪತ್ರವನ್ನು ನೀಡುತ್ತೇವೆ. ನಾವು ಪ್ರತಿಭಟನೆಗೆ ಅನುಮತಿ ಪಡೆಯದಿದ್ದರೂ, ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಮತ್ತು ನಮ್ಮ ಜ್ಞಾಪನಾ ಪತ್ರವನ್ನು ನೀಡುತ್ತೇವೆ ಎಂದು ಅವರು ಎಎನ್ಐಗೆ ತಿಳಿಸಿದರು.

ರಾಷ್ಟ್ರೀಯ ರಾಜಧಾನಿಯಾದ್ಯಂತ ಕೆಲವು ಪ್ರದೇಶಗಳನ್ನು ತಪ್ಪಿಸಲು ಪ್ರಯಾಣಿಕರನ್ನು ಒತ್ತಾಯಿಸಲಾಗಿದೆ.  ಪ್ರತಿಭಟನೆಯ ದೃಷ್ಟಿಯಿಂದ ಕೆಲವು ರಸ್ತೆಗಳನ್ನು ಮುಚ್ಚಲಾಗಿದೆ. ದೆಹಲಿ ಟ್ರಾಫಿಕ್ ಪೋಲಿಸ್ ಜನರು ಗುರುದ್ವಾರ ರಾಕಬ್‌ಗಂಜ್ ರಸ್ತೆ, ಆರ್‌ಎಂಎಲ್ ಆಸ್ಪತ್ರೆ, , ಅಶೋಕ ರೋಡ್ ಮತ್ತು ಬಾಬಾ ಖರಕ್ ಸಿಂಗ್ ಮಾರ್ಗ್‌ನಲ್ಲಿ ಟ್ರಾಫಿಕ್ ಅನ್ನು ತೆರವುಗೊಳಿಸುವಂತೆ ಜನರನ್ನು ಕೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆ, ಸ್ಮರಣಿಕೆಗಳ ಹರಾಜು ಇಂದಿನಿಂದ; ನೀವೂ ಭಾಗವಹಿಸಬೇಕೆ? ಮಾಹಿತಿ ಇಲ್ಲಿದೆ

(Protest march to Parliament against the Centre’s farm laws Sukhbir Badal, Harsmirat Kaur detained by Delhi police )

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ