ಪುದುಚೇರಿ: ನಾಪತ್ತೆಯಾಗಿದ್ದ ಬಾಲಕಿಯ ಶವ ಕೈಕಾಲುಗಳು ಕಟ್ಟಿದ್ದ ಸ್ಥಿತಿಯಲ್ಲಿ ಚರಂಡಿಯಲ್ಲಿ ಪತ್ತೆ
ಎರಡು ದಿನಗಳಿಂದ ನಾಪತ್ತೆಯಾಗಿದ್ದ 9 ವರ್ಷದ ಬಾಲಕಿಯ ಮೃತದೇಹ ಪುದುಚೇರಿಯ ಚರಂಡಿಯಿಂದ ಪತ್ತೆಯಾಗಿದೆ. ಆಕೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ಯಾವ ಕಾರಣಕ್ಕಾಗಿ ಬಾಲಕಿಯ ಹತ್ಯೆ ನಡೆದಿದೆ ಎನ್ನುವ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೈಕಾಲುಗಳು ಕಟ್ಟಿದ್ದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಶವ ಪುದುಚೇರಿಯ ಚರಂಡಿಯಲ್ಲಿ ಪತ್ತೆಯಾಗಿದೆ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕಿಯ ಮೃತದೇಹ ಪುದುಚೇರಿಯ ಚರಂಡಿಯಿಂದ ಪತ್ತೆಯಾಗಿದೆ. ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿರುವುದು ಕಂಡುಬಂದಿದೆ.
ಶನಿವಾರ ಬಾಲಕಿ ಆಟವಾಡುತ್ತಿದ್ದಳು ಬಳಿಕ ನಾಪತ್ತೆಯಾಗಿದ್ದಳು, ನಂತರ ಆಕೆಯ ಪೋಷಕರಾದ ನಾರಾಯಣನ್ ಮತ್ತು ಮೈಥಿಲಿ ಆಕೆಯನ್ನು ಹುಡುಕಿದರೂ ವಿಫಲರಾಗಿದ್ದಾರೆ. ಬಳಿಕ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದು, ಬಾಲಕಿಯ ಪತ್ತೆಗೆ ತಂಡ ರಚಿಸಲಾಗಿದೆ.
ಆದರೆ, ಎರಡು ದಿನಗಳ ಬಳಿಕ ಬಾಲಕಿಯ ಕೊಳೆತ ಶವ ಆಕೆಯ ನಿವಾಸದ ಬಳಿಯ ಚರಂಡಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿತ್ತು. ಮೃತದೇಹವನ್ನು ಹೊರತೆಗೆದ ಕೂಡಲೇ ಸ್ಥಳೀಯರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತು ಪ್ರಶ್ನೆ ಮಾಡಿದರು.
ಮತ್ತಷ್ಟು ಓದಿ:ಮೈಸೂರು: ವಿಡಿಯೋ ಕಾಲ್ ಮಾಡಿ ಹೆಂಡತಿ ಜೊತೆ ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ರೈಲು ಹರಿದು ಸಾವು
ಕಾನೂನು ಸುವ್ಯವಸ್ಥೆ ಕಾಪಾಡಲು ಅರೆಸೇನಾ ಪಡೆಗಳನ್ನು ಸ್ಥಳಕ್ಕೆ ಕರೆಸಲಾಗಿತ್ತು. ಏತನ್ಮಧ್ಯೆ, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಪೊಲೀಸರು ಐದು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ