AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರೊಳಗೆ ಹೆಣ್ಣುಮಕ್ಕಳಿದ್ದರೆ ಹೈವೇಯಲ್ಲಿ ಕಾರು ನಿಲ್ಲಿಸುವ ಮುನ್ನ ಆಲೋಚಿಸಿ

ದೂರ ಪ್ರಯಾಣ ಮಾಡುವಾಗ ಚಾಲಕರು ಅನಿವಾರ್ಯವಾಗಿ ಹೈವೇ ಪಕ್ಕದಲ್ಲೆಲ್ಲೋ ಗಾಡಿ ನಿಲ್ಲಿಸಿ  ಚಹಾ ಕುಡಿಯುವುದು ಅಥವಾ ಮೂತ್ರ ವಿಸರ್ಜನೆಗೆ ಹೋಗುವುದು ಸಾಮಾನ್ಯ. ಆದರೆ ಕಾರಿನಲ್ಲಿ ಹೆಣ್ಣುಮಕ್ಕಳಿದ್ದರೆ ನೀವು ಈ ತಪ್ಪು ಮಾಡಲೇಬೇಡಿ. ಮಹಾರಾಷ್ಟ್ರದ ಪುಣೆಯ ದೌಂಡ್ ಜಿಲ್ಲೆಯಲ್ಲಿ ಬೆಳಗಿನ ಜಾವ ಕಾರು ಚಾಲಕ ಹೈವೇ ಪಕ್ಕದಲ್ಲಿ ಕಾರು ನಿಲ್ಲಿಸಿ ಹೋಗಿದ್ದಾಗ, ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಷ್ಟೇ ಅಲ್ಲದೆ, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಉಳಿದ ಮೂವರು ಹೆಣ್ಣುಮಕ್ಕಳಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಾರೊಳಗೆ ಹೆಣ್ಣುಮಕ್ಕಳಿದ್ದರೆ ಹೈವೇಯಲ್ಲಿ ಕಾರು ನಿಲ್ಲಿಸುವ ಮುನ್ನ ಆಲೋಚಿಸಿ
ಕಾರು-ಸಾಂದರ್ಭಿಕ ಚಿತ್ರImage Credit source: Carparts.com
ನಯನಾ ರಾಜೀವ್
|

Updated on: Jul 01, 2025 | 11:53 AM

Share

ಪುಣೆ, ಜುಲೈ 01: ದೂರ ಪ್ರಯಾಣ ಮಾಡುವಾಗ ಚಾಲಕರು ಅನಿವಾರ್ಯವಾಗಿ ಹೈವೇ ಪಕ್ಕದಲ್ಲೆಲ್ಲೋ ಗಾಡಿ ನಿಲ್ಲಿಸಿ  ಚಹಾ ಕುಡಿಯುವುದು ಅಥವಾ ಮೂತ್ರ ವಿಸರ್ಜನೆಗೆ ಹೋಗುವುದು ಸಾಮಾನ್ಯ. ಆದರೆ ಕಾರಿನಲ್ಲಿ ಹೆಣ್ಣುಮಕ್ಕಳಿದ್ದರೆ ನೀವು ಈ ತಪ್ಪು ಮಾಡಲೇಬೇಡಿ. ಮಹಾರಾಷ್ಟ್ರದ ಪುಣೆಯ ದೌಂಡ್ ಜಿಲ್ಲೆಯಲ್ಲಿ ಬೆಳಗಿನ ಜಾವ ಕಾರು ಚಾಲಕ ಹೈವೇ ಪಕ್ಕದಲ್ಲಿ ಕಾರು ನಿಲ್ಲಿಸಿ ಹೋಗಿದ್ದಾಗ, ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಆಯುಧಗಳನ್ನು ತೋರಿಸಿ ಬೆದರಿಕೆ ಹಾಕಿದ್ದಷ್ಟೇ ಅಲ್ಲದೆ, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಉಳಿದ ಮೂವರು ಮಹಿಳೆಯರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬೆಳಗಿನ ಜಾವ 4.15ರ ಸುಮಾರಿಗೆ ಹೆದ್ದಾಯ ಭಿಗ್ವಾನ್ ಬಳಿ ಚಾಲಕ ಕಾರು ನಿಲ್ಲಿಸಿ ಕೆಳಗೆ ಇಳಿದಿದ್ದರು. ಕಾರಿನಬಲ್ಲಿ 7 ಜನರಿದ್ದರು. ಚಾಲಕ, ಮೂವರು ಮಹಿಳೆಯರು, 17 ವರ್ಷದ ಇಬ್ಬರು ಬಾಲಕರು ಹಾಗೂ ಬಾಲಕಿ ಇದ್ದರು. ಅವರು ಪುಣೆ ಜಿಲ್ಲೆಯ ಜುನ್ನಾರ್ ತಹಸಿಲ್‌ನ ಹಳ್ಳಿಯ ಎರಡು ವಿಭಿನ್ನ ಕುಟುಂಬಗಳಿಗೆ ಸೇರಿದವರಾಗಿದ್ದು, ಸೋಲಾಪುರ ಜಿಲ್ಲೆಯ ದೇವಾಲಯ ಪಟ್ಟಣವಾದ ಪಂಢರಪುರಕ್ಕೆ ಹೋಗುತ್ತಿದ್ದರು.

ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಾರಿನ ಬಳಿ ಬಂದು ಹರಿತವಾದ ಆಯುಧಗಳನ್ನು ತೋರಿಸಿ ಚಿನ್ನಾಭರಣಗಳನ್ನು ದೋಚಿದ್ದಾರೆ. ಹಾಗೆಯೇ 17 ವರ್ಷದ ಬಾಲಕಿಯನ್ನು ಕಾರಿನಿಂದ ಹೊರಗೆಳೆದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇದಾದ ನಂತರ ಇಬ್ಬರೂ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ

ಘಟನೆಯ ನಂತರ, ಕಾರು ಸವಾರರು ಧೈರ್ಯ ತಂದುಕೊಂಡು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ರಸ್ತೆ ಬದಿಯಿದ್ದ ಚಹಾ ಅಂಗಡಿಯ ಮಾಲೀಕ ಈ ಘಟನೆಯನ್ನು ವೀಕ್ಷಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎಂಟು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಅಪರಿಚಿತ ಹಲ್ಲೆಕೋರರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ