ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ; ಅಗ್ನಿ ನಂದಿಸಿ ಮನೆಗೆ ತೆರಳುವಾಗ ಅಗ್ನಿಶಾಮಕ ದಳದ ಅಧಿಕಾರಿ ಸಾವು

|

Updated on: Mar 27, 2021 | 2:19 PM

ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಕ ದಳ ಮುಂದಾಗಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ನಂತರ ಪ್ರಕಾಶ್ ಹಸ್ಬೆ ಮನೆಗೆ ಹೋಗುವಾಗ ಯೆರಾವಾ ಬಳಿ ಅಪಘಾತ ಸಂಭವಿಸಿದ್ದು, ಪ್ರಕಾಶ್ ಹಸ್ಬೆ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.

ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ; ಅಗ್ನಿ ನಂದಿಸಿ ಮನೆಗೆ ತೆರಳುವಾಗ ಅಗ್ನಿಶಾಮಕ ದಳದ ಅಧಿಕಾರಿ ಸಾವು
ಅಗ್ನಿ ಅವಘಡ ಸಾಂದರ್ಭಿಕ ಚಿತ್ರ
Follow us on

ಪುಣೆ: ನಗರದ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿದ್ದು, ಇಲ್ಲಿನ ಬೆಂಕಿಯನ್ನು ನಂದಿಸಿ ಮನೆಗೆ ತೆರಳುವಾಗ ಕರ್ತವ್ಯನಿರತ ಅಗ್ನಿಶಾಮಕ ದಳದ ಅಧಿಕಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಪ್ರಕಾಶ್ ಹಸ್ಬೆ ಎಂದು ಗುರುತಿಸಲಾಗಿದೆ. ಪ್ರಕಾಶ್ ಪುಣೆ ಕಂಟೋನ್ಮೆಂಟ್ ಮಂಡಳಿಯ ಅಗ್ನಿಶಾಮಕ ದಳದ ಮುಖ್ಯಸ್ಥರಾಗಿದ್ದರು.

ಪುಣೆಯ ಕ್ಯಾಂಪ್ ಪ್ರದೇಶದ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ನಿನ್ನೆ ಮಧ್ಯರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿತ್ತು. ಮುಂಜಾನೆ ಒಂದು ಗಂಟೆ ಸುಮಾರಿಗೆ ಬೆಂಕಿ ಸಂಪೂರ್ಣವಾಗಿ ಆವರಿಸಿಕೊಂಡಿದ್ದು, ಈ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಕ ದಳ ಮುಂದಾಗಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ನಂತರ ಪ್ರಕಾಶ್ ಹಸ್ಬೆ ಮನೆಗೆ ಹೋಗುವಾಗ ಯೆರಾವಾ ಬಳಿ ಅಪಘಾತ ಸಂಭವಿಸಿದ್ದು, ಪ್ರಕಾಶ್ ಹಸ್ಬೆ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.

ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ:
ಪುಣೆಯ ಕ್ಯಾಂಪ್ ಪ್ರದೇಶದ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ನಿನ್ನೆ ಮಧ್ಯರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯನ್ನು ನಂದಿಸಲು 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದವು. ಮೂರು ಗಂಟೆಗಳ ಸತತ ಪರಿಶ್ರಮದ ನಂತರ ಬೆಂಕಿಯನ್ನು ನಂದಿಸಲಾಯಿತು. ಅದೃಷ್ಟವಶಾತ್ ಈ ಬೆಂಕಿ ಅವಘಡದಲ್ಲಿ ಯಾವುದೇ ವ್ಯಕ್ತಿಯ ಪ್ರಾಣಕ್ಕೆ ಹಾನಿಯಾಗಿಲ್ಲ. ಆದರೆ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿದ್ದ ಸುಮಾರು 800 ಅಂಗಡಿಗಳು ಬೆಂಕಿಗೆ ಸುಟ್ಟು ಹೋಗಿದ್ದು, ಇಲ್ಲಿನ ವ್ಯಾಪಾರಿಗಳಿಗೆ ಕೋಟಿಗಟ್ಟಲೇ ಹಣ ನಷ್ಟವಾಗಿದೆ.

ಯಾವುದೇ ಪ್ರಾಣಹಾನಿ ಇಲ್ಲ:
ಫ್ಯಾಶನ್ ಸ್ಟ್ರೀಟ್ ಕಿರಿದಾದ ಬೀದಿಗಳನ್ನು ಹೊಂದಿರುವುದರಿಂದ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಲು ಶ್ರಮಿಸಬೇಕಾಯಿತು. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಅದಾಗಿಯೂ ಫ್ಯಾಶನ್ ಸ್ಟ್ರೀಟ್ ಸುತ್ತಮುತ್ತಲಿನ ಅನೇಕ ಬಟ್ಟೆ ಅಂಗಡಿಗಳು ಮತ್ತು ಗೋದಾಮುಗಳಿಗೆ ಭಾರಿ ನಷ್ಟವಾಗಿದೆ. ಇನ್ನು ಈ ಬೆಂಕಿ ಹೇಗೆ ಕಾಣಿಸಿಕೊಂಡಿತು? ಎಷ್ಟು ಗಂಟೆಗೆ ಬೆಂಕಿ ಕಾಣಿಸಿದೆ ಎನ್ನುವುದರ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಹೊರ ಬಂದಿಲ್ಲ.

ಇದನ್ನೂ ಓದಿ:
Fire ದೇವರ ಮನೆಯಲ್ಲಿ ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ: ಮನೆಯಲ್ಲಿದ್ದ 1 ಲಕ್ಷ ನಗದು, 30 ಗ್ರಾಂ ಚಿನ್ನ ಸುಟ್ಟು ಭಸ್ಮ

ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 10 ಗಂಟೆಗಳ ಸತತ ಕಾರ್ಯಾಚರಣೆ ಬಳಿಕವೂ ನಿಯಂತ್ರಣಕ್ಕೆ ಬಾರದ ಬೆಂಕಿ