ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು

ಪುಣೆಯ ಪೋರ್ಷೆ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ವೇದಾಂತ್ ಅಗರ್ವಾಲ್​ ರಕ್ತದ ಮಾದರಿಯನ್ನು ಬದಲಾಯಿಸಿ ಡಸ್ಟ್​ಬಿನ್​ಗೆ ಎಸೆಯಲಾಗಿತ್ತು, ಈ ಕೆಲಸಕ್ಕೆ 3 ಲಕ್ಷ ರೂ ಕೊಡಲಾಗಿತ್ತು ಎನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ.

ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು
ಕಾರು ಅಪಘಾತ
Image Credit source: India Today

Updated on: May 28, 2024 | 10:46 AM

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ(Porsche Car Accident) ಪ್ರಕರಣ ದಿನದಿಂದ ದಿನಕ್ಕೆ ಬೇರೆ ದಿಕ್ಕು ಪಡೆದುಕೊಳ್ಳುತ್ತಿದೆ. ಅಪ್ರಾಪ್ತ ಆರೋಪಿ ವೇದಾಂತ್​ ರಕ್ತದ ಮಾದರಿಯನ್ನು ಬದಲಾಯಿಸಲು ಆಸ್ಪತ್ರೆ ಸಿಬ್ಬಂದಿಗೆ 3 ಲಕ್ಷ ರು. ಕೊಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆರೋಪಿ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಆರೋಪಿಯನ್ನು ನಿರಪರಾಧಿ ಎಂದು ಸಾಬೀತುಮಾಡಲು ಈ ಕೃತ್ಯವೆಸಗಿದ್ದಾರೆ. ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿ ನಿಜವಾದ ಮಾದರಿಯನ್ನು ಡಸ್ಟ್​ಬಿನ್​ಗೆ ಎಸೆಯಲಾಗಿತ್ತು.

ಈ ಸಂಬಂಧ ಆಸ್ಪತ್ರೆ ಇಬ್ಬರ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ವರದಿಯಲ್ಲಿ ಆತನ ರಕ್ತದಲ್ಲಿ ಆಲ್ಕೋಹಾಲ್ ಇರಲಿಲ್ಲ ಎನ್ನುವ ವಿಚಾರ ಪೊಲೀಸರಿಗೆ ಆಶ್ಚರ್ಯ ಮೂಡಿಸಿತ್ತು.

ಮೇ 19ರಂದು ಕುಡಿದ ಮತ್ತಿನಲ್ಲಿ ವೇದಾಂತ್​ ಅಗರ್ವಾಲ್​ ತನ್ನ ಐಷಾರಾಮಿ ಪೋರ್ಷೆ ಕಾರು ಓಡಿಸಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ:  Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಇದಾದ ಬಳಿಕ ವೇದಾಂತ್​ನ್ನು ಪೊಲೀಸರು ಬಂಧಿಸಿದ್ದರು, ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆತನ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಎಲ್ಲೆಡೆ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ವೇದಾಂತ್​ ಅಗರ್ವಾಲ್​ ಜಾಮೀನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿದೆ.

ಮೊದಲು ತಮ್ಮ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಚಾಲಕರಿದ್ದಾರೆ ಎಂದು ವಿಶಾಲ್ ಹೇಳಿದ್ದರು, ಆದರೆ ಚಾಲಕನನ್ನು ಕೇಳಿದಾಗ ಮಗ ಡ್ರೈವ್​ ಮಾಡ್ತಾನೆ ನೀನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತುಕೋ ಎಂದು ವಿಶಾಲ್​ ತನಗೆ ಹೇಳಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭೂಗತ ಪಾತಕಿ ಛೋಟಾ ರಾಜನ್ ಹಾಗೂ ವೇದಾಂತ್​ ಅಜ್ಜನಿಗೂ ನಂಟಿದೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us