ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ

ಅಖಿಲ ಭಾರತ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಸಂಸ್ಥಾಪಕ ಎನ್. ರಂಗಸಾಮಿ ಇಂದು ಸಂಜೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕುನಿಯಿಲ್ ಕೈಲಾಶ್ನಾಥನ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕೆಲವು ದಿನಗಳ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಎನ್​ಡಿಎ ಸರ್ಕಾರ ರಚನೆ ಮಾಡಲಿದೆ. ಪುದುಚೇರಿಯ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿರುವ ರಂಗಸಾಮಿ, ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ
Rangasamy Meets Lieutenant Governor
Image Credit source: x

Updated on: May 08, 2026 | 10:07 PM

ಪುದುಚೇರಿ, ಮೇ 8: ಪುದುಚೇರಿಯಲ್ಲಿ ಎನ್‌ಡಿಎ ನಾಯಕರಾಗಿ ಆಯ್ಕೆಯಾದ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್. ರಂಗಸಾಮಿ ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಸನಾಥನ್ ಅವರನ್ನು ಭೇಟಿ ಮಾಡಿ ಯುಟಿಯಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಈ ವೇಳೆ ರಂಗಸಾಮಿ ಅವರೊಂದಿಗೆ ಮೈತ್ರಿ ಪಕ್ಷಗಳ ಹೊಸದಾಗಿ ಆಯ್ಕೆಯಾದ ಶಾಸಕರು ಕೂಡ ಇದ್ದರು.

ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಬಂದಿರುವ ಮಾಹಿತಿ ಪ್ರಕಾರ, ರಂಗಸಾಮಿ ಸಲ್ಲಿಸಿದ ಪತ್ರವನ್ನು ಅನುಮೋದನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಲಾಗುವುದು. ಮೇ 13ರಂದು ರಂಗಸಾಮಿ ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ, ಅಖಿಲ ಭಾರತ ಎನ್ಆರ್ ಕಾಂಗ್ರೆಸ್ ಸ್ಪರ್ಧಿಸಿದ್ದ 16 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಜಯಗಳಿಸಿತು. ಬಿಜೆಪಿ ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ ನಾಲ್ಕನ್ನು ಗೆದ್ದಿತು. ಎಐಎಡಿಎಂಕೆ ಮತ್ತು ಲಾಚಿಯಾ ಜನನಾಯಕ ಕಚ್ಚಿ (ಎಲ್‌ಜೆಕೆ), ಇತರ ಎನ್‌ಡಿಎ ಘಟಕಗಳು ತಲಾ ಒಂದು ಸ್ಥಾನದಿಂದ ಜಯ ಗಳಿಸಿದವು. 30 ಸದಸ್ಯರ ವಿಧಾನಸಭೆಯಲ್ಲಿ ಈ ಒಕ್ಕೂಟವು 18 ಸ್ಥಾನಗಳನ್ನು ಹೊಂದಿದೆ. ಇದಲ್ಲದೆ, ಮೂರು ನಾಮನಿರ್ದೇಶಿತ ಸದಸ್ಯರಿರುತ್ತಾರೆ.

ಇದನ್ನೂ ಓದಿ: Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿರೋಧ ಪಕ್ಷದ ಡಿಎಂಕೆ ಐದು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಹೊಸ ಪಕ್ಷ ಟಿವಿಕೆ 2 ಸ್ಥಾನಗಳನ್ನು ಗೆದ್ದಿದೆ. ನಿನ್ನೆ ಮಿತ್ರಪಕ್ಷಗಳ ಶಾಸಕರ ಜಂಟಿ ಸಭೆಯಲ್ಲಿ ರಂಗಸಾಮಿ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗುರುವಾರ ಪುದುಚೇರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್. ರಂಗಸಾಮಿ, ಲೋಕ ಭವನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us