Arvind Kejriwal: ನಿಮ್ಮ ಬಗ್ಗೆ ಹೆಮ್ಮೆಯಾಗುತ್ತಿದೆ; ಭ್ರಷ್ಟಾಚಾರಿ ಸಚಿವರನ್ನು ಕಿತ್ತೊಗೆದ ಸಿಎಂ ಭಗವಂತ್ ಮಾನ್ಗೆ ಕೇಜ್ರಿವಾಲ್ ಶಹಬ್ಬಾಸ್
ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಇಂದು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿ ಭ್ರಷ್ಟಾಚಾರ ಆರೋಪದ ಮೇಲೆ ಬಂಧಿಸಲಾಗಿದೆ.
ನವದೆಹಲಿ: ಭ್ರಷ್ಟಾಚಾರದ ಆರೋಪದಲ್ಲಿ ಪಂಜಾಬ್ ಸರ್ಕಾರದ ಆರೋಗ್ಯ ಸಚಿವರನ್ನು ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ವಜಾ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಮತ್ತು ಆಮ್ ಆದ್ಮಿ (AAP) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನು ಭಗವಂತ್ ಮಾನ್ ಬಗ್ಗೆ ಹೆಮ್ಮೆಪಡುತ್ತೇನೆ. ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಅವರು ತೆಗೆದುಕೊಂಡ ನಿರ್ಧಾರ ಕಂಡು ನಾನು ಭಾವುಕನಾಗಿದ್ದೇನೆ ಎಂದು ಟ್ವಿಟ್ಟರ್‌ನಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಬರೆದುಕೊಂಡಿದ್ದಾರೆ. “ನಿಮ್ಮ ಬಗ್ಗೆ ಹೆಮ್ಮೆ ಇದೆ ಭಗವಂತ್. ನಿಮ್ಮ ಕಾರ್ಯವು ನನ್ನ ಕಣ್ಣಲ್ಲಿ ನೀರು ತರಿಸಿದೆ. ಇಂದು ಇಡೀ ರಾಷ್ಟ್ರ ಆಮ್ ಆದ್ಮಿ ಪಕ್ಷದ (ಎಎಪಿ) ಬಗ್ಗೆ ಹೆಮ್ಮೆ ಪಡುತ್ತಿದೆ.” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಇಂದು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿ ಭ್ರಷ್ಟಾಚಾರ ಆರೋಪದ ಮೇಲೆ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ಸಿಎಂ ಭಗವಂತ್ ಮಾನ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Proud of you Bhagwant. Ur action has brought tears to my eyes.
Whole nation today feels proud of AAP https://t.co/glg6LxXqgs
— Arvind Kejriwal (@ArvindKejriwal) May 24, 2022
“ನನ್ನ ಸರ್ಕಾರದ ಒಬ್ಬ ಸಚಿವರು ತಮ್ಮ ಇಲಾಖೆಯ ಪ್ರತಿ ಟೆಂಡರ್ ಅಥವಾ ಖರೀದಿಯಿಂದ ಶೇ. ಒಂದರಷ್ಟು ಕಮಿಷನ್ ಕೇಳುತ್ತಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ನಾನು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಪ್ರಕರಣ ನನಗೆ ಮಾತ್ರ ತಿಳಿದಿತ್ತು. ಇದು ಮಾಧ್ಯಮ ಅಥವಾ ಪ್ರತಿಪಕ್ಷಗಳಿಗೆ ತಿಳಿದಿರಲಿಲ್ಲ. “ಎಂದು ಭಗವಂತ್ ಮಾನ್ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಲಂಚ ಪಡೆದಿದ್ದಕ್ಕೆ ಆರೋಗ್ಯ ಸಚಿವರನ್ನೇ ವಜಾಗೊಳಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್
ಲಂಚ ಪಡೆಯುತ್ತಿದ್ದ ನಮ್ಮ ಸಂಪುಟದ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಸಂಪುಟದಿಂದ ಕೈಬಿಡುತ್ತಿದ್ದೇನೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನವನ್ನೂ ನೀಡುತ್ತಿದ್ದೇನೆ,’’ ಎಂದು ಹೇಳಿದ ಅವರು, ಆ ಸಚಿವರ ಹೆಸರು ವಿಜಯ್ ಸಿಂಗ್ಲಾ. ಅವರು ನಮ್ಮ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು ಎಂದಿದ್ದಾರೆ.
आम आदमी पार्टी का जन्म ईमानदार सिस्टम कायम करने के लिए हुआ है…@ArvindKejriwal जी ने हमेशा कहा है कि भ्रष्टाचार को बर्दाश्त नहीं करेंगे चाहे कोई अपना हो या बेगाना
स्वास्थ्य मंत्री के खिलाफ भ्रष्टाचार के सबूत मिलते ही तुरंत बर्खास्त किया…साथ ही FIR के आदेश दिए pic.twitter.com/0g9nqGteHb
— Bhagwant Mann (@BhagwantMann) May 24, 2022
ವಿಜಯ್ ಸಿಂಗ್ಲಾ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಶೇ.1ರಷ್ಟು ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದರು. ಅದರ ದೂರು ಸಿಎಂ ಭಗವಂತ್ ಮಾನ್ ಅವರಿಗೆ ತಲುಪಿತ್ತು. ಅವರು ಅದರ ಬಗ್ಗೆ ರಹಸ್ಯವಾಗಿ ತನಿಖೆಯನ್ನೂ ಮಾಡಿದ್ದರು. ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದ ಬಳಿಕ ಸಚಿವರನ್ನು ಕರೆಸಲಾಯಿತು. ಸಚಿವರು ತಪ್ಪನ್ನು ಒಪ್ಪಿಕೊಂಡ ಬೆನ್ನಲ್ಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ. ಅವರ ವಿರುದ್ಧ ಪೊಲೀಸ್ ಕೇಸ್ ಕೂಡ ದಾಖಲಾಗಿದೆ. ಸಚಿವರು ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.
“ನಾನು ಒಂದು ರೂ. ಭ್ರಷ್ಟಾಚಾರವನ್ನು ಕೂಡ ಸಹಿಸುವುದಿಲ್ಲ. ನಾವು ಪಂಜಾಬ್ ಅನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡಲು ಬಯಸುತ್ತೇವೆ” ಎಂದು ಭಗವಂತ್ ಮಾನ್ ಪ್ರತಿಪಾದಿಸಿದ್ದಾರೆ. 52 ವರ್ಷದ ವಿಜಯ್ ಸಿಂಗ್ಲಾ ಅವರು ಮಾನ್ಸಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶುಭದೀಪ್ ಸಿಂಗ್ ಸಿಧು ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:28 pm, Tue, 24 May 22