ಕೈಯಲ್ಲಿ ಮಗು ಇರುವಾಗ ಕಚ್ಚೇ ಬಿಡ್ತು ನಾಯಿ, ಭಯದಿಂದ ಮಹಿಳೆ ನಡುಗಿದಾಗ ಕೈಯಿಂದ ಜಾರಿ ಬಿದ್ದ ಪಾಪು

ಪುಣೆಯಲ್ಲಿ ಮಹಿಳೆಯೊಬ್ಬರ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದರಿಂದ ಕೈಯಲ್ಲಿದ್ದ ಒಂದು ವರ್ಷದ ಮಗು ಬಿದ್ದು ಗಾಯಗೊಂಡಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದ್ದು, PCMC ವ್ಯಾಪ್ತಿಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿವೆ. ಪಾಲಿಕೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಲಾಗಿದೆ. ನಾಗರಿಕರ ಸುರಕ್ಷತೆ ಖಚಿತಪಡಿಸಲು ಆಕ್ರಮಣಕಾರಿ ನಾಯಿಗಳನ್ನು ಪ್ರತ್ಯೇಕಿಸಿ ತುರ್ತು ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ.

ಕೈಯಲ್ಲಿ ಮಗು ಇರುವಾಗ ಕಚ್ಚೇ ಬಿಡ್ತು ನಾಯಿ, ಭಯದಿಂದ ಮಹಿಳೆ ನಡುಗಿದಾಗ ಕೈಯಿಂದ ಜಾರಿ ಬಿದ್ದ ಪಾಪು
ತಾಯಿ-ಮಗು

Updated on: Aug 26, 2026 | 3:35 PM

ಪುಣೆ , ಆಗಸ್ಟ್ 26: ಮಹಾರಾಷ್ಟ್ರದ ಪುಣೆ ಸಮೀಪದ ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ (PCMC) ವ್ಯಾಪ್ತಿಯ ಓಲ್ಡ್ ಸಾಂಗ್ವಿಯಲ್ಲಿ ಬೀದಿ ನಾಯಿ(Dog)ಯೊಂದು ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ, ಆಕೆಯ ಕೈಯಲ್ಲಿದ್ದ ಒಂದು ವರ್ಷದ ಕಂದಮ್ಮ ನೆಲಕ್ಕೆ ಬಿದ್ದು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಬುಧವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಧುಬನ್ ಹೌಸಿಂಗ್ ಸೊಸೈಟಿ ಬಳಿ ನಡೆದಿರುವ ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಗರಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಮಹಿಳೆ ತನ್ನ ಮಗುವನ್ನು ಎತ್ತಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಹಿಂದಿನಿಂದ ಬಂದ ಎರಡು ನಾಯಿಗಳಲ್ಲಿ ಒಂದು ನಾಯಿ ಆಕೆಯ ಕಾಲನ್ನು ಕಚ್ಚಿದೆ.

ನಾಯಿ ಕಡಿತದ ನೋವು ಮತ್ತು ಭಯದಿಂದ ಮಹಿಳೆ ನಿಯಂತ್ರಣ ತಪ್ಪಿ ಬಿದ್ದಿದ್ದು, ಈ ವೇಳೆ ಕೈಯಲ್ಲಿದ್ದ ಒಂದು ವರ್ಷದ ಕಂದಮ್ಮ ರಸ್ತೆಗೆ ಅಪ್ಪಳಿಸಿದೆ. ಗಾಯಗೊಂಡ ತಾಯಿ ಮತ್ತು ಮಗುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆ್ಯಂಟಿ-ರೇಬಿಸ್ ಲಸಿಕೆ ನೀಡಲಾಗಿದೆ.
ಪಿಸಿಎಂಸಿ ಅಧಿಕೃತ ಅಂಕಿಅಂಶಗಳ ಪ್ರಕಾರ, 2021-22ರಲ್ಲಿ 13,800 ರಷ್ಟಿದ್ದ ನಾಯಿ ಕಡಿತ ಪ್ರಕರಣಗಳ ಸಂಖ್ಯೆಯು 2025-26ರಲ್ಲಿರ ವೇಳೆಗೆ ಬರೋಬ್ಬರಿ 38 ಸಾವಿರಕ್ಕೂ ಹೆಚ್ಚು ಪ್ರಕರಣಗಳಿಗೆ ಏರಿಕೆಯಾಗಿದೆ.

ವಿಡಿಯೋ

ಇತ್ತೀಚೆಗೆ ಚಿಖಾಲಿ ಪ್ರದೇಶದಲ್ಲಿ 5 ವರ್ಷದ ಬಾಲಕಿಯೊಬ್ಬಳ ಮೇಲೆ 7 ನಾಯಿಗಳ ಹಿಂಡು ದಾಳಿ ನಡೆಸಿದ್ದು, ಆಕೆಗೆ 80 ಕ್ಕೂ ಹೆಚ್ಚು ಹೊಲಿಗೆಗಳನ್ನು ಹಾಕಲಾಗಿತ್ತು.

ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳ ಅಡಿಯಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್ ವಿರೋಧಿ ಲಸಿಕೆ ಕಾರ್ಯಕ್ರಮಗಳನ್ನು ಪಾಲಿಕೆ ಸಮರ್ಪಕವಾಗಿ ಜಾರಿಗೊಳಿಸದಿರುವುದೇ ಈ ಹಾವಳಿಗೆ ಮುಖ್ಯ ಕಾರಣವೆಂದು ಪ್ರಾಣಿ ಕಲ್ಯಾಣ ಕಾರ್ಯಕರ್ತರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ; ಕಾರಣ ಏನು ಗೊತ್ತಾ?

ಕಾನೂನು ಮತ್ತು ಸುರಕ್ಷತಾ ಮಾರ್ಗಸೂಚಿ: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮತ್ತು ವೃದ್ಧರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಕ್ರಮಣಕಾರಿ ನಾಯಿಗಳನ್ನು ಪ್ರತ್ಯೇಕಿಸಿ ತುರ್ತು ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಪಾಲಿಕೆಗೆ ಒತ್ತಾಯಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us