Farmers Laws ರೈತರ ಆಂದೋಲನ ತಕ್ಷಣ ಹಿಂಪಡೆಯುವುದಿಲ್ಲ, ಸಂಸತ್​​ನಲ್ಲಿ ಕೃಷಿ ಕಾನೂನು ರದ್ದಾಗಲಿ: ರಾಕೇಶ್ ಟಿಕಾಯತ್

ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಆರಂಭವಷ್ಟೇ ಎಂದು ಹೇಳಿದ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಸಂಸತ್ತಿನಲ್ಲಿ ನಿರ್ಧಾರವನ್ನು ಅಂಗೀಕರಿಸಿದ ನಂತರವೇ ಪ್ರತಿಭಟನಾ ನಿರತ ರೈತರು ತಮ್ಮ ಮನೆಗಳಿಗೆ ಮರಳುತ್ತಾರೆ ಎಂದಿದ್ದಾರೆ.

Farmers Laws ರೈತರ ಆಂದೋಲನ ತಕ್ಷಣ ಹಿಂಪಡೆಯುವುದಿಲ್ಲ, ಸಂಸತ್​​ನಲ್ಲಿ ಕೃಷಿ ಕಾನೂನು ರದ್ದಾಗಲಿ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 19, 2021 | 11:09 AM

ದೆಹಲಿ: ರೈತರ ಆಂದೋಲನ (Farmers Protest) ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು(farm laws)  ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್​​ಪಿ (MSP) ಜೊತೆಗೆ ಸರ್ಕಾರವು ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ (Rakesh Tikait) ಟ್ವೀಟ್ ಮಾಡಿದ್ದಾರೆ. ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಆರಂಭವಷ್ಟೇ ಎಂದು ಹೇಳಿದ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಸಂಸತ್ತಿನಲ್ಲಿ ನಿರ್ಧಾರವನ್ನು ಅಂಗೀಕರಿಸಿದ ನಂತರವೇ ಪ್ರತಿಭಟನಾ ನಿರತ ರೈತರು ತಮ್ಮ ಮನೆಗಳಿಗೆ ಮರಳುತ್ತಾರೆ ಎಂದು ಪುನರುಚ್ಚರಿಸಿದರು. ದೂರವಾಣಿ ಮೂಲಕ ಹಿಂದೂಸ್ತಾನ್ ಟೈಮ್ಸ್ ಜತೆ ಮಾತನಾಡಿದ ಟಿಕಾಯತ್ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು ಸೇರಿದಂತೆ ಅನೇಕ ಸಮಸ್ಯೆಗಳು ಬಾಕಿ ಉಳಿದಿವೆ, ಇವುಗಳನ್ನು ಪ್ರಧಾನಿ ತಿಳಿಸಿಲ್ಲ. ನಾವು “ಖೂಂತಾ ತಭಿ ಉಖರೇಂಗೆ ಜಬ್ ಕಾಮ್ ಪಕ್ಕಾ ಹೋ ಜಾವೇಗಾ (ಕಾರ್ಯ ಮುಗಿದ ನಂತರ ಮಾತ್ರ ಹಿಂತಿರುಗುತ್ತೇವೆ)” ಎಂದು ಪುನರಾವರ್ತಿಸಿದರು. ಸಂಸತ್ತಿನಲ್ಲಿ ಅದನ್ನು ಸರಿಯಾಗಿ ಅಂಗೀಕರಿಸುವವರೆಗೆ ರೈತರು ಅಂತಹ ಘೋಷಣೆಗಳನ್ನು ನಂಬುವುದಿಲ್ಲ ಎಂದು ಟಿಕಾಯತ್ ಹೇಳಿದ್ದಾರೆ.

” ಇಂದು ಈ ಬೆಳವಣಿಗೆ ಬಗ್ಗೆ ಚರ್ಚಿಸಲು ಮತ್ತು ಪರಿಶೀಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕರೆಯಲಾಗುವುದು ಮತ್ತು ಅದರ ಪ್ರಕಾರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು. ಮೋದಿಯವರ ಘೋಷಣೆ ಆರಂಭವಷ್ಟೇ ಎಂದಿದ್ದಾರೆ ಟಿಕಾಯತ್.

ಆಂದೋಲನವನ್ನು ಬಲಪಡಿಸಲು ಮತ್ತು ಮುನ್ನಡೆಸಲು 600 ಕ್ಕೂ ಹೆಚ್ಚು ರೈತರು ತಮ್ಮ ತ್ಯಾಗವನ್ನು ನೀಡಿದ್ದಾರೆ ಮತ್ತು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ನಾವು ಅವರ ತ್ಯಾಗವನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್  ಪಡೆಯುವ ನಿರ್ಧಾರ  ದೇಶದ ಎಲ್ಲ ರೈತರಿಗೆ ಸಿಕ್ಕಿರುವ ಗೆಲುವು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ಪ್ರತಿಕ್ರಿಯೆ ನೀಡಿದೆ.ಈ ಹೋರಾಟದಲ್ಲಿ 700 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು  ಎಐಕೆಎಸ್ ಹೇಳಿದೆ.

ಇದನ್ನೂ ಓದಿ: PM Modi on Farm Laws: ರೈತರ ನಿರಂತರ ಹೋರಾಟ ಹಿನ್ನೆಲೆ; ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನಿ ಮೋದಿ

ಇದನ್ನೂ ಓದಿ:  PM Modi on Farm Laws: ಮೂರೂ ಕೃಷಿ ಮಸೂದೆಗಳು ವಾಪಸ್​ ತೆಗೆದುಕೊಂಡು, ರೈತರ ಕ್ಷಮೆ ಕೋರಿದ ಪ್ರಧಾನಿ ನರೇಂದ್ರ ಮೋದಿ

Published On - 10:34 am, Fri, 19 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ