ಪುದುಚೆರಿ: ತಮಿಳುನಾಡಿನಲ್ಲಿ (Tamil Nadu Rains) ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಅದರ ಪರಿಣಾಮ ಬೆಂಗಳೂರಿನ ಮೇಲೂ ಉಂಟಾಗಿದೆ. ಪುದುಚೆರಿಯಲ್ಲಿ (Puducherry) ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಮತ್ತು ಬಹುತೇಕ ಎಲ್ಲಾ ರಸ್ತೆಗಳು ಜಲಾವೃತವಾಗಿದ್ದು, ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಶಾಲಾ ಶಿಕ್ಷಣ ನಿರ್ದೇಶನಾಲಯವು ಪುದುಚೆರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿಯಾಗಿ ನಿರ್ವಹಿಸಲ್ಪಡುವ ಶಾಲೆಗಳಿಗೆ ಇಂದು (ಶುಕ್ರವಾರ) ರಜೆ ಘೋಷಿಸಿದೆ.
ಭಾರೀ ಮಳೆಯಿಂದಾಗಿ ಇಂದು ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ರಜೆ ಘೋಷಿಸಲಾಗಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿಕ್ಷಣ ಸಚಿವ ಎ ನಮಸ್ಶಿವಾಯಂ ಅವರ ನಿರ್ದೇಶನದಂತೆ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
Puducherry | Due to a heavy rain alert issued for the 4th and 5th November, government and private schools in Puducherry and Karaikal closed for those two days: A Namassivayam, Puducherry Education Minister
(File photo) pic.twitter.com/sWOaXNn5q1
— ANI (@ANI) November 3, 2022
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಗುರುವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಹಲವಾರು ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು. ಭಾರೀ ಮಳೆಯಿಂದಾಗಿ ಇಂದು ಕೂಡ ಕಡಲೂರು, ಮೈಲಾಡುತುರೈ ಮತ್ತು ವಿಲ್ಲುಪುರಂ ಸೇರಿದಂತೆ ತಮಿಳುನಾಡಿನ 3 ಜಿಲ್ಲೆಗಳಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನವೆಂಬರ್ 6ರವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ 3 ದಿನ ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಮತ್ತು ಕರೂರ್ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈ ಹಾಗೂ ಅದರ ನೆರೆಯ ಜಿಲ್ಲೆಗಳು ಮತ್ತು ತಮಿಳುನಾಡಿನ ಇತರ ಪ್ರದೇಶಗಳಲ್ಲಿ ರಾತ್ರಿಯ ವೇಳೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪೇಟ್, ನಾಗಪಟ್ಟಣಂ, ತಂಜಾವೂರು ಮತ್ತು ತಿರುವರೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
ಇಂದು ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ದಿಂಡಿಗಲ್ ಮತ್ತು ಥೇಣಿಯಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಚೆನ್ನೈನ ತೊಂಡಿಯಾರ್‌ಪೇಟ್, ವೆಲಚೇರಿ, ವಂದಲ್ಲೂರ್, ವಾಲಾಜಾಬಾದ್, ನೆಮಿಲಿ ಮತ್ತು ಅರಕ್ಕೋಣಂ ಪ್ರದೇಶಗಳಿಗೂ ಎಚ್ಚರಿಕೆ ನೀಡಲಾಗಿದೆ.