ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆಯ ಹಳ್ಳಿಯೊಂದರ ಬಳಿ ಭಾನುವಾರ ಬೆಳಗ್ಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ ತರಬೇತಿ ಪೈಲಟ್ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾರಾಮತಿ ತಾಲೂಕಿನ ಗೋಜುಬಾವಿ ಗ್ರಾಮದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ವಿಮಾನ ಪತನಗೊಂಡಿದೆ.
ರೆಡ್ ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಗೊಜುಬಾವಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ತರಬೇತಿ ಪಡೆದ ಪೈಲಟ್ ಮತ್ತು ಬೋಧಕ ಗಾಯಗೊಂಡಿದ್ದಾರೆ. ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾರಾಮತಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಪ್ರಭಾಕರ್ ಮೋರೆ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್ ರಹಿತ ತಪಸ್ ವಿಮಾನ ಪತನ
ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
#WATCH | Maharashtra: Red Bird Academy Tecnam aircraft VT-RBT made an emergency landing near Baramati airfield. The instructor and trainee both are safe. Further investigation underway: DGCA ( Directorate General of Civil Aviation) https://t.co/yJ8AWToTUw pic.twitter.com/7Ajapflbra
— ANI (@ANI) October 22, 2023
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ