AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ಪುಣೆಯಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದ ಪರಿಣಾಮದಿಂದ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಹುಡುಗನೊಬ್ಬ ಕುಡಿದ ಅಮಲಿನಲ್ಲಿ ಪೋರ್ಷೆ ಚಾಲನೆ ಮಾಡುವಾಗ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಇದೇ ರೀತಿಯ ಘಟನೆ ಮತ್ತೊಮ್ಮೆ ನಡೆದಿದೆ.

ಪುಣೆಯಲ್ಲಿ ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು
ಪುಣೆಯಲ್ಲಿ ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು
ಸುಷ್ಮಾ ಚಕ್ರೆ
|

Updated on: May 28, 2024 | 3:25 PM

Share

ಪುಣೆ: ಪುಣೆ ಪೋರ್ಷೆ ಕಾರು ಅಪಘಾತ (Pune Porsche Accident Case) ನಡೆದ ಬೆನ್ನಲ್ಲೇ ಪುಣೆಯಲ್ಲಿ ಮತ್ತೊಂದು ರಸ್ತೆ ಅಪಘಾತ (Road Accident) ಸಂಭವಿಸಿದೆ. ಟ್ರಕ್ ಒಂದು ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಇದಾದ ನಂತರ ಟ್ರಕ್ ಚಾಲಕ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ, ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸೋಮವಾರ ರಾತ್ರಿ ಪುಣೆಯ ಅಹಮದ್‌ನಗರ ರಸ್ತೆಯ ಚಂದನ್ ನಗರ ಪ್ರದೇಶದಲ್ಲಿ ರಾತ್ರಿ 10.30ರ ಸುಮಾರಿಗೆ ಬೈಕ್‌ನಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದಿದ್ದು, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾವನ್ನಪ್ಪಿದ್ದಾರೆ. ಬೈಕಿಗೆ ಡಿಕ್ಕಿ ಹೊಡೆದ ನಂತರ, ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿಹೋಗಲು ಯತ್ನಿಸಿದ್ದಾನೆ. ಆದರೆ ಓಡಿಹೋಗುತ್ತಿದ್ದ ಆತನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಪುಣೆ-ಅಹ್ಮದ್‌ನಗರ ರಸ್ತೆಯ ಚಂದನ್ ನಗರ ಪ್ರದೇಶದಲ್ಲಿ ಸೋಮವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, 20 ವರ್ಷದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಪುಣೆ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಇಬ್ಬರು ತಮ್ಮ ಹುಟ್ಟೂರಾದ ಮಹಾರಾಷ್ಟ್ರದ ಲಾತೂರ್‌ಗೆ ಹೋಗಬೇಕಿತ್ತು. ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಟ್ರಕ್ ಅವರ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿಮಲತಾಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದ್ ಖೋಬ್ರೆ ತಿಳಿಸಿದ್ದಾರೆ.

ಇದನ್ನೂ ಓದಿ: Porsche Accident: ಅಪಘಾತದ ವೇಳೆ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ; ಅಪ್ರಾಪ್ತನ ತಂದೆಯ ಹೊಸ ವರಸೆ

ಟ್ರಕ್ ಚಾಲಕನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 19 ರಂದು, ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ 17 ವರ್ಷದ ಹುಡುಗ ಚಲಾಯಿಸುತ್ತಿದ್ದ ಪೋರ್ಷೆ ಕಾರು ಮೋಟಾರ್ ಬೈಕ್ ಅನ್ನು ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ