ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ತುರ್ತು ಬಳಕೆಗೆ DCGI ಒಪ್ಪಿಗೆ; ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ ಮೋದಿ

ಭಾರತದಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದ ಹಿನ್ನೆಲೆಯಿಂದಾಗಿ ಲಸಿಕೆ ಅಭಿವೃದ್ಧಿಗೆ ಶ್ರಮಿಸಿದ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ತುರ್ತು ಬಳಕೆಗೆ DCGI ಒಪ್ಪಿಗೆ; ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ ಮೋದಿ
ಪ್ರಧಾನಿ ಮೋದಿ
Edited By:

Updated on: Jan 03, 2021 | 12:11 PM

ದೆಹಲಿ: ಭಾರತದಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್ ಬಳಕೆಗೆ  ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ
(ಡಿಸಿಜಿಐ) ಅನುಮತಿ ನೀಡಿದ ಹಿನ್ನೆಲೆಯಲ್ಲಿ ಲಸಿಕೆ ಅಭಿವೃದ್ಧಿಗೆ ಶ್ರಮಿಸಿದ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಕೊರೊನಾ ಹೋರಾಟದಲ್ಲಿ ಇದು ನಿರ್ಣಾಯಕ ತಿರುವಾಗಿದ್ದು, ಆಸ್ಪತ್ರೆ ಸಿಬ್ಬಂದಿ, ನೈರ್ಮಲ್ಯ ಕಾರ್ಮಿಕರು ಮತ್ತು ಎಲ್ಲಾ ಕೊರೊನಾ ಯೋಧರಿಗೆ ನಮ್ಮ ಕೃತಜ್ಞತೆಗಳು. ಪ್ರತಿಕೂಲ ಸಂದರ್ಭಗಳಲ್ಲಿ ಅನೇಕ ಜೀವಗಳನ್ನು ಉಳಿಸಿದ್ದಕ್ಕಾಗಿ ನಾವು ಅವರಿಗೆ ಶಾಶ್ವತವಾಗಿ ಕೃತಜ್ಞರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಜೊತೆಗೆ ತುರ್ತು ಬಳಕೆಗೆ ಅನುಮೋದನೆ ನೀಡಲಾದ ಕೊವಿಶೀಲ್ಡ್, ಕೊವ್ಯಾಕ್ಸಿನ್ ಈ ಎರಡು ಲಸಿಕೆಗಳು ಭಾರತದಲ್ಲಿ ತಯಾರಾಗಿದೆ. ಭಾರತದಲ್ಲಿ ತಯಾರಿಸಲಾಗಿದೆಯೆಂದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ಎನಿಸುತ್ತದೆ. ಆತ್ಮನಿರ್ಭರ ಭಾರತದ ಕನಸನ್ನು ಈಡೇರಿಸಲು ವಿಜ್ಞಾನಿಗಳ ಉತ್ಸಾಹವನ್ನು ಇದು ತೋರಿಸುತ್ತದೆ ಎಂದು ಮೋದಿ ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಕೊವಿಶೀಲ್ಡ್​ ಲಸಿಕೆಗೆ ದರ ನಿಗದಿ.. ಕೇಂದ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸೆರಮ್ ಸಿದ್ಧ.. ಬಳಕೆಯಾಗುತ್ತಾ ಪಿಎಂ ಕೇರ್ಸ್​ ನಿಧಿ?