AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಮಚ್ಚಿನಿಂದ ಯುವತಿಯನ್ನು ಕೊಂದ ಕಾಲ್​ಸೆಂಟರ್ ಉದ್ಯೋಗಿ

ಪುಣೆಯ ಕಾಲ್ ಸೆಂಟರ್ ಸಿಬ್ಬಂದಿಯನ್ನು ಆಕೆಯ ಸಹೋದ್ಯೋಗಿಯೊಬ್ಬರು ಮಚ್ಚು ಬಳಸಿ ಕೊಂದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಬಿಪಿಒ ಉದ್ಯೋಗಿಯನ್ನು ಆಕೆಯ ಸಹೋದ್ಯೋಗಿಯೇ ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾನೆ. ಸುತ್ತಲೂ ನಿಂತವರು ನೋಡನೋಡುತ್ತಿದ್ದಂತೆ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಾಡಹಗಲೇ ಮಚ್ಚಿನಿಂದ ಯುವತಿಯನ್ನು ಕೊಂದ ಕಾಲ್​ಸೆಂಟರ್ ಉದ್ಯೋಗಿ
Pune Murder
ಸುಷ್ಮಾ ಚಕ್ರೆ
|

Updated on: Jan 09, 2025 | 4:19 PM

Share

ಪುಣೆ: ಮಹಾರಾಷ್ಟ್ರದ ಪುಣೆಯ ಕಾಲ್ ಸೆಂಟರ್ ಸಿಬ್ಬಂದಿಯನ್ನು ಆಕೆಯ ಸಹೋದ್ಯೋಗಿಯೇ ಕೊಲೆ ಮಾಡಿದ್ದಾರೆ. ಪುಣೆಯ ಬಹುರಾಷ್ಟ್ರೀಯ ಬಿಪಿಒ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 28 ವರ್ಷದ ಮಹಿಳೆ ತನ್ನ ಕಂಪನಿಯ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ಸಹೋದ್ಯೋಗಿ ನಡೆಸಿದ ಮಚ್ಚಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಆಕೆಯ ಕೈಗೆ ತೀವ್ರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಗಾಯಗಳಿಂದಾಗಿ ಯುವತಿ ಸಾವನ್ನಪ್ಪಿದ್ದಾರೆ.

ಈ ಘಟನೆ ಸಂಜೆ ಸುಮಾರು 6.15ಕ್ಕೆ ಯೆರವಡಾದ ಬಿಪಿಒ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಕತ್ರಜ್ ನಿವಾಸಿ 28 ವರ್ಷದ ಶುಭದಾ ಶಂಕರ್ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದಾತ ಶಿವಾಜಿನಗರ ನಿವಾಸಿ 30 ವರ್ಷದ ಕೃಷ್ಣ ಸತ್ಯನಾರಾಯಣ್ ಕನೋಜ.

ಪುಣೆಯಲ್ಲಿ ಬಿಪಿಒ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಮಹಿಳಾ ಲೆಕ್ಕಪರಿಶೋಧಕಿಯೊಬ್ಬಳನ್ನು ಮಂಗಳವಾರ ಸಂಜೆ ಯೆರವಾಡದಲ್ಲಿರುವ ಅವರ ಕಂಪನಿಯ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಸಹೋದ್ಯೋಗಿ ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಈ ದಾಳಿಯಲ್ಲಿ ಕೈಗೆ ಗಂಭೀರ ಗಾಯಗಳಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 17 ವರ್ಷಗಳ ಹಿಂದೆ ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ; ಮಾಡದ ಅಪರಾಧಕ್ಕೆ ಜೈಲು ಶಿಕ್ಷೆ ಅನುಭವಿಸಿದ 4 ಕೈದಿಗಳು

ಇಂದು ಸಂಜೆ 6.15ರ ಸುಮಾರಿಗೆ ಯೆರವಾಡದಲ್ಲಿರುವ ಬಹುರಾಷ್ಟ್ರೀಯ ಬಿಪಿಒದ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ಯುವತಿ ಮತ್ತು ದಾಳಿ ಮಾಡಿದಾತ ಇಬ್ಬರೂ ಒಂದೇ ಬಹುರಾಷ್ಟ್ರೀಯ ಬಿಪಿಒ, ಡಬ್ಲ್ಯೂಎನ್ಎಸ್ ಗ್ಲೋಬಲ್‌ನಲ್ಲಿ ಲೆಕ್ಕಪರಿಶೋಧಕರಾಗಿ ಕೆಲಸ ಮಾಡುತ್ತಿದ್ದಾರೆ. “ಗಾಯಗೊಂಡ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾತ್ರಿಯ ನಂತರ ಚಿಕಿತ್ಸೆ ನೀಡಲಾಗುತ್ತಿದ್ದಾಗ ಅವರು ಸಾವನ್ನಪ್ಪಿದರು. ಶಂಕಿತನನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮೃತ ಯುವತಿಗೆ ಸ್ವಲ್ಪ ಹಣವನ್ನು ನೀಡಿದ್ದ. ಆಕೆ ಅದನ್ನು ವಾಪಾಸ್ ಕೊಟ್ಟಿರಲಿಲ್ಲ. ಇದೇ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್