ಲೋಕಸಭೆ ಹಂಗಾಮಿ ಸ್ಪೀಕರ್ ವಿವಾದ: ಕಾಂಗ್ರೆಸ್ ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದ ಕಿರಣ್ ರಿಜಿಜು

ಲೋಕಸಭೆಯ ಹಂಗಾಮಿ ಸ್ಪೀಕರ್ ನೇಮಕವನ್ನು ಕಾಂಗ್ರೆಸ್ "ರಾಜಕೀಯಗೊಳಿಸುತ್ತಿದೆ" ಎಂದು ಆರೋಪಿಸಿದ ರಿಜಿಜು, ಇಲ್ಲಿ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ.  ಸುರೇಶ್ ಅವರು ಎಂಟು ಬಾರಿ ಸಂಸದರಾಗಿದ್ದರೂ, 1998 ಮತ್ತು 2004ರಲ್ಲಿ ಲೋಕಸಭೆಯ ಸದಸ್ಯರಾಗಿಲ್ಲ ಆದ್ದರಿಂದ ಲೋಕಸಭೆಯಲ್ಲಿ ನಿರಂತರ ಅಧಿಕಾರಾವಧಿಯನ್ನು ಹೊಂದಿರಲಿಲ್ಲ ಎಂದು ರಿಜಿಜು ಹೇಳಿದ್ದಾರೆ.

ಲೋಕಸಭೆ ಹಂಗಾಮಿ ಸ್ಪೀಕರ್ ವಿವಾದ: ಕಾಂಗ್ರೆಸ್ ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದ ಕಿರಣ್ ರಿಜಿಜು
ಕಿರಣ್ ರಿಜಿಜು
Follow us
ರಶ್ಮಿ ಕಲ್ಲಕಟ್ಟ
|

Updated on: Jun 21, 2024 | 8:59 PM

ದೆಹಲಿ ಜೂನ್ 21: 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ (pro-tem speaker) ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ (Bhartruhari Mahtab) ಅವರನ್ನು ನೇಮಿಸಿದ ಕುರಿತು ಕಾಂಗ್ರೆಸ್ ಟೀಕೆಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju )ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಏಳನೇ ಬಾರಿಗೆ ಜಯಗಳಿಸಿದ ಮಹತಾಬ್ ಅವರನ್ನು ಜೂನ್ 19 ರಂದು ಭಾರತದ ರಾಷ್ಟ್ರಪತಿಗಳು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದರು. ಆದರೆ, ಎಂಟು ಬಾರಿ ಲೋಕಸಭಾ ಸಂಸದರಾಗಿದ್ದ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಡೆಗಣಿಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರವು ಸಂಸದೀಯ ಮಾನದಂಡಗಳನ್ನು ನಿರ್ನಾಮ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಲೋಕಸಭೆಯ ಹಂಗಾಮಿ ಸ್ಪೀಕರ್ ನೇಮಕವನ್ನು ಕಾಂಗ್ರೆಸ್ “ರಾಜಕೀಯಗೊಳಿಸುತ್ತಿದೆ” ಎಂದು ಆರೋಪಿಸಿದ ರಿಜಿಜು, ಇಲ್ಲಿ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ.  ಸುರೇಶ್ ಅವರು ಎಂಟು ಬಾರಿ ಸಂಸದರಾಗಿದ್ದರೂ, 1998 ಮತ್ತು 2004ರಲ್ಲಿ ಲೋಕಸಭೆಯ ಸದಸ್ಯರಾಗಿಲ್ಲ ಆದ್ದರಿಂದ ಲೋಕಸಭೆಯಲ್ಲಿ ನಿರಂತರ ಅಧಿಕಾರಾವಧಿಯನ್ನು ಹೊಂದಿರಲಿಲ್ಲ ಎಂದು ರಿಜಿಜು ಹೇಳಿದ್ದಾರೆ.

“ನಾವು ಸಂಸತ್ತಿನ ಕಲಾಪಗಳು ಉತ್ತಮ ಟಿಪ್ಪಣಿಯಲ್ಲಿ ಪ್ರಾರಂಭವಾಗುತ್ತವೆ ಎಂದು ನಾವು ನಿರೀಕ್ಷಿಸಿದ್ದೇವೆ. ಆದರೆ, ಸಂಸತ್ತಿನ ಮೊದಲ ಅಧಿವೇಶನ ಪ್ರಾರಂಭವಾಗುವ ಮುಂಚೆಯೇ, ಕಾಂಗ್ರೆಸ್ ಸುಳ್ಳುಗಳನ್ನು ಹರಡಲು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಎಲ್ಲರನ್ನು ದಾರಿ ತಪ್ಪಿಸುತ್ತದೆ” ಎಂದು ರಿಜಿಜು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಹಂಗಾಮಿ ಸ್ಪೀಕರ್ ಹುದ್ದೆಯು “ತುಂಬಾ ತಾತ್ಕಾಲಿಕ” ಮತ್ತು ಹೊಸ ಸ್ಪೀಕರ್ ಆಯ್ಕೆಯವರೆಗೂ ಅವರು ತಮ್ಮ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ರಿಜಿಜು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಪ್ರವಾಹ; ಡಬಲ್ ಇಂಜಿನ್ ಸರ್ಕಾರ ಜನರಿಗೆ ದ್ರೋಹ ಮಾಡಿದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದವರು ಈ ರೀತಿ ಮಾತನಾಡಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ ಎಂದು ಬಹಳ ವಿಷಾದದಿಂದ ಹೇಳಬೇಕಾಗಿದೆ. ಮೊದಮೊದಲು ಹಂಗಾಮಿ ಸ್ಪೀಕರ್ ಬಗ್ಗೆ ವಿವಾದ ಸೃಷ್ಟಿಸಿದರು. ಈ ಹಂಗಾಮಿ ಸ್ಪೀಕರ್ ಹುದ್ದೆ ತೀರಾ ತಾತ್ಕಾಲಿಕ. ನೂತನ ಸ್ಪೀಕರ್ ಆಯ್ಕೆಯಾಗುವವರೆಗೂ ತಮ್ಮ ಪಾತ್ರವನ್ನು ನಿರ್ವಹಿಸುತ್ತಾರೆ. ಎಂದು ರಿಜಿಜು ಹೇಳಿದ್ದಾರೆ.

2004ರಲ್ಲಿ ಒಂಬತ್ತು ಅವಧಿಯ ಸಂಸದ ಜಾರ್ಜ್ ಫರ್ನಾಂಡಿಸ್ ಲೋಕಸಭೆಯ ಸದಸ್ಯರಾಗಿದ್ದಾಗ ಎಂಟು ಅವಧಿಯ ಸದಸ್ಯ ಬಾಳಾಸಾಹೇಬ್ ವಿಖೆ ಪಾಟೀಲ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದಾಗ ಯುಪಿಎ ಸರ್ಕಾರ ಹಿರಿತನವನ್ನು ಕಡೆಗಣಿಸಿದೆ ಎಂದು ಸಚಿವರು ಹಿಂದಿನ ನಿದರ್ಶನಗಳನ್ನು ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್