Pulwama: ಪುಲ್ವಾಮಾದಲ್ಲಿ ತಪ್ಪಿದ ಭಾರೀ ದುರಂತ; 30 ಕೆಜಿ ತೂಕದ ಐಇಡಿ ವಶಕ್ಕೆ

ಪೊಲೀಸರು ಮತ್ತು ಭದ್ರತಾ ಪಡೆಗಳು ಪುಲ್ವಾಮಾದ ಸರ್ಕ್ಯುಲರ್ ರಸ್ತೆಯ ತಹಾಬ್ ಕ್ರಾಸಿಂಗ್ ಬಳಿ ಅಂದಾಜು 25ರಿಂದ 30 ಕೆಜಿ ತೂಕದ ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ.

Pulwama: ಪುಲ್ವಾಮಾದಲ್ಲಿ ತಪ್ಪಿದ ಭಾರೀ ದುರಂತ; 30 ಕೆಜಿ ತೂಕದ ಐಇಡಿ ವಶಕ್ಕೆ
ಸಾಂದರ್ಭಿಕ ಚಿತ್ರ
Image Credit source: india tv news
Edited By:

Updated on: Aug 10, 2022 | 10:40 AM

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಪುಲ್ವಾಮಾದಲ್ಲಿ ಇಂದು ಸುಮಾರು 25ರಿಂದ 30 ಕೆಜಿ ಸುಧಾರಿತ ಸ್ಫೋಟಕ ಸಾಧನ(IED)ವನ್ನು ವಶಪಡಿಸಿಕೊಂಡಿದ್ದಾರೆ. ಸರ್ಕ್ಯುಲರ್ ರಸ್ತೆಯ ತಹಬ್ ಕ್ರಾಸಿಂಗ್ ಬಳಿ ಐಇಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ (Independence Day) ಕೆಲವೇ ದಿನಗಳಿರುವಾಗ ಐಇಡಿಯನ್ನು ಪತ್ತೆಹಚ್ಚಿರುವುದರಿಂದ ದೊಡ್ಡ ದುರಂತವೊಂದು ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್, ಪೊಲೀಸರು ಮತ್ತು ಭದ್ರತಾ ಪಡೆಗಳು ಪುಲ್ವಾಮಾದ ಸರ್ಕ್ಯುಲರ್ ರಸ್ತೆಯ ತಹಾಬ್ ಕ್ರಾಸಿಂಗ್ ಬಳಿ ಅಂದಾಜು 25ರಿಂದ 30 ಕೆಜಿ ತೂಕದ ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Encounter: ಪುಲ್ವಾಮಾದಲ್ಲಿ ಮೂವರು ಉಗ್ರರ ಎನ್​ಕೌಂಟರ್: ಈ ಪೈಕಿ ಒಬ್ಬ ಪೊಲೀಸ್ ಹತ್ಯೆಯ ಸಂಚು ರೂಪಿಸಿದ್ದವ

ಕಳೆದ ಗುರುವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರು. ಪುಲ್ವಾಮಾದ ಗಡೂರ ಗ್ರಾಮದ ಟೆಂಟ್‌ನಲ್ಲಿ ಕೂಲಿ ಕಾರ್ಮಿಕರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದರು.

ಮೃತ ಕಾರ್ಮಿಕನನ್ನು ಬಿಹಾರದ ಸಕ್ವಾ ಪರ್ಸಾ ನಿವಾಸಿ ಮೊಹಮ್ಮದ್ ಮುಮ್ತಾಜ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮೊಹಮ್ಮದ್ ಆರಿಫ್ ಮತ್ತು ಅವರ ಮಗ ಮೊಹಮ್ಮದ್ ಮಜ್ಬೂಲ್ ಎಂದು ಗುರುತಿಸಲಾಗಿದ್ದು, ಬಿಹಾರದ ರಾಂಪೋರ್ ನಿವಾಸಿಗಳಾಗಿದ್ದಾರೆ. ಈ ಕಾರ್ಮಿಕರು ಹತ್ತಿ ಹಾಸಿಗೆಗಳನ್ನು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us