AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puja Khedkar: ನನ್ನನ್ನು ಅನರ್ಹಗೊಳಿಸುವ ಅಧಿಕಾರ ಯುಪಿಎಸ್‌ಸಿಗೆ ಇಲ್ಲ; ವಂಚನೆ ಆರೋಪ ತಳ್ಳಿಹಾಕಿದ ಪೂಜಾ ಖೇಡ್ಕರ್

ತನ್ನ ವಿರುದ್ಧದ UPSCಯ ಆರೋಪಗಳ ಕುರಿತು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ ಪೂಜಾ ಖೇಡ್ಕರ್ ಅವರು ಒಮ್ಮೆ ಆಯ್ಕೆಯಾದರೆ ಮತ್ತು ಪ್ರೊಬೇಷನರ್ ಆಗಿ ನೇಮಕಗೊಂಡರೆ ಯುಪಿಎಸ್​ಸಿಗೆ ತನ್ನ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಅಧಿಕಾರ ಇರುವುದಿಲ್ಲ ಎಂದು ವಾದಿಸಿದ್ದಾರೆ. ತಮ್ಮ ವಿರುದ್ಧ ಕ್ರಮ ಕೈಗೊಳ್ಳುವ ಹಕ್ಕು ಯುಪಿಎಸ್‌ಸಿಗೆ ಇಲ್ಲ ಎಂದು ಪೂಜಾ ಖೇಡ್ಕರ್ ಹೇಳಿದ್ದಾರೆ.

Puja Khedkar: ನನ್ನನ್ನು ಅನರ್ಹಗೊಳಿಸುವ ಅಧಿಕಾರ ಯುಪಿಎಸ್‌ಸಿಗೆ ಇಲ್ಲ; ವಂಚನೆ ಆರೋಪ ತಳ್ಳಿಹಾಕಿದ ಪೂಜಾ ಖೇಡ್ಕರ್
ಪೂಜಾ ಖೇಡ್ಕರ್
ಸುಷ್ಮಾ ಚಕ್ರೆ
|

Updated on: Aug 28, 2024 | 7:19 PM

Share

ನವದೆಹಲಿ: ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ತನ್ನ ಅನರ್ಹತೆಗೆ ಸವಾಲು ಹಾಕಿದ್ದು, ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್‌ಸಿ) ತನ್ನ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ಪೂಜಾ ಖೇಡ್ಕರ್ ಅವರ ಪ್ರಕರಣ ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಯುಪಿಎಸ್‌ಸಿಗೆ ತಿರುಗೇಟು ನೀಡಿರುವ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಣ ಸಂಸ್ಥೆಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ತನ್ನ ವಿರುದ್ಧದ ಯುಪಿಎಸ್‌ಸಿ ಆರೋಪಗಳ ಕುರಿತು ದೆಹಲಿ ಹೈಕೋರ್ಟ್‌ಗೆ ನೀಡಿದ ಉತ್ತರದಲ್ಲಿ ಪೂಜಾ ಖೇಡ್ಕರ್, ಒಮ್ಮೆ ಪ್ರೊಬೇಷನರ್ ಆಗಿ ಆಯ್ಕೆಯಾದ ನಂತರ ಯುಪಿಎಸ್‌ಸಿಗೆ ಅವರ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಯಾವುದೇ ಹಕ್ಕಿಲ್ಲ. ಮತ್ತು ಯುಪಿಎಸ್‌ಸಿಯಲ್ಲಿ ನಾನು ಯಾವುದೇ ತಪ್ಪು ಮಾಹಿತಿ ನೀಡಿಲ್ಲ ಎಂದು ಹೇಳಿದ್ದಾರೆ. ಯುಪಿಎಸ್‌ಸಿ ಹಾಗೂ ದೆಹಲಿ ಪೊಲೀಸರ ನಿಲುವಿಗೆ ಪ್ರತಿಕ್ರಿಯಿಸಲು ಪೂಜಾ ಖೇಡ್ಕರ್‌ಗೆ ನ್ಯಾಯಾಲಯ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: Viral News: ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಮಾಜಿ ಐಎಎಸ್ ಪ್ರೊಬೇಷನರ್‌ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ಯುಪಿಎಸ್‌ಸಿ ವಿರೋಧಿಸಿತ್ತು. ಲೋಕಸೇವಾ ಆಯೋಗ ಮತ್ತು ಸಾರ್ವಜನಿಕರ ವಿರುದ್ಧ ಅವರು ವಂಚನೆ ಎಸಗಿದ್ದಾರೆ ಎಂದು ಹೇಳಿದೆ. ಈ ಪ್ರಕರಣವು ಸಾರ್ವಜನಿಕ ನಂಬಿಕೆ ಮತ್ತು ನಾಗರಿಕ ಸೇವೆಗಳ ಪರೀಕ್ಷೆಯ ಸಮಗ್ರತೆಯ ಮೇಲೆ ವ್ಯಾಪಕ ಪರಿಣಾಮಗಳನ್ನು ಬೀರುತ್ತದೆ ಎಂಬ ಕಾರಣಕ್ಕಾಗಿ ದೆಹಲಿ ಪೊಲೀಸರು ಬಂಧನ ಪೂರ್ವ ಜಾಮೀನು ಅರ್ಜಿಯನ್ನು ವಜಾಗೊಳಿಸುವಂತೆ ಕೋರಿದರು.

ಇದನ್ನೂ ಓದಿ: Puja Khedkar: ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾತ್ಕಾಲಿಕ ಉಮೇದುವಾರಿಕೆ ರದ್ದು, ಭವಿಷ್ಯದಲ್ಲಿ ಪರೀಕ್ಷೆ ಬರೆಯದಂತೆ ನಿಷೇಧ

ಮೀಸಲಾತಿ ಪ್ರಯೋಜನಗಳನ್ನು ಪಡೆಯಲು UPSC ನಾಗರಿಕ ಸೇವಾ ಪರೀಕ್ಷೆ-2022ರ ತನ್ನ ಅರ್ಜಿಯಲ್ಲಿ ಪೂಜಾ ಖೇಡ್ಕರ್ ಮಾಹಿತಿಯನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಜುಲೈ 31ರಂದು UPSC ಪೂಜಾ ಖೇಡ್ಕರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿತ್ತು ಮತ್ತು ಮುಂದಿನ ಪರೀಕ್ಷೆಗಳಿಂದ ಅವರಿಗೆ ಪ್ರವೇಶ ನೀಡದಿರಲು ನಿರ್ಧಾರ ಮಾಡಿತ್ತು. ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಅಂಗವಿಕಲರ ಹಕ್ಕು ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದರ ಬೆನ್ನಲ್ಲೇ ಪೂಜಾ ಖೇಡ್ಕರ್ ಅವರು ತಮ್ಮ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸಿದ ಯುಪಿಎಸ್‌ಸಿಯ ನಿರ್ಧಾರವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?