Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ತರಬೇತಿ ವಿಮಾನ ಪತನ, ಇಬ್ಬರಿಗೆ ಗಾಯ, ನಾಲ್ಕು ದಿನದಲ್ಲಿ 2ನೇ ಘಟನೆ

ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆಯ ಹಳ್ಳಿಯೊಂದರ ಬಳಿ ಭಾನುವಾರ ಬೆಳಗ್ಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ ತರಬೇತಿ ಪೈಲಟ್ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾರಾಮತಿ ತಾಲೂಕಿನ ಗೋಜುಬಾವಿ ಗ್ರಾಮದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ವಿಮಾನ ಪತನಗೊಂಡಿದೆ.

ವಿಮಾನ ಪತನImage Credit source: India.com
Follow us
ನಯನಾ ರಾಜೀವ್
|

Updated on: Oct 22, 2023 | 10:52 AM

ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆಯ ಹಳ್ಳಿಯೊಂದರ ಬಳಿ ಭಾನುವಾರ ಬೆಳಗ್ಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ ತರಬೇತಿ ಪೈಲಟ್ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾರಾಮತಿ ತಾಲೂಕಿನ ಗೋಜುಬಾವಿ ಗ್ರಾಮದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ವಿಮಾನ ಪತನಗೊಂಡಿದೆ.

ರೆಡ್ ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಗೊಜುಬಾವಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ತರಬೇತಿ ಪಡೆದ ಪೈಲಟ್ ಮತ್ತು ಬೋಧಕ ಗಾಯಗೊಂಡಿದ್ದಾರೆ. ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾರಾಮತಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಪ್ರಭಾಕರ್ ಮೋರೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ನಾಲ್ಕು ದಿನಗಳಲ್ಲಿ ಖಾಸಗಿ ವಿಮಾನಯಾನ ಅಕಾಡೆಮಿಯ ವಿಮಾನವನ್ನು ಒಳಗೊಂಡ ಎರಡನೇ ಘಟನೆಯಾಗಿದೆ. ಗುರುವಾರ ಸಂಜೆ, ಅಕಾಡೆಮಿಯ ತರಬೇತಿ ವಿಮಾನವು ಬಾರಾಮತಿ ತಾಲೂಕಿನ ಕಫ್ತಾಲ್ ಗ್ರಾಮದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ