AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ​ ಸ್ವಾಮಿ ಆಗ್ರಹಿಸಿದ್ದಾರೆ.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ
ಧರಣಿ ನಿರತ ಮುಖ್ಯಮಂತ್ರಿ (ಎಡ)-ಕಿರಣ್​ ಬೇಡಿ (ಬಲ)
Lakshmi Hegde
| Edited By: |

Updated on: Jan 10, 2021 | 2:04 PM

Share

ಪುದುಚೇರಿ: ಇಲ್ಲಿನ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ನಡುವಿನ ಮನಸ್ತಾಪ, ಜಟಾಪಟಿ ಹೊಸದಲ್ಲ. ಅಲ್ಲಿ ಕಿರಣ್​ ಬೇಡಿ ಸರ್ಕಾರದ ಆಡಳಿತಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಆರೋಪವನ್ನು ಸಿಎಂ ಮತ್ತು ಅವರ ಕ್ಯಾಬಿನೆಟ್​ ಮಂತ್ರಿಗಳು ಮಾಡುತ್ತಲೇ ಬಂದಿದ್ದಾರೆ.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ. ಯಾವುದೇ ಹೊಸ ಯೋಜನೆ ಅನುಷ್ಠಾನಕ್ಕೂ ಬಿಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರದ ಸಚಿವರು, ಶಾಸಕರು ಜ.8ರಿಂದ ರಾಜ್ ​ನಿವಾಸ್​ ಎದುರು ನಾಲ್ಕು ದಿನಗಳ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​ ನೇತೃತ್ವದ ಸೆಕ್ಯೂಲರ್​ ಡೆಮಾಕ್ರಟಿಕ್​ ಅಲಯನ್ಸ್​ದೊಂದಿಗೆ, ಸಿಪಿಐ, ಸಿಪಿಐ (ಎಂ), ವಿಸಿಕೆ (Viduthalai Chiruthaigal Katchi) ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ್​ ಸ್ವಾಮಿ ಆಗ್ರಹಿಸಿದ್ದಾರೆ. ಧರಣಿ ಕುಳಿತಿರುವ ಮುಖ್ಯಮಂತ್ರಿ ಮತ್ತು ಸಚಿವರು, ಮುಖಂಡರು ಕೈಯಲ್ಲಿ ಕಿರಣ್​ ಬೇಡಿ ವಿರುದ್ಧದ ಘೋಷಣೆಗಳುಳ್ಳ ಪೋಸ್ಟರ್​ಗಳನ್ನು ಹಿಡಿದಿದ್ದಾರೆ. ಕಾರ್ಪೊರೇಟ್ ಮೋದಿ ಕ್ವಿಟ್​, ಕ್ವಿಟ್​, ಕಿರಣ್ ಬೇಡಿಯನ್ನು ಹುದ್ದೆಯಿಂದ ಕೆಳಗಳಿಸಿ ಎಂಬಂಥ ಘೋಷಣೆಗಳನ್ನು ಪೋಸ್ಟರ್​ನಲ್ಲಿ ನೋಡಬಹುದು.

ನಮ್ಮ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸಲು ಕಿರಣ್​ ಬೇಡಿ ಅವಕಾಶ ನೀಡುತ್ತಿಲ್ಲ. ನಮ್ಮ ನಿತ್ಯದ ಆಡಳಿತದಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು