ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಟ್ರಾಫಿಕ್​ ಪೊಲೀಸರ ಜತೆ ಕೆಲ್ಸ ಮಾಡ್ಬೇಕು, ಷರತ್ತುಬದ್ಧ ಜಾಮೀನು

ಸ್ಪೋರ್ಟ್ಸ್​ ಕಾರನ್ನು ಅತಿ ವೇಗವಾಗಿ ಚಲಾಯಿಸಿ ಅಪಘಾತ ಮಾಡಿ ದಂಪತಿ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಬಾಲಕನಿಗೆ ಬಾಲಾಪರಾಧಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಟ್ರಾಫಿಕ್​ ಪೊಲೀಸರ ಜತೆ ಕೆಲ್ಸ ಮಾಡ್ಬೇಕು, ಷರತ್ತುಬದ್ಧ ಜಾಮೀನು
ಅಪಘಾತ
Follow us
ನಯನಾ ರಾಜೀವ್
|

Updated on: May 20, 2024 | 2:21 PM

ಸ್ಪೋರ್ಟ್ಸ್​ ಕಾರನ್ನು ಕುಡಿದ ಮತ್ತಿನಲ್ಲಿ ಮನಬಂದಂತೆ ಓಡಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಬಾಲಕನಿಗೆ 15 ಗಂಟೆಗಳಲ್ಲಿ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಬಾಲಾಪರಾಧಿ ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕೋರೆಗಾಂವ್ ಪಾರ್ಕ್‌ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಜಾಮೀನು ವಿಚಾರಣೆಯ ವಿವರಗಳನ್ನು ಸಾರ್ವಜನಿಕಗೊಳಿಸದಿದ್ದರೂ, ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಷರತ್ತುಗಳು ಏನೇನು?

15 ದಿನಗಳ ಕಾಲ ಟ್ರಾಫಿಕ್ ಪೊಲೀಸರೊಂದಿಗೆ ಕೆಲಸ ಮಾಡಬೇಕು ಮನೋವೈದ್ಯಕೀಯ ಮೌಲ್ಯಮಾಪನ ಮತ್ತು ಚಿಕಿತ್ಸೆಗೆ ಒಳಗಾಗಬೇಕು ರಸ್ತೆ ಅಪಘಾತಗಳ ಪರಿಣಾಮ ಮತ್ತು ಅವುಗಳ ಪರಿಹಾರ ಕುರಿತು 300 ಪದಗಳ ಪ್ರಬಂಧವನ್ನು ಬರೆಯಬೇಕು ವ್ಯಸನಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಭವಿಷ್ಯದಲ್ಲಿ ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡುವುದು.

ಮತ್ತಷ್ಟು ಓದಿ: ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ಅಪಘಾತದ ಸ್ಥಳದಲ್ಲಿ ಜನಸಮೂಹದಿಂದ ಅಪ್ರಾಪ್ತನನ್ನು ಥಳಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮೂರು ಮಂದಿ ಇದ್ದರು ಅದರಲ್ಲಿ ಒಬ್ಬರು ಅಪಘಾತವಾದ ತಕ್ಷಣ ಕಾರಿನಿಂದ ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಅಪ್ರಾಪ್ತ ಬಾಲಕನಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ