AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Bus Accident: ಪುಲ್ವಾಮಾದಲ್ಲಿ ಬಸ್​ ಪಲ್ಟಿಯಾಗಿ 4 ಮಂದಿ ಸಾವು, 28 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್​ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ

Pulwama Bus Accident: ಪುಲ್ವಾಮಾದಲ್ಲಿ ಬಸ್​ ಪಲ್ಟಿಯಾಗಿ 4 ಮಂದಿ ಸಾವು, 28 ಜನರಿಗೆ ಗಾಯ
ಬಸ್ ಅಪಘಾತImage Credit source: India TV
ನಯನಾ ರಾಜೀವ್
|

Updated on:Mar 19, 2023 | 8:12 AM

Share

ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್​ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದಲ್ಲಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರ ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಮತ್ತಷ್ಟು ಓದಿ: BMTC ಬಸ್​​ನಲ್ಲಿ ಅಗ್ನಿ ದುರಂತ, ಮಲಗಿದ್ದ ಕಂಡಕ್ಟರ್​​ ಸಜೀವ ದಹನ, ಡ್ರೈವರ್ ಪಾರು

ಬಿಹಾರದ ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಜಿಲ್ಲಾಡಳಿತವು ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು. ಏತನ್ಮಧ್ಯೆ, ಎಲ್‌ಜಿ ಅವರ ನಿರ್ದೇಶನಗಳನ್ನು ಅನುಸರಿಸಿ, ಪುಲ್ವಾಮಾ ಡೆಪ್ಯುಟಿ ಕಮಿಷನರ್ (ಡಿಸಿ) ಬಸೀರ್ ಉಲ್ ಹಕ್ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡವರಿಗೆ 25,000 ರೂ. ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 10,000 ರೂ.ಪರಿಹಾರವನ್ನು ಹಕ್ ಘೋಷಿಸಿದ್ದಾರೆ ಎಂದು ಅವರು ಹೇಳಿದರು .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:12 am, Sun, 19 March 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ