ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ

| Updated By: ರಶ್ಮಿ ಕಲ್ಲಕಟ್ಟ

Updated on: Jun 16, 2022 | 12:13 PM

ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ
ಬಿಹಾರದಲ್ಲಿ ಪ್ರತಿಭಟನೆ
Follow us on

ಪಟನಾ: ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ (Bihar) ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಸಶಸ್ತ್ರ ಪಡೆಗಳ ಆಮೂಲಾಗ್ರ ನೇಮಕಾತಿ ಯೋಜನೆಯಾದ ಅಗ್ನಿಪಥ್ (Agnipath) ವಿರುದ್ಧದ ಪ್ರತಿಭಟನೆಗಳು ಇಂದು ಹಿಂಸಾಚಾರಕ್ಕೆ (violent) ತಿರುಗಿದವು. ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದರು. ಪ್ರತಿಭಟನಾಕಾರರು  Indian Army lovers ಎಂಬ ಬ್ಯಾನರ್ ಹಿಡಿದುಕೊಂಡು ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ. ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರು ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ ಉಂಟಾದ ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿಶಾಮಕಗಳನ್ನು ಬಳಸಿದ್ದಾರೆ. ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು, ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಅವರು ಕ್ಯಾಂಪ್ ಮಾಡಿದ್ದ ರೈಲ್ವೆ ಹಳಿಗಳನ್ನು ತೆರವುಗೊಳಿಸುವ ವೇಳೆ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ತೋರಿಸಿದ್ದಾರೆ.


ನಾವಡಾದಲ್ಲಿ ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡಾ ನಿಲ್ದಾಣದಲ್ಲಿ ರೈಲು ಹಳಿಗಳನ್ನು ತಡೆದು ಹಳಿಗಳ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಪ್ರತಿಭಟನಾಕಾರ ಗುಂಪು ರೈಲ್ವೇ ಆಸ್ತಿಯನ್ನು ಹಾನಿಗೊಳಿಸಿ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದೆ.

ಅಗ್ನಿಪಥ್ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಜವಾನರ ನೇಮಕಾತಿಯನ್ನು ಪ್ರಸ್ತಾಪಿಸುತ್ತದೆ ಮತ್ತು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದೆ ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ. ಹೊಸ ನೇಮಕಾತಿ ಯೋಜನೆಯು ಸರ್ಕಾರದ ಬೃಹತ್ ಸಂಬಳ ಮತ್ತು ಪಿಂಚಣಿ ಬಿಲ್‌ಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 11:54 am, Thu, 16 June 22