AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

P T Usha: ಮೊದಲ ಬಾರಿಗೆ ರಾಜ್ಯಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ ಪಿಟಿ ಉಷಾ, ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ

ಪಿ.ಟಿ ಉಷಾ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಂತರ ಮೊದಲ ಬಾರಿಗೆ ಗುರುವಾರ ರಾಜ್ಯಸಭೆಯ ಕಲಾಪದ ಅಧ್ಯಕ್ಷತೆ ವಹಿಸಿದ್ದರು. ಈ ಬಗ್ಗೆ ಪಿ.ಟಿ ಉಷಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಆ ಕ್ಷಣದ ಚಿಕ್ಕ ಕ್ಲಿಪ್​ನ್ನು ಪೋಸ್ಟ್ ಮಾಡಿದ್ದಾರೆ.

P T Usha: ಮೊದಲ ಬಾರಿಗೆ ರಾಜ್ಯಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ ಪಿಟಿ ಉಷಾ, ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ
PT Usha
ಅಕ್ಷಯ್​ ಪಲ್ಲಮಜಲು​​
|

Updated on:Feb 09, 2023 | 2:54 PM

Share

ಸಂಸತ್ತಿನ ರಾಜ್ಯಸಭೆಯಲ್ಲಿ (Rajya Sabha) ಮಧ್ಯಾಹ್ನದ ಚರ್ಚೆಗೆ ಸಭ್ಯಾಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅನುಪಸ್ಥಿತಿಯ ಸಮಯದಲ್ಲಿ ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಥ್ಲೀಟ್ ಕ್ರೀಡಾಪಟು ಪಿ.ಟಿ ಉಷಾ (PT Usha) ಗುರುವಾರ ರಾಜ್ಯಸಭೆಯ ಕಲಾಪದ ಅಧ್ಯಕ್ಷತೆ ವಹಿಸಿದ್ದರು. ಈ ಬಗ್ಗೆ ಪಿ.ಟಿ ಉಷಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಆ ಕ್ಷಣದ ಚಿಕ್ಕ ಕ್ಲಿಪ್​ನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಪೋಸ್ಟ್​ನಲ್ಲಿ ನನಗೆ ಇದು ಒಂದು ಮೈಲಿಗಲ್ಲು ಮತ್ತು ಹೆಮ್ಮೆಯ ಕ್ಷಣ ಎಂದು ವಿವರಿಸಿದ್ದಾರೆ. ಜುಲೈ 2022 ರಲ್ಲಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಪಿ.ಟಿ ಉಷಾ ಮೇಲ್ಮನೆಗೆ ನಾಮನಿರ್ದೇಶನಗೊಂಡರು. ನವೆಂಬರ್‌ನಲ್ಲಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷರಾಗಿ ಆಯ್ಕೆಯಾದರು.

ಫ್ರಾಂಕ್ಲಿನ್ ಡಿ. ರೂಸ್‌ವೆಲ್ಟ್ ಅವರು ಹೇಳಿದಂತೆ ‘ಮಹಾ ಶಕ್ತಿಯು ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ನಾನು ರಾಜ್ಯಸಭೆಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದಾಗ ನನಗೆ ಅನಿಸಿತು. ನನ್ನ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯೊಂದಿಗೆ ನಾನು ಈ ಪ್ರಯಾಣವನ್ನು ಕೈಗೊಂಡಾಗ ಈ ದೊಡ್ಡ ಮೈಲಿಗಲ್ಲುಗಳನ್ನು ಸೃಷ್ಟಿಸಲು ಸಾಧ್ಯವಾಗಿದೆ ಎಂದು ಪಿ.ಟಿ ಉಷಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಅವರು ಈ ವೀಡಿಯೊವನ್ನು ಪೋಸ್ಟ್ ಮಾಡಿದ ಟ್ವಿಟರ್​ನಲ್ಲಿ ಅನೇಕರು ಕಮೆಂಟ್ ಮಾಡಿದ್ದಾರೆ. ಜೊತೆಗೆ ರಾಜ್ಯಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡದಕ್ಕೆ ಅಭಿನಂದಿಸಿದ್ದಾರೆ.

ಇದನ್ನೂ ಓದಿ: PT Usha: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಭೇಟಿಯಾಗಿ ಕೃತಜ್ಞತೆ ಅರ್ಪಿಸಿದ ನೂತನ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ

ನಿಮ್ಮ ಬಗ್ಗೆ ತುಂಬಾ ಹೆಮ್ಮೆಯಿದೆ ಉಷಾ, ನಿಮ್ಮ ಮುಂದಿನ ಪ್ರಯಾಣಕ್ಕೆ ಶುಭವಾಗಲಿ. ಹೀಗೆ ಮುಂದುವರಿಯಿರಿ ಮತ್ತು ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ತುಂಬಾ ಹೆಮ್ಮೆ ಅನಿಸುತ್ತಿದೆ. ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ ಟ್ವಿಟರ್​ ಬಳಖೆದಾರರೂ ಹೇಳಿದ್ದಾರೆ.

ಇದು ನಿಜವಾದ ಮಹಿಳಾ ಸಬಲೀಕರಣ, ಆಲ್ ದಿ ಬೆಸ್ಟ್ ಮತ್ತು ಮತ್ತೆ ನೀವು ಈ ದೇಶದ ಕೀರ್ತಿಯನ್ನು ಎತ್ತರಕ್ಕೆ ತರುವ ಕಾರ್ಯವನ್ನು ಮಾಡುತ್ತೀರಾ ಎಂದು ಹೇಳಿದ್ದಾರೆ. ಡಿಸೆಂಬರ್‌ನಲ್ಲಿ, ಸಂಸತ್ತು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಲಭ್ಯವಿಲ್ಲದಿದ್ದಾಗ ಸದನದ ಕಲಾಪಗಳನ್ನು ನಡೆಸುವ ರಾಜ್ಯಸಭೆಯ ಉಪಾಧ್ಯಕ್ಷರ ಸಮಿತಿಯ ಭಾಗವಾದ ಮೊದಲ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.

Published On - 2:53 pm, Thu, 9 February 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ