Pune Porsche Crash: ಪೋರ್ಷೆ ಅಪಘಾತ; ಸಿಬಿಐ ತನಿಖೆ, ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ಪುಣೆಯಲ್ಲಿ ಮೇ 19ರಂದು ಮಧ್ಯರಾತ್ರಿ ಕುಡಿದು ಪೋರ್ಷೆ ಕಾರು ಚಲಾಯಿಸಿ, ಬೈಕ್​ನಲ್ಲಿದ್ದ ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳ ಸಾವಿಗೆ ಕಾರಣವಾಗಿದ್ದ 17 ವರ್ಷದ ಅಪ್ರಾಪ್ತ ಯುವಕನ ಪ್ರಕರಣ ಇದೀಗ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಹಾರಾಷ್ಟ್ರ ಕಾಂಗ್ರೆಸ್ ಒತ್ತಾಯಿಸಿದೆ.

Pune Porsche Crash: ಪೋರ್ಷೆ ಅಪಘಾತ; ಸಿಬಿಐ ತನಿಖೆ, ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ಪೋರ್ಷೆ ಅಪಘಾತ
Follow us
ಸುಷ್ಮಾ ಚಕ್ರೆ
|

Updated on: May 28, 2024 | 10:05 PM

ಪುಣೆ: ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಪುಣೆ ಅಗರ್​ವಾಲ್ ಕುಟುಂಬದ ಪೋರ್ಷೆ ಅಪಘಾತದ (Pune Porsche Crash) ಕುರಿತು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಇಂದು ಒತ್ತಾಯಿಸಿದೆ. ಇದರ ಜೊತೆಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆಗೂ ಕಾಂಗ್ರೆಸ್ ಆಗ್ರಹಿಸಿದೆ. 10 ದಿನಗಳ ಹಿಂದೆ 17 ವರ್ಷದ ಯುವಕ ಎರಡು ಬಾರ್‌ಗಳಲ್ಲಿ ಪಾರ್ಟಿಯಲ್ಲಿ ಭಾಗವಹಿಸಿದ ನಂತರ ಪೋರ್ಷೆ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದಾಗ ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ಕೊಂದಿದ್ದ. ಆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಪ್ರಬಂಧ ಬರೆಯುವ ಷರತ್ತಿನಡಿಯಲ್ಲಿ ಆ ಅಪ್ರಾಪ್ತನನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದಕ್ಕೂ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದವು.

ಆ ಅಪ್ರಾಪ್ತನ ಬಿಡುಗಡೆಯು ರಾಷ್ಟ್ರವ್ಯಾಪಿ ಆಕ್ರೋಶವನ್ನು ಉಂಟುಮಾಡಿತು. ನಂತರ ಆತನ ಜಾಮೀನು ರದ್ದುಪಡಿಸಲಾಗಿತ್ತು. ಆ ಬಾಲಕನಿಗೆ ಅಕ್ರಮವಾಗಿ ಕಾರು ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಆತನ ತಂದೆ ವಿಶಾಲ್ ಅಗರ್​ವಾಲ್​ನನ್ನು ಬಂಧಿಸಲಾಗಿತ್ತು. ಬಳಿಕ ಕಾರು ಚಾಲಕನಿಗೆ ಬೆದರಿಕೆ ಹಾಕಿ ಅಕ್ರಮವಾಗಿ ಬಂಧಿಸಿಟ್ಟಿದ್ದಕ್ಕೆ ಆ ಬಾಲಕನ ಅಜ್ಜ ಸುರೇಂದ್ರ ಅಗರ್​ವಾಲ್ ಅವರನ್ನು ಕೂಡ ಬಂಧಿಸಲಾಗಿತ್ತು.

ಇದನ್ನೂ ಓದಿ: Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಇದೀಗ ಸಸೂನ್ ಜನರಲ್ ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಅಜಯ್ ತಾವರೆ ಮತ್ತು ಅದರ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಶ್ರೀಹರಿ ಹಾಲ್ನೋರ್ ಅವರನ್ನು ಸಹ ಆ ಬಾಲಾಪರಾಧಿಯ ರಕ್ತದ ಮಾದರಿಗಳನ್ನು ಬದಲಾಯಿಸಿದ್ದಕ್ಕೆ ಬಂಧಿಸಲಾಗಿದೆ. ಇದೀಗ ಅಗರ್​ವಾಲ್ ಕುಟುಂಬದ 3 ತಲೆಮಾರಿನವರು ಜೈಲು ಕಂಬಿ ಎಣಿಸುತ್ತಿದ್ದಾರೆ.

ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ಮಾತನಾಡಿ, ಆಸ್ಪತ್ರೆಯು ಅಪರಾಧಿಗಳ ಪಂಚತಾರಾ ಹೋಟೆಲ್‌ ಆಗಿ ಮಾರ್ಪಟ್ಟಿದೆ. “ನಾಗ್ಪುರ, ಜಲಗಾಂವ್ ಮತ್ತು ಪುಣೆಯಲ್ಲಿ ಇಂತಹ ಘಟನೆಗಳು ವರದಿಯಾಗಿವೆ. ಆದರೆ ವಿಶೇಷ ಆರೋಪಿಗಳಿಗೆ ತಕ್ಷಣದ ಜಾಮೀನು ಸಿಗುವಂತೆ ಮಾಡಲು ಸರ್ಕಾರಿ ವ್ಯವಸ್ಥೆಯ ಮೂಲಕ ಪ್ರಯತ್ನಗಳನ್ನು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಂಡಿತ; ಪುಣೆ ಪೋರ್ಷೆ ಅಪಘಾತದ ಬಗ್ಗೆ ಮೌನ ಮುರಿದ ಸಿಎಂ ಏಕನಾಥ್ ಶಿಂಧೆ

ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಹೇಳಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತ ಆರೋಪಿಯ ಜತೆ ಶಾಸಕರೊಬ್ಬರ ಪುತ್ರನೂ ಇದ್ದ ಎಂದು ಅವರು ಆರೋಪಿಸಿದ್ದಾರೆ.

‘‘ಪುಣೆಯಲ್ಲಿ ಅಕ್ರಮ ಡ್ರಗ್ ದಂಧೆ ನಡೆಯುತ್ತಿದೆ. ಪುಣೆ, ನಾಗ್ಪುರದಲ್ಲಿ ಅಕ್ರಮ ಪಬ್ ಗಳ ಹಾವಳಿ ಹೆಚ್ಚಾಗಿದೆ. ಕಾರು ಅಪಘಾತ ಪ್ರಕರಣದ ಬಳಿಕ ಪುಣೆಯ 36 ಅಕ್ರಮ ಪಬ್ ಗಳನ್ನು ನೆಲಸಮಗೊಳಿಸಬೇಕಿತ್ತು. ಗುಜರಾತ್​ನಿಂದ ಮಹಾರಾಷ್ಟ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ತಂದು ಬಿಜೆಪಿ ಯುವಕರನ್ನು ಹಾಳು ಮಾಡಿದೆ.” ಎಂದು ಆರೋಪಿಸಿದ್ದಾರೆ. ಡಿಸಿಎಂ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ