ಭರ್ಜರಿ ಲೂಟಿ ಮಾಡಿದ್ದ ಕಳ್ಳರು ಅರೆಸ್ಟ್​: ಈ ಚೋರರು ಕದ್ದಿದ್ದಾದ್ರೂ ಏನ್​ ಗೊತ್ತಾ?

ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ. ಅಲ್ಲಿಗೂ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ! ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ  ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ. ಹೌದು, ಮಹಾರಾಷ್ಟ್ರದ ಪುಣೆ ಗ್ರಾಮಾಂತರ ಪೊಲೀಸರು ಒಂದಲ್ಲ […]

ಭರ್ಜರಿ ಲೂಟಿ ಮಾಡಿದ್ದ ಕಳ್ಳರು ಅರೆಸ್ಟ್​: ಈ ಚೋರರು ಕದ್ದಿದ್ದಾದ್ರೂ ಏನ್​ ಗೊತ್ತಾ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 27, 2020 | 12:38 PM

ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ.

ಅಲ್ಲಿಗೂ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ! ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ  ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ. ಹೌದು, ಮಹಾರಾಷ್ಟ್ರದ ಪುಣೆ ಗ್ರಾಮಾಂತರ ಪೊಲೀಸರು ಒಂದಲ್ಲ ಎರಡಲ್ಲ ಬರೋಬ್ಬರಿ 58 ಮೂಟೆ ಈರುಳ್ಳಿಯನ್ನು ಕದ್ದೊಯ್ದ ಚೋರರ ಗ್ಯಾಂಗ್​ ಒಂದನ್ನು ಬಂಧಿಸಿದೆ.

ಅಕ್ಟೋಬರ್​ 21ರಂದು ರೈತನೊಬ್ಬ ತನ್ನ ಉಗ್ರಾಣದಲ್ಲಿ ಶೇಖರಿಸಿದ್ದ ಈರುಳ್ಳಿ ಮೂಟೆಗಳನ್ನು ಈ ಕಳ್ಳ ಮಹಾಶಯರು ಹೊತ್ತೊಯ್ದಿದ್ದರು. ಇನ್ನು ರೈತ ನೀಡಿದ ದೂರಿನನ್ವಯ ಖದೀಮರನ್ನು ಬೆನ್ನಟಿದ ಪೊಲೀಸರು ಎಲ್ಲರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದ ಹಾಗೆ, ಈರುಳ್ಳಿ ಕಳ್ಳರು ಅರೆಸ್ಟ್​ ಆಗೋ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ ಎಂದು ಖಾಕಿ ಪಡೆ ಮಾಹಿತಿ ನೀಡಿದೆ. ಕದ್ದ ಈರುಳ್ಳಿ ಒಟ್ಟು ಮೌಲ್ಯ ಸುಮಾರು 2.35 ಲಕ್ಷ ರೂಪಾಯಿ ಇದ್ದು ಈರುಳ್ಳಿ ಸಹ ಕಳ್ಳರ ಕೈಚಳಕಕ್ಕೆ ಒಳಗಾಗುವಂಥ ಸೂಕ್ತ ಟಾರ್ಗೆಟ್ ಆಗಿ ಪರಿಣಮಿಸಿದೆ.

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ