ವೀರ ಸಾವರ್ಕರ್ ಮಾನನಷ್ಟ ಪ್ರಕರಣ; ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಜಾಮೀನು

ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅವರ ಸೋದರಳಿಯ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಪುಣೆಯ ವಿಶೇಷ ನ್ಯಾಯಾಲಯ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ. ಈ ವರ್ಷದ ಆರಂಭದಲ್ಲಿ ಲಂಡನ್‌ನಲ್ಲಿ ನಡೆದ ಭಾಷಣದ ಸಂದರ್ಭದಲ್ಲಿ ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ವೀರ ಸಾವರ್ಕರ್ ಮಾನನಷ್ಟ ಪ್ರಕರಣ; ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಜಾಮೀನು
Rahul Gandhi
Follow us
ಸುಷ್ಮಾ ಚಕ್ರೆ
|

Updated on: Jan 10, 2025 | 8:33 PM

ನವದೆಹಲಿ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ (ವಿ.ಡಿ. ಸಾವರ್ಕರ್) ಅವರ ಸೋದರಳಿಯ ಸತ್ಯಕಿ ಸಾವರ್ಕರ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಲಂಡನ್​ನಲ್ಲಿ ನೀಡಲಾದ ಭಾಷಣದಲ್ಲಿ ವಿ.ಡಿ. ಸಾವರ್ಕರ್ ಮತ್ತು ಕೆಲವು ಸ್ನೇಹಿತರು ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ ಘಟನೆಯ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಹೇಳಿದ್ದರು.

ಆದರೆ, ವಿ.ಡಿ. ಸಾವರ್ಕರ್ ಸೋದರಳಿಯ ಸತ್ಯಕಿ ಸಾವರ್ಕರ್ ಈ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದರು. ಅವುಗಳನ್ನು “ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ” ಎಂದು ಕರೆದಿದ್ದರು. ಅಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ವಿ.ಡಿ. ಸಾವರ್ಕರ್ ಈ ರೀತಿ ಏನನ್ನೂ ಬರೆದಿಲ್ಲ ಎಂದು ಅವರು ಪ್ರತಿಪಾದಿಸಿದ್ದರು. ರಾಹುಲ್ ಗಾಂಧಿಯವರ ಹೇಳಿಕೆಗಳು ನಮ್ಮ ಪ್ರತಿಷ್ಠೆಗೂ ಧಕ್ಕೆ ತರುತ್ತಿವೆ ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಆ ದೂರಿನ ನಂತರ, ಪುಣೆ ನ್ಯಾಯಾಲಯವು ಪೊಲೀಸರಿಗೆ ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿತು.

ಇದನ್ನೂ ಓದಿ: ವೀರ ಸಾವರ್ಕರ್​ ಭಾರತದ ಹೆಮ್ಮೆಯ ಪುತ್ರ ಎಂದಿದ್ದ ಇಂದಿರಾ ಗಾಂಧಿ; ರಾಹುಲ್ ಗಾಂಧಿ ಟೀಕೆಗೆ ಬಿಜೆಪಿ ತಿರುಗೇಟು

ರಾಹುಲ್ ಗಾಂಧಿಯ ವಕೀಲರು ಡಿಸೆಂಬರ್ 3ರಂದು ಸಂಸತ್ತಿನ ಚಳಿಗಾಲದ ಅಧಿವೇಶನ ಇರುವುದರಿಂದ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು. ನ್ಯಾಯಾಲಯ ವಿನಾಯಿತಿ ನೀಡಿತ್ತು. ಆದರೆ ಇಂದು ನಿಗದಿಯಾಗಿದ್ದ ಮುಂದಿನ ವಿಚಾರಣೆಗೆ ರಾಹುಲ್ ಗಾಂಧಿಯವರು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತ್ತು.

ಲೋಕಸಭೆಯ ವಿರೋಧ ಪಕ್ಷದ ನಾಯಕ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ನಂತರ, ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಮೇಲೆ ಅವರಿಗೆ ಜಾಮೀನು ನೀಡಿದೆ. ಹಿರಿಯ ಕಾಂಗ್ರೆಸ್ ನಾಯಕ ಮೋಹನ್ ಜೋಶಿ ನ್ಯಾಯಾಲಯದ ಮುಂದೆ ಶ್ಯೂರಿಟಿಯಾಗಿ ನಿಂತರು.

ಇದನ್ನೂ ಓದಿ: ಸುಖಾಸುಮ್ಮನೆ ರಾಹುಲ್ ಗಾಂಧಿ ಹೆಸರು ಬಳಸಬೇಡಿ: ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಪ್ರತಿನಿಧಿಸುವ ವಕೀಲ ಮಿಲಿಂದ್ ಪವಾರ್, ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡಿದೆ. ಈ ಪ್ರಕರಣವನ್ನು ಫೆಬ್ರವರಿ 18ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ