Puducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​

ಈ ಬಾರಿ ಇಲ್ಲಿ ಎನ್​ಡಿಎ ಮುನ್ನಡೆಯಲಿದೆ. ಎನ್​ಡಿಒ ಒಕ್ಕೂಟದ ಆಲ್​ ಇಂಡಿಯಾ ಎನ್​ಆರ್ ಕಾಂಗ್ರೆಸ್ ಮುಖ್ಯಸ್ಥ​ (AINRC), ಮಾಜಿ ಮುಖ್ಯಮಂತ್ರಿ ಎನ್​.ರಂಗಸ್ವಾಮಿ ಅವರು ಯಾನಮ್​ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದರು. ಆದರೆ ಈಗ ಅವರು ಹಿನ್ನಡೆಯಲ್ಲಿದ್ದಾರೆ.

Puducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​
ಪುದುಚೇರಿಯ ಮತ ಎಣಿಕೆ ಕೇಂದ್ರ
Follow us
Lakshmi Hegde
|

Updated on: May 02, 2021 | 3:17 PM

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಎನ್​ಡಿಎ ಮೈತ್ರಿ ಕೂಟ ಅಧಿಕಾರ ಹಿಡಿಯುವತ್ತ ದಾಪುಗಾಲು ಹಾಕುತ್ತಿದೆ. ಒಟ್ಟು 30 ಕ್ಷೇತ್ರಗಳಿದ್ದು ಅದರಲ್ಲಿ 17ಕ್ಷೇತ್ರಗಳಲ್ಲಿ ಎನ್​ಡಿಎ ಮೈತ್ರಿ ಮುನ್ನಡೆಯಲಿದ್ದು, 11ರಲ್ಲಿ ಯುಪಿಎ ಮುನ್ನಡೆ ಸಾಧಿಸಿದೆ.ಪುದುಚೇರಿಯಲ್ಲಿ ಇಂದು ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಈ ಹಿಂದಿನ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತು ಮಾಡಲಾಗದೆ ಇಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯಾಗಿತ್ತು. ಏಪ್ರಿಲ್​ 6ರಂದು ಚುನಾವಣೆ ನಡೆದಿತ್ತು.

ಒಟ್ಟು 30 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಯಲ್ಲಿ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಡಿಎಂಕೆ 13 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಹಾಗೇ ಬಿಜೆಪಿ+ ಎಐಎನ್​​ಆರ್​ಸಿ + ಎಐಎಡಿಎಂಕೆ ಮೈತ್ರಿಯಲ್ಲಿ ಬಿಜೆಪಿ 9, ಎಐಎನ್​ಆರ್​ಸಿ 16 ಮತ್ತು ಎಐಎಡಿಎಂಕೆ 5 ಸೀಟುಗಳನ್ನು ಹಂಚಿಕೊಂಡಿದ್ದವು. 2016ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ 16 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿತ್ತು.

ಈ ಬಾರಿ ಇಲ್ಲಿ ಎನ್​ಡಿಎ ಮುನ್ನಡೆಯಲಿದೆ. ಎನ್​ಡಿಒ ಒಕ್ಕೂಟದ ಆಲ್​ ಇಂಡಿಯಾ ಎನ್​ಆರ್ ಕಾಂಗ್ರೆಸ್ ಮುಖ್ಯಸ್ಥ​ (AINRC), ಮಾಜಿ ಮುಖ್ಯಮಂತ್ರಿ ಎನ್​.ರಂಗಸ್ವಾಮಿ ಅವರು ಯಾನಮ್​ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದರು. ಆದರೆ ಈಗ ಅವರು ಹಿನ್ನಡೆಯಲ್ಲಿದ್ದಾರೆ. ಹಾಗೇ ಕದಿರ್ಗಾಮಮ್​ ಕ್ಷೇತ್ರದಲ್ಲಿ ಎಐಎನ್​ಆರ್​​ಸಿಯ ಎಸ್​.ರಮೇಶ್ ಅವರು ಕಾಂಗ್ರೆಸ್​ನ ಪಿ.ಸೆಲ್ವನಡಾನೆ ವಿರುದ್ಧ 12 ಸಾವಿರ ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ಹಾಗೇ ಕಾಮರಾಜ್ ನಗರದ ಬಿಜೆಪಿ ಅಭ್ಯರ್ಥಿ ಜಾನ್​ ಕುಮಾರ್​ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮೊಹಮ್ಮದ್​ ಶಹಜಾನ್ ವಿರುದ್ಧ 7229 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಸಹ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದೆ. ಮಾಹೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಪರಂಬಾಥ್​ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಸಿಪಿಐ (ಎಂ) ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಹರಿದಾಸ್ ವಿರುದ್ಧ 301 ಮತಗಳ ಅಂತರದಿಂದ ಗೆದ್ದಿದ್ದಾರೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ