Zika Virus: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ತಗುಲಿದ ಸೋಂಕು

ಡೆಂಗ್ಯೂ ನಂತರ ಇದೀಗ ಝಿಕಾ ವೈರಸ್​ ಗದ್ದಲ ಶುರುವಾಗಿದೆ, ಪುಣೆಯಲ್ಲಿ ಇಬ್ಬರಲ್ಲಿ ಝಿಕಾ ಸೋಂಕು ಪತ್ತೆಯಾಗಿದ್ದು, ಆತಂಕ ಶುರುವಾಗಿದೆ. ಪುಣೆಯ ವೈದ್ಯರು ಹಾಗೂ ಅವರ ಮಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Zika Virus: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ತಗುಲಿದ ಸೋಂಕು
ಝಿಕಾ ವೈರಸ್
Follow us
ನಯನಾ ರಾಜೀವ್
|

Updated on: Jun 26, 2024 | 3:03 PM

ದೇಶಕ್ಕೆ ಮುಂಗಾರು ಆಗಮಿಸಿದೆ. ಹಲವು ರಾಜ್ಯಗಳಲ್ಲಿ ಭಾರೀ ಮಳೆ ಆರಂಭವಾಗಿದೆ. ಈ ಅವಧಿಯಲ್ಲಿ ಜನರು ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಮಲೇರಿಯಾ, ಡೆಂಗ್ಯೂ ಸೇರಿ ಇದೀಗ ಪುಣೆಯಲ್ಲಿ ಇಬ್ಬರಲ್ಲಿ ಝಿಕಾ ವೈರಸ್ ಸೋಂಕಿತರು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ.  ವೈದ್ಯರು ಮತ್ತು ಅವರ 13 ವರ್ಷದ ಮಗಳಲ್ಲಿ  ರೋಗಲಕ್ಷಣಗಳು ಕಂಡುಬಂದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಬ್ಬರಿಗೂ ಜ್ವರ ಹಾಗೂ ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಾದರಿಯನ್ನು ತೆಗೆದುಕೊಂಡಿರುವ ವೈದ್ಯರು ಇದು ಝಿಕಾ ವೈರಸ್ ಎಂದು ದೃಢಪಡಿಸಿದ್ದಾರೆ.

ಈಗ ಕುಟುಂಬದ ಐದು ಮಂದಿ ಸದಸ್ಯರ ರಕ್ತದ ಮಾದರಿಯನ್ನೂ ತೆಗೆದುಕೊಳ್ಳಲಾಗಿದೆ. ಈ ಸೋಂಕು ಮೊದಲು 1947ರಲ್ಲಿ ಉಂಗಾಡದಲ್ಲಿ ಗುರುತಿಸಲಾಯಿತು. ಒಂದೊಮ್ಮೆ ಗರ್ಭಿಣಿಯರಿಗೆ ಸೋಂಕು ತಗುಲಿದರೆ ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಮತ್ತಷ್ಟು ಓದಿ: West Nile Fever: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

46 ವರ್ಷದ ವೈದ್ಯರು ಮತ್ತು ಅವರ 13 ವರ್ಷದ ಮಗಳಲ್ಲಿ ರೋಗಲಕ್ಷಣಗಳು ಕಂಡುಬಂದಿವೆ. ಈ ರೋಗವು ಸೊಳ್ಳೆಗಳಿಂದ ಉಂಟಾಗುತ್ತದೆ. ಗರ್ಭಿಣಿಯರು ಹೆಚ್ಚು ಅಪಾಯದಲ್ಲಿದ್ದಾರೆ. ಇದರಿಂದಾಗಿ ಇಂತಹ ಮಹಿಳೆಯರು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಲಾಗುತ್ತಿದೆ.

ಹವಾಮಾನ ವೈಪರೀತ್ಯದಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ಸೇರಿದಂತೆ ಇತರೆ ರೋಗಗಳೂ ಹೆಚ್ಚಾಗತೊಡಗಿವೆ. ಝಿಕಾ ವೈರಸ್ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುವ ಕಾಯಿಲೆಯಾಗಿದ್ದು, ಈ ರೋಗದ ಶೇಕಡಾ 80 ರಷ್ಟು ರೋಗಿಗಳು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ.

ಕೆಲವು ರೋಗಿಗಳು ಜ್ವರ, ಕೀಲು ನೋವು, ದೇಹದ ನೋವು, ತಲೆನೋವು, ಕೆಂಪು ಕಣ್ಣುಗಳು, ವಾಂತಿ, ಅಸ್ವಸ್ಥತೆ, ಜ್ವರ ಮತ್ತು ದೇಹದ ದದ್ದುಗಳನ್ನು ಅನುಭವಿಸುತ್ತಾರೆ. ಝಿಕಾ ರೋಗಿ ಪತ್ತೆಯಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯೂ ಎಚ್ಚೆತ್ತುಕೊಂಡಿದೆ.

ಇದನ್ನು ತಡೆಯುವುದು ಹೇಗೆ? ಮನೆಗಳಲ್ಲಿ ಸೊಳ್ಳೆಗಳನ್ನು ತಪ್ಪಿಸಿ, ಸ್ವಚ್ಛವಾಗಿಡಿ, ಸೊಳ್ಳೆ ಪರದೆಗಳನ್ನು ಬಳಸಿ ಹೆಚ್ಚು ಕಾಲ ನೀರು ನಿಲ್ಲದಂತೆ ನೋಡಿಕೊಳ್ಳಿ ಎರಡು ದಿನಗಳ ಕಾಲ ಜ್ವರ ಮುಂದುವರೆದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಚವಾಗಿಡಬೇಕು, ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ