AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಯನ್ನು ಕೊಂದು ಆಂಬ್ಯುಲೆನ್ಸ್​ಗೆ ಕರೆ ಮಾಡಿದ ವ್ಯಕ್ತಿ

ಪುಣೆಯ ಹಿಂಜೆವಾಡಿಯಲ್ಲಿ ಐಟಿ ಉದ್ಯೋಗಿ ಯುವತಿಯ ಕೊಲೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗೆಳತಿಯನ್ನು ಕೊಂದ ಆರೋಪಿ, ನಂತರ ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾನೆ. ವಾಗ್ವಾದ ತೀವ್ರಗೊಂಡು ಹಲ್ಲೆ ನಡೆಸಿದ್ದು, ಯುವತಿ ಸಾವನ್ನಪ್ಪಿದ್ದಾಳೆ. ಪೊಲೀಸರು ಆರೋಪಿ ಬಾಯ್‌ಫ್ರೆಂಡ್‌ನನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಗೆಳತಿಯನ್ನು ಕೊಂದು ಆಂಬ್ಯುಲೆನ್ಸ್​ಗೆ ಕರೆ ಮಾಡಿದ ವ್ಯಕ್ತಿ
ಕ್ರೈಂ Image Credit source: Indian Journal Of Legal reviews
ನಯನಾ ರಾಜೀವ್
|

Updated on: Nov 24, 2026 | 7:37 AM

Share

ಪುಣೆ, ನವೆಂಬರ್ 24: ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಗೆಳತಿಯನ್ನು ಕೊಲೆ ಮಾಡಿ ಬಳಿಕ ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದ ಘಟನೆ ಮಹಾರಾಷ್ಟ್ರದ ಪುಣೆಯ ಹಿಂಜೆವಾಡಿ ಪ್ರದೇಶದಲ್ಲಿ ನಡೆದಿದೆ. ಪಿಜಿಯಲ್ಲಿ ಮಹಿಳಾ ಸಾಫ್ಟ್​ವೇರ್ ಎಂಜಿನಿಯರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮೇಲೆ ನಡೆಸಿದ ಆರೋಪದಲ್ಲಿ ಶುಂಭನನ್ನು ಪೊಲೀಸರು ಬಂದಿಸಿದ್ದಾರೆ.

ಮೃತ ಮಹಿಳೆಯನ್ನು 27 ವರ್ಷದ ಕೋಮಲ್ ರಾಜೇಂದ್ರ ದಹಲೆ ಎಂದು ಗುರುತಿಸಲಾಗಿದೆ. ಅವರು ವಾರ್ಧಾ ಜಿಲ್ಲೆಯವರು. ಆರೋಪಿಯಾಗಿರುವ ಶುಭಂ ಕಲ್ಬಂಡೆ ಬುಲ್ಧಾನಾ ಜಿಲ್ಲೆಯ ನಿವಾಸಿ. ಕೋಮಲ್ ವಿಪ್ರೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಶುಭಂ ಇನ್ಫೋಸಿಸ್‌ನಲ್ಲಿ ಉದ್ಯೋಗಿಯಾಗಿದ್ದರು. ಇಬ್ಬರೂ ಪುಣೆಯ ಐಟಿ ವಲಯದಲ್ಲಿ ಕೆಲಸ ಮಾಡುತ್ತಿದ್ದರು.

ಊಟಕ್ಕೆ ಹೋಗಿ ಬಂದ ಬಳಿಕ ಆರಂಭವಾದ ಜಗಳ

ಭಾನುವಾರ ರಾತ್ರಿ ಇಬ್ಬರೂ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಬಳಿಕ ಕೋಮಲ್ ವಾಸವಿದ್ದ ಹಿಂಜೆವಾಡಿಯ ಸಖಾರೆ ವಸ್ತಿ ಪ್ರದೇಶದ ಪ್ರಿಸ್ಟೈನ್ ಪಿಜಿಗೆ ಮರಳಿದ್ದರು. ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಕಳೆದ ಎರಡು-ಮೂರು ತಿಂಗಳಿಂದಲೂ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ್ಗೆ ವಾಗ್ವಾದ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆಗೆ ಜಗಳ ತೀವ್ರಗೊಂಡಿದೆ. ಈ ವೇಳೆ ಶುಭಂ ಕೋಮಲ್ ಮೇಲೆ ಕೈಗಳಿಂದ ಹಲವು ಬಾರಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಮಲ್ ಗಂಭೀರ ಸ್ಥಿತಿಗೆ ತಲುಪಿದ್ದು, ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇಡೀ ರಾತ್ರಿ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಆರೋಪಿ?

ಘಟನೆ ನಡೆದ ಬಳಿಕ ಶುಭಂ ಕೋಮಲ್ ಅವರ ಮೃತದೇಹದ ಪಕ್ಕದಲ್ಲೇ ಹಲವು ಗಂಟೆಗಳ ಕಾಲ ಕುಳಿತಿದ್ದ ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಸುಮಾರು 6.30ಕ್ಕೆ ಪೊಲೀಸರಿಗೆ ಕರೆ ಮಾಡಿ ಆಂಬ್ಯುಲೆನ್ಸ್ ಕಳುಹಿಸುವಂತೆ ಮನವಿ ಮಾಡಿದ್ದಾನೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಪಿಜಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೋಮಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪೊಲೀಸರ ವಿಚಾರಣೆ ಮತ್ತು ಪ್ರಾಥಮಿಕ ತನಿಖೆಯ ಬಳಿಕ ಶುಭಂನನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ನಿಖರವಾಗಿ ಸಾವಿಗೆ ಕಾರಣವೇನು ಎಂಬುದನ್ನು ಮರಣೋತ್ತರ ಪರೀಕ್ಷೆಯ ವರದಿ ಮತ್ತು ಮುಂದಿನ ತನಿಖೆಯಿಂದ ಖಚಿತಪಡಿಸಿಕೊಳ್ಳಬೇಕಿದೆ. ಹಿಂಜೆವಾಡಿ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 5 ತಿಂಗಳ ಹಿಂದಷ್ಟೇ ಮದುವೆ; 2 ತಿಂಗಳ ಹಿಂದೆಯೇ ಕೊಲೆ; ಬೆಂಗಳೂರಿನ ಅಸ್ಥಿಪಂಜರ ಕೇಸ್‌ಗೆ ಬಿಗ್ ಟ್ವಿಸ್ಟ್‌

ನಾಸಿಕ್‌ನಲ್ಲೂ ಲಿವ್‌ಇನ್ ಸಂಗಾತಿಯ ಹತ್ಯೆ ಪ್ರಕರಣ, ಮಹಿಳೆ ಸೇರಿ ನಾಲ್ವರು ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲೂ ಲಿವ್‌ಇನ್ ಸಂಬಂಧಕ್ಕೆ ಸಂಬಂಧಿಸಿದ ಮತ್ತೊಂದು ಗಂಭೀರ ಪ್ರಕರಣ ಬೆಳಕಿಗೆ ಬಂದಿತ್ತು. 40 ವರ್ಷದ ವಸಂತ್ ಗೋರಖನಾಥ್ ಸತ್ಪುಟೆ ಎಂಬ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಆತನ ಲಿವ್‌ಇನ್ ಸಂಗಾತಿ ಹಸೀನಾ ಶೇಖ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ 2026ರ ಆಗಸ್ಟ್‌ನಲ್ಲಿ ನಡೆದಿತ್ತು.

ನಾಸಿಕ್‌ನ ಪಠಾರ್ಡಿ ಫಾಟಾ ಪ್ರದೇಶದ ಸ್ವರಾಜ್ಯನಗರದಲ್ಲಿ ವಾಸವಿದ್ದ ವಸಂತ್ ಆಗಸ್ಟ್ 5ರಿಂದ ನಾಪತ್ತೆಯಾಗಿದ್ದರು. ಅವರ ಚಾಲಕ ಆಗಸ್ಟ್ 16ರಂದು ಪೊಲೀಸರಿಗೆ ದೂರು ನೀಡಿದ್ದರು. ವಸಂತ್ ಅವರ ನಾಪತ್ತೆಯ ಹಿಂದೆ ಅಪಹರಣ ಅಥವಾ ಹತ್ಯೆಯ ಶಂಕೆಯಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಕಸಾರಾ ಘಾಟ್‌ನ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆ

ಪೊಲೀಸರ ತನಿಖೆಯ ಪ್ರಕಾರ, ಆಗಸ್ಟ್ 6ರ ಬೆಳಗಿನ ಜಾವ ಸುಮಾರು 3 ಗಂಟೆಗೆ ಹಸೀನಾ ಮತ್ತು ಸಾಹಿಲ್ ರಫೀಕ್ ಶಾ ಸೇರಿ ವಸಂತ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಆರೋಪವಿದೆ. ಬಳಿಕ ಸಾಹಿಲ್, ಮೊಯಿನ್ ಮುಖ್ತಾರ್ ಶಾ ಮತ್ತು ಸರ್ಫರಾಜ್ ಅಬ್ರಾರ್ ಸಯ್ಯದ್ ಅವರ ಸಹಾಯದಿಂದ ಮೃತದೇಹವನ್ನು ಚೀಲದಲ್ಲಿ ತುಂಬಿ ಕಾರಿನಲ್ಲಿ ಸಾಗಿಸಿ ಕಸಾರಾ ಘಾಟ್‌ನ ಅರಣ್ಯ ಪ್ರದೇಶದಲ್ಲಿ ಎಸೆದಿದ್ದರು ಎನ್ನಲಾಗಿದೆ.

ತನಿಖೆ ನಡೆಸಿದ ಅಪರಾಧ ವಿಭಾಗದ ಪೊಲೀಸರು ಕಸಾರಾ ಘಾಟ್‌ನಲ್ಲಿ ಶೋಧ ನಡೆಸಿ ಮೃತದೇಹವನ್ನು ಪತ್ತೆಹಚ್ಚಿದ್ದರು. ಈ ಪ್ರಕರಣದಲ್ಲಿ ಹಸೀನಾ ಹಬೀಬ್ ಶೇಖ್, ಸಾಹಿಲ್ ರಫೀಕ್ ಶಾ, ಮೊಯಿನ್ ಮುಖ್ತಾರ್ ಶಾ ಮತ್ತು ಸರ್ಫರಾಜ್ ಅಬ್ರಾರ್ ಸಯ್ಯದ್ ಅವರನ್ನು ಬಂಧಿಸಲಾಗಿತ್ತು. ಹಸೀನಾ ಮತ್ತು ಸಾಹಿಲ್ ನಡುವಿನ ಸಂಬಂಧಕ್ಕೆ ವಸಂತ್ ಅಡ್ಡಿಯಾಗಿದ್ದರು ಎಂಬುದು ಆರೋಪಿಗಳ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ