ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿಟಿ ಉಷಾ

ಖ್ಯಾತ ಮಾಜಿ ಅಥ್ಲೀಟ್ ಪಿಟಿ ಉಷಾ ಅವರು ರಾಜ್ಯಸಭಾ ಸದಸ್ಯೆಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 6 ರಂದು ಸರ್ಕಾರದಿಂದ ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು.

ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿಟಿ ಉಷಾ
PT Usha
TV9kannada Web Team

| Edited By: ಅಕ್ಷಯ್​ ಕುಮಾರ್​​

Jul 20, 2022 | 1:08 PM

ನವದೆಹಲಿ: ಖ್ಯಾತ ಮಾಜಿ ಅಥ್ಲೀಟ್ ಪಿಟಿ ಉಷಾ ಅವರು ರಾಜ್ಯಸಭಾ ಸದಸ್ಯೆಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 6 ರಂದು ಸರ್ಕಾರದಿಂದ ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು. ಸಂಗೀತ ಸಂಯೋಜಕ ಇಳಯರಾಜ, ಲೋಕೋಪಕಾರಿ ವೀರೇಂದ್ರ ಹೆಗ್ಗಡೆ ಮತ್ತು ಚಲನಚಿತ್ರ ನಿರ್ದೇಶಕ ಕೆ ವಿ ವಿಜಯೇಂದ್ರ ಪ್ರಸಾದ್ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಉಷಾ ಅವರು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದ ಪ್ರಸಿದ್ಧ ಕ್ರೀಡಾಪಟು, ಭಾರತದ ಅತ್ಯಂತ ಅಪ್ರತಿಮ ಕ್ರೀಡಾಪಟುಗಳಲ್ಲಿ ಒಬ್ಬರು. ಕ್ರೀಡೆಯಲ್ಲಿ, ವಿಶೇಷವಾಗಿ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ಗಳಲ್ಲಿ ವೃತ್ತಿಜೀವನವನ್ನು ಆರಂಭಿಸುವ ಕನಸು ಕಂಡಿರುವ ದೇಶಾದ್ಯಂತ ಲಕ್ಷಾಂತರ ಯುವತಿಯರಿಗೆ ಅವರು ಮಾದರಿ ಮತ್ತು ಸ್ಫೂರ್ತಿಯಾಗಿದ್ದಾರೆ.

ವಿಶ್ವ ಜೂನಿಯರ್ ಇನ್ವಿಟೇಶನಲ್ ಮೀಟ್, ಏಷ್ಯನ್ ಚಾಂಪಿಯನ್‌ಶಿಪ್‌ ಗಳು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿರುವ ಕಾರಣ ಆಕೆಯನ್ನು ಪಯ್ಯೋಲಿ ಎಕ್ಸ್‌ಪ್ರೆಸ್ ಎಂದು  ಕರೆಯಲಾಗುತ್ತದೆ. ಅವರು ತಮ್ಮ ವೃತ್ತಿಜೀವನದಲ್ಲಿ ಅನೇಕ ರಾಷ್ಟ್ರೀಯ ಮತ್ತು ಏಷ್ಯನ್ ದಾಖಲೆಗಳನ್ನು ಮಾಡಿದ್ದಾರೆ.

1984 ರ ಒಲಂಪಿಕ್ಸ್‌ನಲ್ಲಿ, ಅವರು ಮಹಿಳಾ 400M ಹರ್ಡಲ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು 1/100 ಸೆಕೆಂಡ್‌ನಿಂದ ಕಂಚಿನ ಪದಕವನ್ನು ಕಳೆದುಕೊಂಡಿದ್ದರಿಂದ ಫೋಟೋ-ಫಿನಿಶ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಭಾರತದ ಮೊದಲ ಪದಕವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ನಿವೃತ್ತಿಯ ನಂತರ, ಅವರು ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಅನ್ನು ಪ್ರಾರಂಭಿಸಿದರು, ಇದು ಪ್ರತಿಭಾವಂತ ಯುವಕರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ

ಅರ್ಜುನ ಪ್ರಶಸ್ತಿ ಮತ್ತು ಪದ್ಮಶ್ರೀ ಪುರಸ್ಕೃತೆ ಉಷಾ ಅವರಿಗೆ  ಬಿಜೆಪಿಯ ನಾಯಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಭವ್ಯ ಸ್ವಾಗತ ಕೋರಲಾಯಿತು. ಲೋಕಸಭಾ ಸದಸ್ಯ ಮನೋಜ್ ತಿವಾರಿ ಮತ್ತು ಪಕ್ಷದ ದೆಹಲಿ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್‌ದೇವ ನೇತೃತ್ವದ ಬಿಜೆಪಿ ನಿಯೋಗ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada