ಗೆಳತಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪುಣೆಯಲ್ಲಿ ವ್ಯಕ್ತಿಯೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು 20 ವರ್ಷದ ದಿವ್ಯಾ ನಿಗೋಟ್ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿಯನ್ನು ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಪುಣೆಯ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆ ವ್ಯಕ್ತಿ ಟೆಕ್ನಿಷಿಯನ್ ಆಗಿದ್ದ, ಯುವತಿ ಅದೇ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.

ಗೆಳತಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಸಾವು

Updated on: Dec 01, 2025 | 8:06 AM

ಪುಣೆ, ಡಿಸೆಂಬರ್ 01: ಪುಣೆಯಲ್ಲಿ ವ್ಯಕ್ತಿಯೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು 20 ವರ್ಷದ ದಿವ್ಯಾ ನಿಗೋಟ್ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿಯನ್ನು ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಪುಣೆಯ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆ ವ್ಯಕ್ತಿ ಟೆಕ್ನಿಷಿಯನ್ ಆಗಿದ್ದ, ಯುವತಿ ಅದೇ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.

ದಿವ್ಯಾ ಅವರ ಕುಟುಂಬವು ನಾಪತ್ತೆ ದೂರು ದಾಖಲಿಸಿತ್ತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಸಂಗಮವಾಡಿ ಪ್ರದೇಶದ ವ್ಯಕ್ತಿಯ ಮನೆಯಲ್ಲಿ ದಿವ್ಯಾ ಅವರ ಮೃತದೇಹ ಪತ್ತೆಯಾಗಿದೆ. ತಲೆಗಾಂವ್ ರೈಲ್ವೆ ಹಳಿಯ ಬಳಿ ಆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ದಿವ್ಯಾಳ ಮೂಗು ಮತ್ತು ಮುಖದ ಮೇಲೆ ದಾಳಿಯ ಗುರುತುಗಳಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ
ತನ್ನ ಮನೆಯವರಿಂದ ಹತ್ಯೆಯಾದ ಪ್ರಿಯಕರನ ಮೃತದೇಹವನ್ನೇ ಯುವತಿ ಮದುವೆಯಾಗಿರುವ ಘಟನೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದಿದೆ. ಸಕ್ಷಮ್‌ ಕೊಲೆಯಾದ ಯುವಕ. ಆತನನ್ನು ಪ್ರೀತಿಸುತ್ತಿದ್ದ ಆಂಚಲ್‌ ಈಗ ಅತ್ತೆ ಮನೆಗೆ ಹೋಗಿದ್ದಾಳೆ. ಪ್ರಿಯಕರನ ಮೃತದೇಹವನ್ನೇ ವರಿಸಿ ಯುವತಿ ತನ್ನ ಕುಟುಂಬವನ್ನು ತೊರೆದಿದ್ದಾಳೆ. ಆಂಚಲ್ ತನ್ನ ಸಹೋದರರ ಮೂಲಕ ಸಕ್ಷಮ್ ಟೇಟ್‌ನನ್ನು ಭೇಟಿಯಾದಳು. ಆಗಾಗ ಆತನ ಮನೆಗೆ ಭೇಟಿ ನೀಡುತ್ತಿದ್ದಳು.

ಮತ್ತಷ್ಟು ಓದಿ: ಪ್ರೀತಿಸಿದನಿಂದಲೇ ಲೈಂಗಿಕ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್​ವುಡ್​ ನಟಿಯ ಸಂಬಂಧಿ

ಇಬ್ಬರ ನಡುವೆ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗಿತ್ತು,  ಪ್ರೀತಿಯಲ್ಲಿದ್ದ ಜೋಡಿಯ ಮದುವೆಗೆ ಹುಡುಗಿಯ ಮನೆಯವರ ವಿರೋಧವಿತ್ತು. ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ ಇಬ್ಬರ ಮದುವೆಗೆ ಹುಡುಗಿ ಕಡೆಯವರು ನಿರಾಕರಿಸಿದ್ದರು. ಆಕೆಯನ್ನು ಮರೆತುಬಿಡುವಂತೆ ಹುಡುಗನಿಗೆ ಬೆದರಿಕೆ ಹಾಕಿದ್ದರು. ಆದರೆ, ಅವರಿಬ್ಬರು ತಮ್ಮ ಪ್ರೀತಿಯನ್ನು ಮುಂದುವರಿಸಿದ್ದರು. ಇದರಿಂದ ಸಿಟ್ಟಾದ ಹುಡುಗಿ ಮನೆಯವರು, ಯುವಕನನ್ನು ಥಳಿಸಿ ಗುಂಡು ಹಾರಿಸಿ ಹತ್ಯೆ ಮಾಡಿದರು.

ಇದರಿಂದ ಮನನೊಂದ ಯುವತಿ, ಸಕ್ಷಮ್‌ ಅಂತ್ಯಕ್ರಿಯೆ ವೇಳೆ ಆತನ ಹಣೆಯ ಮೇಲೆ ತಿಲಕ ಇಟ್ಟು ಮದುವೆಯಾಗಿದ್ದಾಳೆ. ನಾನು ಇನ್ಮುಂದೆ ಸಕ್ಷಮ್‌ ಮನೆಯಲ್ಲಿ ಸೊಸೆಯಾಗಿ ವಾಸಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದಾಳೆ. ಪೊಲೀಸರು ಆರು ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ