ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಟೀಕಿಸಿದ ಪಿಟಿ ಉಷಾ

ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆ ನಡೆಸಲು ನಿರ್ಧರಿಸುವ ಮೊದಲು ತಮ್ಮ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರಲು ಕಾಯಬೇಕಿತ್ತು. ಈ. ಪ್ರತಿಭಟನೆಯು ಅಶಿಸ್ತನ್ನು ತೋರಿಸುತ್ತದೆ. ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಸಮಿತಿಯ ವರದಿಗಾಗಿಯಾದರೂ ಕಾಯಬೇಕಿತ್ತು.

ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಟೀಕಿಸಿದ ಪಿಟಿ ಉಷಾ
ಪಿಟಿ ಉಷಾ
Follow us
ರಶ್ಮಿ ಕಲ್ಲಕಟ್ಟ
|

Updated on: Apr 27, 2023 | 7:49 PM

ದೆಹಲಿ: ಕುಸ್ತಿ ಫೆಡರೇಷನ್‌ (Wrestling Federation India)ಮುಖ್ಯಸ್ಥ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ (Brijbhushan Sharan Singh) ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ನಡೆಸುತ್ತಿರುವ ಸಾರ್ವಜನಿಕ ಪ್ರತಿಭಟನೆಯನ್ನು ಭಾರತೀಯ ಒಲಿಂಪಿಕ್‌ ಸಂಸ್ಥೆಯ ಮುಖ್ಯಸ್ಥೆ ಪಿಟಿ ಉಷಾ (PT Usha) ತೀವ್ರವಾಗಿ ಟೀಕಿಸಿದ್ದಾರೆ. ಇತ್ತ ಬಿಜೆಪಿ ಸಂಸದ ಸಿಂಗ್ ಆರೋಪಗಳನ್ನು ನಿರಾಕರಿಸಿದ್ದು, ತಾನು ನಿರಪರಾಧಿ ಎಂದು ಸಾಬೀತುಪಡಿಸಲು ಉಗ್ರ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಮತ್ತು ದೀಪಕ್ ಪುನಿಯಾ ಅವರು ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು ತಮ್ಮ ದೂರಿನ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ತುರ್ತಾಗಿ ಕ್ರಮಕೈಗೊಳ್ಳುವಂತೆ ಉಷಾ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆ ನಡೆಸಲು ನಿರ್ಧರಿಸುವ ಮೊದಲು ತಮ್ಮ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರಲು ಕಾಯಬೇಕಿತ್ತು. ಈ ಪ್ರತಿಭಟನೆಯು ಅಶಿಸ್ತನ್ನು ತೋರಿಸುತ್ತದೆ. ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಸಮಿತಿಯ ವರದಿಗಾಗಿಯಾದರೂ ಕಾಯಬೇಕಿತ್ತು. ಅವರು ಮಾಡಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ಋಣಾತ್ಮಕ ವಿಧಾನವಾಗಿದೆ ಎಂದು ಉಷಾ ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾರತ ಕುಸ್ತಿ ಫೆಡರೇಶನ್ (WFI) ಮತ್ತು ಅದರ ಮುಖ್ಯಸ್ಥ ಸಿಂಗ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದ್ದರು. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯಕ್ಕೆ ವರದಿ ನೀಡುವಂತೆ ಹೇಳಲಾಗಿದ್ದ ಸಮಿತಿಯು ಏಪ್ರಿಲ್ 5 ರಂದು ಅದನ್ನು ನೀಡಿತ್ತು. ಆದರೆ ಆರು ಸದಸ್ಯರ ಸಮಿತಿಯ ವರದಿಯನ್ನು ಸಚಿವಾಲಯವು ಇನ್ನೂ ಬಹಿರಂಗಗೊಳಿಸಿಲ್ಲ.

ನರೇಂದ್ರ ಮೋದಿ ಸರ್ಕಾರವು ದೇಶದ ಕ್ರೀಡಾ ಪಟುಗಳಿಗಾಗಿ ಅತ್ಯುತ್ತಮ ಕೆಲಸ ಮಾಡಿದೆ. ಸರ್ಕಾರವು ಕ್ರೀಡಾಪಟುಗಳಿಗೆ ಸಹಾಯ ಮಾಡಲು ಸಾಕಷ್ಟು ಖರ್ಚು ಮಾಡುತ್ತದೆ. ಸುಮಾರು 3,000 ಆಟಗಾರರು ತಮ್ಮ ಊಟ, ವಸತಿ ಮತ್ತು ತರಬೇತಿಗಾಗಿ ₹ 5 ಲಕ್ಷ ಪಡೆಯುತ್ತಾರೆ. ಅವರು ವೈಯಕ್ತಿಕ ವೆಚ್ಚಕ್ಕಾಗಿ ₹ 1.20 ಲಕ್ಷ ಪಡೆಯುತ್ತಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್ ಹೇಳಿದ್ದಾರೆ.

ಕೆಲವು ಕುಸ್ತಿಪಟುಗಳು (ದೆಹಲಿಯಲ್ಲಿ) ಜಂತರ್ ಮಂತರ್‌ನಲ್ಲಿ ಕುಳಿತಿದ್ದರು. ಅವರೊಂದಿಗೆ ಯಾರು ಮಾತನಾಡಿದರು? ನಾನು ಹಿಮಾಚಲ ಪ್ರದೇಶದಲ್ಲಿ ನನ್ನ ಎಲ್ಲಾ ಕಾರ್ಯಕ್ರಮಗಳನ್ನು ಬಿಟ್ಟು 12 ಗಂಟೆಗಳ ಕಾಲ ಅವರು ಹೇಳುವುದನ್ನು ಆಲಿಸಿದೆ. ಒಂದು ದಿನ ಏಳು ಗಂಟೆಗಳು, ಮರುದಿನ ಐದು ಗಂಟೆಗಳಿಗಿಂತ ಹೆಚ್ಚು. ನಾವು ಪತ್ರಿಕಾಗೋಷ್ಠಿ ನಡೆಸಿದ್ದೇವೆ. ತಡರಾತ್ರಿಯೇ ನಾವು ಸಮಿತಿ ಮಾಡಿದೆವು. ಆಟಗಾರರ ಜೊತೆಗೆ ನಿಂತು ಅವರಿಗೆ ಸಹಾಯ ಮಾಡುವ ಬಗ್ಗೆ ನರೇಂದ್ರ ಮೋದಿ ಸರ್ಕಾರ ಭರವಸೆ ನೀಡಿದೆ. ಕ್ರೀಡೆ ಮತ್ತು ಆಟಗಾರರಿಗೆ ನಾವು ಆದ್ಯತೆ ನೀಡುತ್ತೇವೆ. ನಾವು ಅವರೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡುತ್ತಾ ಕಣ್ಣೀರಿಟ್ಟ ಮೃತ ಐಎಎಸ್ ಅಧಿಕಾರಿ ಕೃಷ್ಣಯ್ಯ ಮಗಳು

ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿರುವ ಬಿಜೆಪಿ ಸಂಸದರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಚರ್ಚಿಸಲು ಪ್ರತಿಭಟನಾನಿರತ ಕುಸ್ತಿಪಟುಗಳು ಪ್ರಧಾನಿ ಮೋದಿಯವರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದರು.

ಪಿಎಂ ಮೋದಿ ಸರ್ ಬೇಟಿ ಬಚಾವೋ ಮತ್ತು ಬೇಟಿ ಪಢಾವೋ ಬಗ್ಗೆ ಮಾತನಾಡುತ್ತಾರೆ. ಪ್ರತಿಯೊಬ್ಬರ ‘ಮನ್ ಕಿ ಬಾತ್’ ಕೇಳುತ್ತಾರೆ. ಅವರು ನಮ್ಮ ‘ಮನ್ ಕಿ ಬಾತ್’ ಅನ್ನು ಕೇಳಲು ಸಾಧ್ಯವಿಲ್ಲವೇ? ನಾವು ಪದಕಗಳನ್ನು ಗೆದ್ದಾಗ ಅವರು ನಮ್ಮನ್ನು ಮನೆಗೆ ಕರೆದು ಕೊಡುತ್ತಾರೆ. ನಮಗೆ ತುಂಬಾ ಗೌರವವಿದೆ. ನಮ್ಮನ್ನು ಅವರ ಹೆಣ್ಣುಮಕ್ಕಳು ಎಂದು ಕರೆಯುತ್ತಾರೆ. ಇಂದು ಅವರು ನಮ್ಮ ‘ಮನ್ ಕಿ ಬಾತ್’ ಅನ್ನು ಕೇಳಬೇಕೆಂದು ನಾವು ಅವರಿಗೆ ಮನವಿ ಮಾಡುತ್ತೇವೆ ಎಂದು ರಿಯೊ ಗೇಮ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಸುದ್ದಿಗಾರರಿಗೆ ತಿಳಿಸಿದರು. ಡಬ್ಲ್ಯುಎಫ್‌ಐ ಮುಖ್ಯಸ್ಥರು ತಮ್ಮ ವಿರುದ್ಧದ ಆರೋಪಗಳನ್ನು ಉಲ್ಲೇಖಿಸುವ ವಿಡಿಯೊ ಸಂದೇಶದಲ್ಲಿ ಕುಸ್ತಿಪಟುಗಳ ಆರೋಪವನ್ನು ತಪ್ಪಾಗಿ ಸಾಬೀತುಪಡಿಸಲು ಹೋರಾಡುವುದಾಗಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್